Hosanagara | ನಿರ್ಮಾಣ ಹಂತದ ಕಳೂರು ಸೊಸೈಟಿ ಸೆಂಟ್ರಿಂಗ್ ಕುಸಿತ – ತಪ್ಪಿದ ಭಾರಿ ಅನಾಹುತ
ಹೊಸನಗರ : ಇಲ್ಲಿನ ಖಾಸಗಿ ಬಸ್ ನಿಲ್ದಾಣ ಸಮೀಪ ನಿರ್ಮಾಣವಾಗುತ್ತಿರುವ ಕಳೂರು ಶ್ರೀ ರಾಮೇಶ್ವರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಕಟ್ಟಡ ನಿರ್ಮಾಣ ಕಾಮಗಾರಿ ವೇಳೆ ಶೀಟ್ ಸೆಂಟ್ರಿಂಗ್ ಆಕಸ್ಮಿಕವಾಗಿ ಕುಸಿದು ಬಿದ್ದಿದ್ದು, ಅಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾರ್ಮಿಕರು ತೀವ್ರವಾಗಿ ಗಾಯಗೊಂಡು ಪ್ರಾಣಾಪಯದಿಂದ ಪಾರಾಗಿರುವ ಘಟನೆ ಸಂಭವಿಸಿದೆ.
ಸ್ಥಳಕ್ಕೆ ಅಗ್ನಿಶಾಮಕದಳ ಸಿಬ್ಬಂದಿಗಳು ಹಾಗೂ ಆರಕ್ಷಕರು ಧಾವಿಸಿದ್ದಾರೆ, ಈ ಅವಘಡದಲ್ಲಿ ಯಾರಿಗೂ ಪ್ರಾಣಹಾನಿ ಆಗಿಲ್ಲ ಎಂದು ಪ್ರಾಥಮಿಕ ವರದಿಗಳು ತಿಳಿಸುತಿದ್ದು ಹೆಚ್ಚಿನ ಮಾಹಿತಿ ಇನ್ನಷ್ಟೇ ಬರಬೇಕಾಗಿದೆ.