NEET ಪರೀಕ್ಷೆಯಲ್ಲಿ ಅದ್ವಿತೀಯ ಸಾಧನೆಗೈದ ಶಿಡ್ಲಾಪುರದ ಯುವಕ

NEET ಪರೀಕ್ಷೆಯಲ್ಲಿ ಅದ್ವಿತೀಯ ಸಾಧನೆಗೈದ ಶಿಡ್ಲಾಪುರದ ಯುವಕ

ಬಡ ಕುಟುಂಬದಲ್ಲಿ ಜನಿಸಿ NEET ಪರೀಕ್ಷೆಯಲ್ಲಿ 720ಕ್ಕೆ 595 ಅಂಕ ಪಡೆಯುವ ಮೂಲಕ ಅದ್ವಿತೀಯ ಸಾಧನೆಗೈದ ರಾಜು ಓಲೇಕಾರ್ ಗೆ ಗ್ರಾಮಸ್ಥರು ಹಾಗೂ ವಿವಿಧ ಪಕ್ಷಗಳ ಮುಖಂಡರು ಸನ್ಮಾನಿಸಿ ಗೌರವಿಸಿದರು.


ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಶಿಡ್ಲಾಪುರ್ ಗ್ರಾಮದ ಯುವಕನ ಸಾಧನೆ. NEET ಪರೀಕ್ಷೆಯಲ್ಲಿ  720ಕ್ಕೆ 595 ಅಂಕ ಪಡೆದು ಗ್ರಾಮಕ್ಕೆ ಹಿರಿಮೆಯನ್ನು ತಂದಿದ್ದಾನೆ.

ಯುವಕನಿಗೆ ಶಿಗ್ಗಾವ್ ಮತ್ತು ಸವಣೂರು ಬಿಜೆಪಿ ಟಿಕೆಟ್ ಆಕಾಂಕ್ಷಿಯಾದ ಶಶಿಧರ್ ಎಲ್ಲಿಗಾರ ಅವರು ಯುವಕನ ಮನೆಗೆ ತೆರಳಿ ಯುವಕನಿಗೆ ಗೌರವ ದಿಂದ ಸನ್ಮಾನಿಸಿ ಸಿಹಿ ಹಂಚಿದರು.

ನಂತರ ಮಾತನಾಡಿದ ಅವರು ಮಕ್ಕಳಿಗೆ ತನ್ನ ಅಭ್ಯಾಸದ ಕಡೆ ಮತ್ತು ತನ್ನ ಮುಂದಿನ ಜೀವನ,ತಂದೆ ತಾಯಿಯರಿಗೆ ಹೆಮ್ಮೆಯತರುವ ಮಕ್ಕಳಾಗಬೇಕು. ಕನ್ನಡ ಶಾಲೆಯಲ್ಲಿ ಕಲಿತ  ರಾಜು ಓಲೆಕಾರ್ ಅವರು ಉದಾಹರಣೆಯಾಗಿದ್ದಾರೆ. ರಾಜು ಓಲೆಕಾರ್ ಬಡತನದಲ್ಲಿ ಓದಿ ಉತ್ತಮ ಸಾಧನೆ ಮಾಡಿದ್ದಾನೆ ಇಂತಹ ಯುವಕರೇ ಎಲ್ಲರಿಗೂ ಸ್ಪೂರ್ತಿಯಾಗಬೇಕು ಎಂದರು.


ರಾಜು ಓಲೆಕಾರ್ ಅವರ ತಾಯಿ ರಂಗವ್ವ  ಓಲೇಕಾರ್ ಮಾತನಾಡಿ ನನ್ನ ಮಗನ ಶಿಕ್ಷಣಕ್ಕೆ ಹಣದ ಕೊರತೆಯಾದ ಕಾಲದಲ್ಲಿ ಅವನ ಶಿಕ್ಷಣ ನಿಲ್ಲಿಸಬೇಕೆಂದು ಯೋಚನೆ ಕೂಡ ಮಾಡಿದ್ದೆ. ಆದರೆ ಅವರ ಶಿಕ್ಷಕರು ಹಠ ಹಿಡಿದು ಮನೆಗೆ ಬಂದು ನಿಮ್ಮ ಮಗನ ಶಿಕ್ಷಣದಲ್ಲಿ ಬಹಳಷ್ಟು ಜಾಣ ಇದ್ದಾನೆ ಅವನನ್ನು ಓಧಿಸಿ ಎಂದು ಅಲವತ್ತುಕೊಂಡಿದ್ದರು ಹಾಗಾಗಿ ಸಾಲ ಸೋಲ ಮಾಡಿ ಅವನನ್ನು ಶಾಲೆಗೆ ಕಳುಹಿಸಿದ್ದೆ ಒಂದು ವೇಳೆ ಅವನನ್ನು ಶಾಲೆಗೆ ಕಳುಹಿಸದಿದ್ದರೆ ನನ್ನ ಮಗನ ಜೀವನವನ್ನು ನಾನೆ ಹಾಳು ಮಾಡಿದ ಹಾಗೇ ಆಗುತಿತ್ತು ಎಂದು ಹೇಳಿ
ತಮ್ಮ ಸಂತೋಷದ ಬಾಷ್ಪ ಸುರಿಸಿ ಅಳಲು ತೋಡಿಕೊಂಡರು.

ಈ ಸಂಧರ್ಭದಲ್ಲಿ ಗ್ರಾಮಸ್ಥರು ತಮ್ಮ ಅನಿಸಿಕೆ ಹಂಚಿಕೊಂಡರು.

ವರದಿ : ನಿಂಗರಾಜ್ ಕುಡಲ್
ಹಾವೇರಿ ಜಿಲ್ಲೆ ( ಬಂಕಾಪುರ್ )
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಸಚಿವ ಸಂಪುಟದ ಖಾತೆ ಹಂಚಿಕೆ ಫೈನಲ್: ಹಿರಿಯ ಸಚಿವರ ಖಾತೆಗಳಲ್ಲೂ ಭಾರೀ ಬದಲಾವಣೆ!10 ದಿನಗಳ ಕುತೂಹಲಕ್ಕೆ ತೆರೆ – ಇಲ್ಲಿದೆ ಸಂಪೂರ್ಣ ವಿವರ!

ಸಚಿವ ಸಂಪುಟದ ಖಾತೆ ಹಂಚಿಕೆ ಫೈನಲ್: ಹಿರಿಯ ಸಚಿವರ ಖಾತೆಗಳಲ್ಲೂ ಭಾರೀ ಬದಲಾವಣೆ!10 ದಿನಗಳ ಕುತೂಹಲಕ್ಕೆ ತೆರೆ - ಇಲ್ಲಿದೆ…

10 hours ago

ರಸ್ತೆಯಲ್ಲೇ ಭತ್ತ ನಾಟಿ ಮಾಡಿ ಗ್ರಾಮಸ್ಥರ ಪ್ರತಿಭಟನೆ; ಸಂಪರ್ಕ ರಸ್ತೆ ದುರಸ್ತಿಗೆ ಆಗ್ರಹ

ರಸ್ತೆಯಲ್ಲೇ ಭತ್ತ ನಾಟಿ ಮಾಡಿ ಗ್ರಾಮಸ್ಥರ ಪ್ರತಿಭಟನೆ; ಹೆದ್ದಾರಿಪುರ ಸಂಪರ್ಕ ರಸ್ತೆ ದುರಸ್ತಿಗೆ ಆಗ್ರಹ Villagers protest by planting…

11 hours ago

ಉಳ್ಳೂರು ಕೆರೆ ಬಳಿ ಮರಕ್ಕೆ ಢಿಕ್ಕಿ ಹೊಡೆದ ಕಂಟೇನರ್ ಲಾರಿ

ಉಳ್ಳೂರು ಕೆರೆ ಬಳಿ ಮರಕ್ಕೆ ಢಿಕ್ಕಿ ಹೊಡೆದ ಕಂಟೇನರ್ ಲಾರಿ A container lorry lost control and collided…

13 hours ago

ರಾಜ್ಯಾದ್ಯಂತ ಗುಟ್ಕಾ, ಪಾನ್ ಮಸಾಲಾ ಸೇರಿದಂತೆ ತಂಬಾಕು–ನಿಕೋಟಿನ್ ಉತ್ಪನ್ನಗಳ ಸಂಪೂರ್ಣ ನಿಷೇಧ

ರಾಜ್ಯಾದ್ಯಂತ ಗುಟ್ಕಾ, ಪಾನ್ ಮಸಾಲಾ ಸೇರಿದಂತೆ ತಂಬಾಕು–ನಿಕೋಟಿನ್ ಉತ್ಪನ್ನಗಳ ಸಂಪೂರ್ಣ ನಿಷೇಧ Karnataka government bans manufacture, storage, transport,…

13 hours ago

ಕೆಂಚನಾಲ ಮಾರಿಕಾಂಬಾ ಜಾತ್ರಾ ಮಹೋತ್ಸವ: ಭಕ್ತಿಭಾವದ ಸಾಗರದಲ್ಲಿ ಮಿಂದೆದ್ದ ಭಕ್ತ ಸಮೂಹ

ಕೆಂಚನಾಲ ಮಾರಿಕಾಂಬಾ ಜಾತ್ರಾ ಮಹೋತ್ಸವ: ಭಕ್ತಿಭಾವದ ಸಾಗರದಲ್ಲಿ ಮಿಂದೆದ್ದ ಭಕ್ತ ಸಮೂಹ Kenchanaala Marikamba Jatre was celebrated with…

1 day ago

ಹಸೆಮಣೆಗಿಂತ ವೃತ್ತಿಜೀವನಕ್ಕೆ ಆದ್ಯತೆ: ಬದಲಾಗುತ್ತಿರುವ ಭಾರತೀಯ ಮಹಿಳೆಯರ ಮನಸ್ಥಿತಿ!

ಹಸೆಮಣೆಗಿಂತ ವೃತ್ತಿಜೀವನಕ್ಕೆ ಆದ್ಯತೆ: ಬದಲಾಗುತ್ತಿರುವ ಭಾರತೀಯ ಮಹಿಳೆಯರ ಮನಸ್ಥಿತಿ! Changing trends among Indian women show a growing…

2 days ago