Hosanagara | ಪುನೀತ್ ರಾಜ್‍ಕುಮಾರ್ ವೃತ್ತದ 70 ಅಡಿಯ ಧ್ವಜಸ್ಥಂಭ ಕೆಡವಿ ವಿಕೃತ ಮೆರೆದ ಕಿಡಿಗೇಡಿಗಳು | ಸೂಕ್ತ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ

ಪುನೀತ್ ರಾಜ್‍ಕುಮಾರ್ ವೃತ್ತದ 70 ಅಡಿಯ ಧ್ವಜಸ್ಥಂಭ ಕೆಡವಿ ವಿಕೃತ ಮೆರೆದ ಕಿಡಿಗೇಡಿಗಳು | ಸೂಕ್ತ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ

ಹೊಸನಗರ : ಪಟ್ಟಣದ ನಗರ ರಸ್ತೆಯ ರಾಜ್ಯ ಹೆದ್ದಾರಿ 766 ಸಿ ಮೆಸ್ಕಾಂ ಕಛೇರಿ ಎದುರಿನ ಪುನೀತ್ ರಾಜ್ ಕುಮಾರ್ ವೃತ್ತದಲ್ಲಿದ್ದ 70 ಅಡಿ ಎತ್ತರದ ಧ್ವಜಸ್ಥಂಭವನ್ನು ರಾತ್ರೋರಾತ್ರಿ ಕಿಡಿಗೇಡಿಗಳು ಧ್ವಂಸಗೊಳಿಸಿರುವ ಘಟನೆ ನಡೆದಿದೆ.


ಹೊಸನಗರದ ಮಿತ್ರಕೂಟ ಕನ್ನಡ ಸಂಘ ಹಾಗೂ ರಾಜರತ್ನ ಡಾ ಪುನೀತ್ ರಾಜಕುಮಾರ್ ಅಭಿಮಾನಿಗಳ ಸಂಘದವರು ಸ್ವಾತಂತ್ರ್ಯ ಸುವರ್ಣ ಮಹೋತ್ಸವದ ಅಂಗವಾಗಿ 70 ಗಾಡಿ ಎತ್ತರದ ಧ್ವಜಸ್ತಂಭ ನಿರ್ಮಿಸಿದ್ದರು. ರಾಷ್ಟ್ರೀಯ ದಿನಾಚರಣೆಗಳಲ್ಲಿ ರಾಷ್ಟ್ರಧ್ವಜ ಹಾಗೂ ಇತರೆ ದಿನಗಳಲ್ಲಿ ಕನ್ನಡ ಧ್ವಜ ರಾರಾಜಿಸುತ್ತಿದ್ದು ಮಂಗಳವಾರ ರಾತ್ರಿ ತೀವ್ರ ವರ್ಷಧಾರೆ ನಡುವೆಯೂ ಯಾರೋ ಕಿಡಿಗೇಡಿಗಳು ಧ್ವಜಸ್ತoಭವನ್ನು ಧ್ವಂಸಗೊಳಿಸಿರುವ ಘಟನೆ ಸಂಭವಿಸಿದೆ.

ಈ ಘಟನೆ ಇಂದು ಬೆಳಿಗ್ಗೆ ಸಾರ್ವಜನಿಕರ ಗಮನಕ್ಕೆ ಬಂದಿದ್ದು ಇಂತಹ ವಿಕೃತ ಮನಸ್ಸಿನ ಕಿಡಿಗೇಡಿಗಳ ವಿರುದ್ದ ಕೂಡಲೇ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ಚಲನಚಿತ್ರ ಮೇರು ನಟ ಶಿವರಾಜಕುಮಾರ್ ರವರು ಹೊಸನಗರಕ್ಕೆ ಆಗಮಿಸಿದಾಗ ಈ ವೃತ್ತದಲ್ಲಿ ಇಳಿದು ಅಗಲಿದ ಸಹೋದರ ಡಾಕ್ಟರ್ ಪುನೀತ್ ರಾಜಕುಮಾರ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ್ದರು ಈ ಸಂದರ್ಭದಲ್ಲಿ ಈಗಿನ ರಾಜ್ಯದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಶಾಸಕರು ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಬೇಳೂರು ಗೋಪಾಲಕೃಷ್ಣ ರವರು ಉಪಸ್ಥಿತರಿದ್ದರು.

ಹೊಸನಗರದ ರಸ್ತೆ ಅಗಲೀಕರಣ ಸಂಧರ್ಭದಲ್ಲಿ ಪುನೀತ್ ರಾಜ್‍ಕುಮಾರ್ ವೃತ್ತವನ್ನು ಅಭಿವೃದ್ದಿಪಡಿಸುವಂತೆ ಅಧಿಕಾರಿಗಳಿಗೆ ಶಾಸಕರು ಸೂಚಿಸಿದ್ದರು.

ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಗಮನ ಹರಿಸಿ ಧ್ವಜ ಸ್ಥಂಭವನ್ನು ಧ್ವಂಸಗೈದಿರುವ ಕಿಡಿಗೇಡಿಗಳನ್ನು ಬಂಧಿಸಿ ಸೂಕ್ತ ಕ್ರಮ ಕೈಗೊಳ್ಲಾಬೇಕೆಂದು ಸಾರ್ವಜನಿಕರು , ಪುನೀತ್ ರಾಜ್‍ಕುಮಾರ್ ಅಭಿಮಾನಿಗಳು ಒತ್ತಾಯಿಸಿದ್ದಾರೆ.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ

ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ A man identified…

1 day ago

ಚಾನೆಲ್‌ನಲ್ಲಿ ಈಜಲು ತೆರಳಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ನೀರುಪಾಲು

ಚಾನೆಲ್‌ನಲ್ಲಿ ಈಜಲು ತೆರಳಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ನೀರುಪಾಲು SSLC student Krishna drowned while swimming in Tunga Channel…

1 day ago

ಶಿವಮೊಗ್ಗದಲ್ಲಿ ಶಾಂತಿಯುತವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ

ಶಿವಮೊಗ್ಗದಲ್ಲಿ ಶಾಂತಿಯುತವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ Shivamogga witnessed a grand and peaceful Eid Milad procession…

2 days ago

ಹುಂಚ ಆಸ್ಪತ್ರೆಯ ಶವಾಗಾರಕ್ಕೆ ಕೊನೆಗೂ ‘ಮುಹೂರ್ತ’: DHO ಭೇಟಿ, ಬಾಕಿ ಕಾಮಗಾರಿ ಆರಂಭ

ಹುಂಚ ಶವಾಗಾರಕ್ಕೆ ಕೊನೆಗೂ ‘ಮುಹೂರ್ತ’: DHO ಭೇಟಿ, ಬಾಕಿ ಕಾಮಗಾರಿ ಆರಂಭ Postman News report brings action on…

2 days ago

ಸಿದ್ದರಮಟ್ಟಿ ಬಳಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, ₹31,350 ಮೌಲ್ಯದ ಗಾಂಜಾ ಜಪ್ತಿ

ಸಿದ್ದರಮಟ್ಟಿ ಬಳಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, ₹31,350 ಮೌಲ್ಯದ ಗಾಂಜಾ ಜಪ್ತಿ Two accused persons were…

2 days ago

ಬೀದಿ ನಾಯಿಗಳ ದಾಳಿಗೆ ಆರು ಕುರಿ ಮರಿಗಳು ಸಾವು

ಬೀದಿ ನಾಯಿಗಳ ದಾಳಿ: ಆರು ಕುರಿಗಳು ಸಾವು Six sheep belonging to a resident of Sagar were…

2 days ago