NEET UG RESULT | ಮೊದಲ ರ‍್ಯಾಂಕ್‌ ನ 100 ವಿದ್ಯಾರ್ಥಿಗಳಲ್ಲಿ ಕರ್ನಾಟಕದ ಆರು ವಿದ್ಯಾರ್ಥಿಗಳು ಟಾಪರ್ಸ್

NEET UG RESULT | ಮೊದಲ ರ‍್ಯಾಂಕ್‌ ನ 100 ವಿದ್ಯಾರ್ಥಿಗಳಲ್ಲಿ ಕರ್ನಾಟಕದ ಆರು ವಿದ್ಯಾರ್ಥಿಗಳು ಟಾಪರ್ಸ್

ಕಳೆದ ತಿಂಗಳು ಮೇ 5ರಂದು ನಡೆದಿದ್ದ ನೀಟ್‌ ಪರೀಕ್ಷೆಯ (NEET UG 2024) ಫಲಿತಾಂಶ ಜೂ.4ರಂದು ಪ್ರಕಟವಾಗಿದೆ.

ವೈದ್ಯಕೀಯ ಕೋರ್ಸ್‌ಗಳ ಪ್ರವೇಶಾತಿಗಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ನಡೆಸಿದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯಲ್ಲಿ ದೇಶದಲ್ಲಿ ಮೊದಲ ರ‍್ಯಾಂಕ್‌ ಪಡೆದ ಟಾಪ್ 100 ವಿದ್ಯಾರ್ಥಿಗಳ ಪೈಕಿ 6 ವಿದ್ಯಾರ್ಥಿಗಳು ಮೊದಲ ಸ್ಥಾನವನ್ನು ಪಡೆದಿದ್ದಾರೆ.

ಕರ್ನಾಟಕದ ವಿ.ಕಲ್ಯಾಣ್, ಶ್ಯಾಮ್ ಶ್ರೇಯಸ್ ಜೋಸೆಫ್‌, ಅರ್ಜುನ್ ಕಿಶೋರ್, ಪದ್ಮನಾಭ್ ಮೆನನ್, ಪ್ರಜ್ಞಾ ಪಿ.ಶೆಟ್ಟಿ, ಖುಷಿ ಮಗನೂರ್ ಎಂಬ ವಿದ್ಯಾರ್ಥಿಗಳು ಶೇ.99.98 ಅಂಕಗಳನ್ನು ಗಳಿಸುವ ಮೂಲಕ ಮೊದಲ ರ‍್ಯಾಂಕ್‌ ಪಡೆದಿದ್ದಾರೆ.

ದೇಶದಾದ್ಯಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಾತಿಗಾಗಿ ನಡೆದಿದ್ದ ನೀಟ್ ಪರೀಕ್ಷೆಯ ಫಲಿತಾಂಶವು ಪ್ರಕಟಗೊಂಡಿದ್ದು, ಉತ್ತರ ಪತ್ರಿಕೆಗಳ ಮರುಪರಿಶೀಲನೆ ಅಥವಾ ಮರುಮೌಲ್ಯಮಾಪನಕ್ಕೆ ಅವಕಾಶವಿಲ್ಲ ಎನ್ನಲಾಗಿದೆ. ಇನ್ನೂ ನೀಟ್‌ ಪರೀಕ್ಷೆಯ ತಾತ್ಕಾಲಿಕ ಕೀ ಉತ್ತರಗಳನ್ನು ಮೇ 29 ರಂದು ಬಿಡುಗಡೆ ಮಾಡಲಾಗಿತ್ತು. ಇದಕ್ಕೆ ಆಕ್ಷೇಪಣೆ ಸಲ್ಲಿಸಿದ ಬಳಿಕ ಅಂತಿಮ ಕೀ ಉತ್ತರಗಳನ್ನು ಜೂನ್ 3 ರಂದು ಬಿಡುಗಡೆ ಮಾಡಲಾಗಿತ್ತು. ಈಗಾಗಲೇ ಬಿಡುಗಡೆಯಾಗಿರುವ ಅಂತಿಮ ಕೀ ಉತ್ತರಗಳ ಆಧಾರದ ಮೇಲೆ ನೀಟ್ ಯುಜಿ 2024ರ ಫಲಿತಾಂಶವನ್ನು ಪ್ರಕಟಿಸಲಾಗಿದೆ.

ರಿಸಲ್ಟ್ ಚೆಕ್ ಮಾಡುವುದೇಗೆ?

ಅಧಿಕೃತ ವೆಬ್‌ಸೈಟ್‌ exams.nta.ac.in/NEET ಗೆ ಭೇಟಿ ನೀಡಿ.

ಮುಖಪುಟದಲ್ಲಿ ಲಭ್ಯವಿರುವ NEET UG ಫಲಿತಾಂಶ 2024 ಲಿಂಕ್ ಅನ್ನು ಕ್ಲಿಕ್ ಮಾಡಿ.

ಲಾಗಿನ್ ವಿವರಗಳನ್ನು ನಮೂದಿಸಿ ಕ್ಲಿಕ್ ಮಾಡಿ.

ನಿಮ್ಮ ಫಲಿತಾಂಶ ಪರದೆಯ ಮೇಲೆ ಕಾಣಬಹುದು.

ನಂತರ ಫಲಿತಾಂಶವನ್ನು ಪರಿಶೀಲಿಸಿ ಮತ್ತು ಅದನ್ನು ಡೌನ್‌ಲೋಡ್ ಮಾಡಿಕೊಳ್ಳಿ.

ಅಂದಹಾಗೇ, ದೇಶಾದ್ಯಂತ 571 ನಗರಗಳಲ್ಲಿ ಹಾಗೂ ಹೊರಗಿನ 14 ನಗರಗಳು ಸೇರಿದಂತೆ 4750 ವಿವಿಧ ಕೇಂದ್ರಗಳಲ್ಲಿ 05 ಮೇ 2024 ರಂದು ನೀಟ್‌ ಯುಜಿ ಪರೀಕ್ಷೆಯನ್ನು ನಡೆಸಲಾಗಿತ್ತು. ಪರೀಕ್ಷೆಯನ್ನು 13 ಭಾಷೆಗಳಲ್ಲಿ (ಅಸ್ಸಾಮಿ, ಬಂಗಾಳಿ, ಇಂಗ್ಲಿಷ್, ಗುಜರಾತಿ, ಹಿಂದಿ, ಕನ್ನಡ, ಮಲಯಾಳಂ, ಮರಾಠಿ, ಒಡಿಯಾ, ಪಂಜಾಬಿ, ತಮಿಳು, ತೆಲುಗು, ಮತ್ತು ಉರ್ದು) ನಡೆಸಲಾಗಿತ್ತು. ನೀಟ್‌ ಪರೀಕ್ಷೆಗೆ 24,06,079 ಅಭ್ಯರ್ಥಿಗಳ ನೋಂದಾಯಿಸಿಕೊಂಡಿದ್ದರು. ಅದರಲ್ಲಿ 23,33,297 ಪರೀಕ್ಷೆ ಹಾಜರಾಗಿದ್ದು, 72782 ಗೈರು ಹಾಜರಾಗಿದ್ದರು. ಇದರಲ್ಲಿ ಬಾಲಕರು 10,29,154 ಹಾಗೂ ಬಾಲಕಿಯರು 13,76,831, ತೃತೀಯ ಲಿಂಗಿಗಳು 18 ಮಂದಿ ಪರೀಕ್ಷೆಯನ್ನು ಬರೆದಿದ್ದರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕೋಡೂರಿನಲ್ಲಿ ಅಗ್ನಿ ಅವಘಡ: ಸರ್ವಸ್ವ ಕಳೆದುಕೊಂಡ ಕಾರ್ಮಿಕನಿಗೆ ಕಟ್ಟಡ ಕಾರ್ಮಿಕರ ಸಂಘದ ಆಸರೆ

ಕೋಡೂರಿನಲ್ಲಿ ಅಗ್ನಿ ಅವಘಡ: ಸರ್ವಸ್ವ ಕಳೆದುಕೊಂಡ ಕಾರ್ಮಿಕನಿಗೆ ಕಟ್ಟಡ ಕಾರ್ಮಿಕರ ಸಂಘದ ಆಸರೆ A fire caused by a…

7 hours ago

ಅರಸಾಳಿನಿಂದ ವಿಶ್ವ ವೇದಿಕೆಗೆ; ಕವನಶ್ರೀಗೆ ಸತತ ಮೂರನೇ ಗಿನ್ನಿಸ್ ಸಾಧನೆ

ಅರಸಾಳಿನಿಂದ ವಿಶ್ವ ವೇದಿಕೆಗೆ; ಕವನಶ್ರೀಗೆ ಸತತ ಮೂರನೇ ಗಿನ್ನಿಸ್ ಸಾಧನೆ Arasalu's Kavanasree H.M. earns two more Guinness…

8 hours ago

ಸರ್ಕಾರಿ ಜಾಗದಲ್ಲಿ ಖಾಸಗಿ ಬೇಲಿ; ಕಂದಾಯ ಅಧಿಕಾರಿಗಳಿಂದ ತೆರವು – ಹಕ್ಕುಪತ್ರ–9/11 ದಾಖಲೆ ಕುರಿತು ವಾಗ್ವಾದ

ರಿಪ್ಪನ್ ಪೇಟೆಯಲ್ಲಿ ಸರ್ಕಾರಿ ಜಾಗದ ಬೇಲಿ ತೆರವು; ಹಕ್ಕುಪತ್ರ–9/11 ದಾಖಲೆ ಕುರಿತು ವಾಗ್ವಾದ Revenue officials removed a fence…

9 hours ago

ರಿಪ್ಪನ್‌ಪೇಟೆಯಲ್ಲಿ ಮೋದಿ ಜನ್ಮದಿನಾಚರಣೆ : ವರಸಿದ್ದಿವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ

ರಿಪ್ಪನ್‌ಪೇಟೆಯಲ್ಲಿ ಮೋದಿ ಜನ್ಮದಿನಾಚರಣೆ : ವರಸಿದ್ದಿವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ Special pooja was offered at Varasiddhi…

1 day ago

ಪ್ರಧಾನಿ ಮೋದಿ ಜನ್ಮದಿನ: ಶಿವಮೊಗ್ಗದಲ್ಲಿ ‘ಸೇವಾ ಸಂಕಲ್ಪ ಅಭಿಯಾನ’ಕ್ಕೆ ಚಾಲನೆ

ಪ್ರಧಾನಿ ಮೋದಿ ಜನ್ಮದಿನ: ಶಿವಮೊಗ್ಗದಲ್ಲಿ ‘ಸೇವಾ ಸಂಕಲ್ಪ ಅಭಿಯಾನ’ಕ್ಕೆ ಚಾಲನೆ BJP launches a month-long Seva Sankalpa Abhiyan…

1 day ago

ಮೋದಿ ಹುಟ್ಟುಹಬ್ಬ ‘ನಿರುದ್ಯೋಗಿಗಳ ದಿನ’ವಾಗಿ ಆಚರಣೆ; ಯುವ ಕಾಂಗ್ರೆಸ್ ಪ್ರತಿಭಟನೆ

ಮೋದಿ ಹುಟ್ಟುಹಬ್ಬ ‘ನಿರುದ್ಯೋಗಿಗಳ ದಿನ’ವಾಗಿ ಆಚರಣೆ; ಯುವ ಕಾಂಗ್ರೆಸ್ ಪ್ರತಿಭಟನೆ Youth Congress and NSUI workers in Shivamogga…

1 day ago