Ripponpete | ಸಾಗರ ರಸ್ತೆಯಲ್ಲಿ ಉರಿಯದ ಬೀದಿ ದೀಪ, ಎರಡು ತಿಂಗಳಾದರೂ ಹರಿಯದ ನೀರು, ಸಂಕಷ್ಟದಲ್ಲಿ ನಾಗರೀಕರು

Ripponpete | ಸಾಗರ ರಸ್ತೆಯಲ್ಲಿ ಉರಿಯದ ಬೀದಿ ದೀಪ, ಎರಡು ತಿಂಗಳಾದರೂ ಹರಿಯದ ನೀರು, ಸಂಕಷ್ಟದಲ್ಲಿ ನಾಗರೀಕರು ರಿಪ್ಪನ್‌ಪೇಟೆ : ಇಲ್ಲಿನ ಸಾಗರ ರಸ್ತೆಯಲ್ಲಿ ರಸ್ತೆ ಅಗಲೀಕರಣ ನೆಪದಲ್ಲಿ ಕಳೆದ ನಾಲ್ಕು ಐದು ತಿಂಗಳಿಂದ ಕುಡಿಯುವ ನೀರಿನ ಪೈಪ್‌ಲೈನ್ ಹಾಳಾಗಿ ಸಾರ್ವಜನಿಕರಿಗೆ ಶುದ್ದ ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿದೆ ಇನ್ನು ಇದರೊಂದಿಗೆ  ವಿದ್ಯುತ್ ಕಂಬಗಳ ಸ್ಥಳಾಂತರವಾದರೂ ಕೂಡಾ ಕಂಬಕ್ಕೆ ಬೀದಿ ದೀಪ ಅಳವಡಿಸದೇ ಕತ್ತಲೆಯಲ್ಲಿ ಕಾಲಕಳೆಯುವಂತಾಗಿದೆ ಎಂದು ಸಾಗರ ರಸ್ತೆಯ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಸಾಗರ…

Read More

Hosanagara | ಯಕ್ಷಗಾನ ಕಲೆಯನ್ನು ಉಳಿಸಿ ,ಬೆಳೆಸುವ ಜವಬ್ದಾರಿ ನಮ್ಮ ಮೇಲಿದೆ – ಪಟ್ಲ ಸತೀಶ್ | ಉಚಿತ ಯಕ್ಷಗಾನ ತರಬೇತಿ ಕಾರ್ಯಗಾರ

Hosanagara | ಯಕ್ಷಗಾನ ಕಲೆಯನ್ನು ಉಳಿಸಿ ,ಬೆಳೆಸುವ ಜವಬ್ದಾರಿ ನಮ್ಮ ಮೇಲಿದೆ – ಪಟ್ಲ ಸತೀಶ್  ಸಾಂಸ್ಕೃತಿಕ ಲೋಕಕ್ಕೆ ಅದ್ವಿತೀಯ ಕೊಡುಗೆ ನೀಡಿರುವ ಹೆಮ್ಮೆಯ ಯಕ್ಷಗಾನ ಕಲೆಯನ್ನು ಉಳಿಸಿ ಬೆಳೆಸುವ ಮಹತ್ವದ ಜವಾಬ್ದಾರಿ ನಮ್ಮ ಮೇಲಿದ್ದು, ಈ ನಿಟ್ಟಿನಲ್ಲಿ ಶಾಲೆಯ ಮಕ್ಕಳಿಗೆ ಯಕ್ಷ ಶಿಕ್ಷಣ ನೀಡಲು ಯಕ್ಷದೃವ ಪಟ್ಲ ಟ್ರಸ್ಟ್ ಫೌಂಡೇಶನ್ ಮುಂದಾಗಿದೆ ಎಂದು ಟ್ರಸ್ಟ್ ಸ್ಥಾಪಕ, ಪ್ರಸಿದ್ಧ ಭಾಗವತ ಪಟ್ಲ ಸತೀಶ್ ಶೆಟ್ಟಿ ಹೇಳಿದರು. ಪಟ್ಟಣದ ಆರ್ಯಈಡಿಗ ಸಭಾಭವನದಲ್ಲಿ ಯಕ್ಷಧ್ರುವ ಯಕ್ಷ ಶಿಕ್ಷಣ ಯೋಜನೆಯಡಿಯಲ್ಲಿ ನಾಟ್ಯ…

Read More

ಕೊಲೆ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟ | Crime News

Shivamogga | ಕೊಲೆ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟ  ಕೊಲೆ ಪ್ರಕರಣವೊಂದರಲ್ಲಿ ಇಬ್ಬರು ಆರೋಪಿಗಳಿಗೆ ತಲಾ 50 ಸಾವಿರ ರೂ. ದಂಡ ಮತ್ತು ಜೀವಾವಧಿ ಶಿಕ್ಷೆ ನೀಡಿ ಇಲ್ಲಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ. 2021 ರಲ್ಲಿ ನಡೆದ ಕೊಲೆ ಪ್ರಕರಣದಲ್ಲಿ ವಾದಿ ಎ‌ ಹುದಾ ಬಡಾವಣೆಯಲ್ಲಿ ಮೊಹಮದ್ ಜೈದಾನ್ ಎಂಬಾತನನ್ನು ಕೊಲೆ ಮಾಡಲಾಗಿತ್ತು.  ಘನ ನ್ಯಾಯಾಲಯದಲ್ಲಿ ಸರ್ಕಾರದ ಪರವಾಗಿ ಪಿ. ಓ. ಪುಷ್ಪಾ, ಸರ್ಕಾರಿ ಅಭಿಯೋಜಕರು, ಪ್ರಕರಣದ ವಾದ ಮಂಡಿಸಿದ್ದು,…

Read More

ಅಂಗನವಾಡಿ ಕಾರ್ಯಕರ್ತೆಯರನ್ನು ಖಾಯಂಗೊಳಿಸುವುದೇ ಕಾಂಗ್ರೆಸ್ ಸರ್ಕಾರದ 6ನೇ ಗ್ಯಾರಂಟಿ – ಶಾಸಕ ಬೇಳೂರು ಗೋಪಾಲಕೃಷ್ಣ

ಅಂಗನವಾಡಿ ಕಾರ್ಯಕರ್ತೆಯರನ್ನು ಖಾಯಂಗೊಳಿಸುವುದೇ ಕಾಂಗ್ರೆಸ್ ಸರ್ಕಾರದ 6ನೇ ಗ್ಯಾರಂಟಿ – ಶಾಸಕ ಬೇಳೂರು ಗೋಪಾಲಕೃಷ್ಣ ರಾಜ್ಯದ ಅಂಗನವಾಡಿ ಕಾರ್ಯಕರ್ತೆಯರನ್ನು ಖಾಯಂಗೊಳಿಸೋ ಸಂಬಂಧ ಈಗಾಗಲೇ ಸಿಎಂ ಸಿದ್ಧರಾಮಯ್ಯ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಚರ್ಚೆ ನಡೆಸಿದ್ದಾರೆ. ಅಂಗನವಾಡಿ ಕಾರ್ಯಕರ್ತೆಯರನ್ನು ಖಾಯಂಗೊಳಿಸೋದು ಕಾಂಗ್ರೆಸ್ ಸರ್ಕಾರದ 6ನೇ ಗ್ಯಾರಂಟಿಯಾಗಿದೆ ಅಂತ ಶಾಸಕ ಬೇಳೂರು ಗೋಪಾಲಕೃಷ್ಣ ಭರವಸೆ ನೀಡಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ನಗರದ ನೆಹರು ಮೈದಾನದಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್ ಪೋನ್ ವಿತರಿಸಿದ ಬಳಿಕ ಮಾತನಾಡಿದಂತ ಅವರು, ನಮ್ಮ ಸರ್ಕಾರಕ್ಕೆ ನಿಮ್ಮ…

Read More

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (25-06-2024) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ…

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (25-06-2024) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ… ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 25/06/24 ರಂದು ಬೆಳಿಗ್ಗೆ 10-00 ರಿಂದ ಸಂಜೆ 05.00 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ. 110/11 ಕೆವಿ ಮಾರ್ಗದ ತುರ್ತು ಕಾಮಗಾರಿಯ ನಿಮಿತ್ತ  ನಾಳೆ ಬೆಳಿಗ್ಗೆ 10-00 ರಿಂದ ಸಂಜೆ 05-00 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು ರಿಪ್ಪನ್‌ಪೇಟೆ ಮೆಸ್ಕಾಂ ಇಲಾಖೆಯ…

Read More

ಗರ್ತಿಕೆರೆಯಲ್ಲಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು | ಅಪಘಾತದ ಸಿಸಿಟಿವಿ ವೀಡಿಯೋ ವೈರಲ್ | Accident

ಗರ್ತಿಕೆರೆಯಲ್ಲಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು | ಅಪಘಾತದ ಸಿಸಿಟಿವಿ ವೀಡಿಯೋ ವೈರಲ್ ನಿಯಂತ್ರಣ ತಪ್ಪಿದ ಮಾರುತಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿರುವ ಘಟನೆ ರಿಪ್ಪನ್‌ಪೇಟೆ ಸಮೀಪದ ಗರ್ತಿಕೆರೆಯಲ್ಲಿ ನಡೆದಿದೆ. ಮಾರುತಿ ಕಾರಿನಲ್ಲಿ ಶಿವಮೊಗ್ಗ ಮೂಲದ ಮಹಿಳೆ ಕೋಣಂದೂರಿಗೆ ತೆರಳುತ್ತಿರುವಾಗ ಗರ್ತಿಕೆರೆ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಿಯಂತ್ರಣ ತಪ್ಪಿ ಕಾರು ಅಪಘಾತಕ್ಕೀಡಾಗಿದೆ. ಈ ಅಪಘಾತದ ದೃಶ್ಯಾವಳಿ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಇದೀಗ ವೈರಲ್ ಆಗಿದೆ. ಅದೃಷ್ಟವಶಾತ್ ಯಾರಿಗೂ ಯಾವುದೇ ಗಂಭೀರ ಗಾಯಗಳಾಗಿರುವುದಿಲ್ಲ ಎಂದು ತಿಳಿದುಬಂದಿದೆ. ರಿಪ್ಪನ್‌ಪೇಟೆ ಪೊಲೀಸ್ ಠಾಣೆ…

Read More

ಸತತ 20 ಗಂಟೆಗಳ ಕಾರ್ಯಾಚರಣೆಯ ನಂತರ ಅಬ್ಬಿ ಫಾಲ್ಸ್ ನಲ್ಲಿ ನೀರು ಪಾಲಾಗಿದ್ದ ಯುವಕನ ಮೃತ ದೇಹ ಪತ್ತೆ

ಸತತ 20 ಗಂಟೆಗಳ ಕಾರ್ಯಾಚರಣೆಯ ನಂತರ  ಅಬ್ಬಿ ಫಾಲ್ಸ್ ನಲ್ಲಿ ನೀರು ಪಾಲಾಗಿದ್ದ ಯುವಕನ ಮೃತ ದೇಹ ಪತ್ತೆ ಹೊಸನಗರ ತಾಲೂಕಿನ ಯಡೂರು ಸಮೀಪದ ಅಬ್ಬಿ ಪಾಲ್ಸ್ ನೀರು ಪಾಲಾಗಿದ್ದ ಯುವಕನ ಮೃತ ದೇಹ ಸತತ 20 ಗಂಟೆ ಕಾರ್ಯಾಚರಣೆಯ ನಂತರ ಪತ್ತೆಯಾಗಿದೆ. ಮಳೆ,ಗಾಳಿ ಹಾಗೂ ನೀರಿನ ರಭಸ ನಡುವೆ 26 ವರ್ಷದ ವಿನೋದ್‌ರ ಮೃತದೇಹಕ್ಕಾಗಿ ತೀವ್ರ ಹುಡುಕಾಟ ನಡೆಸಲಾಗಿತ್ತು. ಸ್ಥಳೀಯರು , ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. ಇಂದು ಬೆಳಗ್ಗೆ ವಿನೋದ್ ಮೃತ…

Read More

ರಿಪ್ಪನ್‌ಪೇಟೆಯ ಹಿರಿಯ ವೈದ್ಯ ಹಮೀದ್ ಡಾಕ್ಟರ್ ಇನ್ನಿಲ್ಲ | hameed doctor passed away

ರಿಪ್ಪನ್‌ಪೇಟೆಯ ಹಿರಿಯ ವೈದ್ಯ ಹಮೀದ್ ಡಾಕ್ಟರ್ ಇನ್ನಿಲ್ಲ |  ರಿಪ್ಪನ್‌ಪೇಟೆ : ಪಟ್ಟಣದ ಹೆಸರಾಂತ ಮದನಿ ಕ್ಲಿನಿಕ್ ನ ಹಿರಿಯ ವೈದ್ಯ ಹಮೀದ್ ಡಾಕ್ಟರ್(90) ಇಂದು ಬೆಳಿಗ್ಗೆ ತಮ್ಮ ಸ್ವಗೃಹದಲ್ಲಿ ವಯೋಸಹಜ ನಿಧನ ಹೊಂದಿದರು…ಅವರಿಗೆ 90 ವರ್ಷ ವಯಸ್ಸಾಗಿತ್ತು…!! ರಿಪ್ಪನ್‌ಪೇಟೆ ಹಾಗೂ ಸುತ್ತಮುತ್ತಲಿನ ಜನರಿಗೆ ಬಹು ಪರಿಚಿತರಾದ ಹಾಗೂ ಅನೇಕ ರೋಗಿಗಳ ಪಾಲಿನ ಆಪದ್ಬಾಂಧವರಾಗಿದ್ದ ಹಮೀದ್ ಡಾಕ್ಟರ್ ಇಂದು ಬೆಳಿಗ್ಗೆ ಪಟ್ಟಣದ ವಿನಾಯಕ ವೃತ್ತದಲ್ಲಿರುವ ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ.  ಸದಾ ಬಡವರ ಬಗ್ಗೆ ಅಪಾರ ಕಾಳಜಿ ಹೊಂದಿದ್ದ…

Read More

Sagara | ಕಾಲೇಜು ಮುಗಿಸಿ ಮನೆಗೆ ಹಿಂದಿರುಗುತಿದ್ದ ವಿದ್ಯಾರ್ಥಿನಿಯ ಸ್ಕೂಟಿಗೆ ಹಿಂಬದಿಯಿಂದ ಕಾರು ಡಿಕ್ಕಿ – ಯುವತಿ ಸಾವು

Sagara | ಕಾಲೇಜು ಮುಗಿಸಿ ಮನೆಗೆ ಹಿಂದಿರುಗುತಿದ್ದ ವಿದ್ಯಾರ್ಥಿನಿಯ ಸ್ಕೂಟಿಗೆ ಹಿಂಬದಿಯಿಂದ ಕಾರು ಡಿಕ್ಕಿ – ಯುವತಿ ಸಾವು ಸ್ಕೂಟಿಗೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿ ಯುವತಿಯೊಬ್ಬಳು ಮೃತಪಟ್ಟಿರುವ ಘಟನೆ ಸಾಗರ ತಾಲೂಕಿನಲ್ಲಿ ನಡೆದಿದೆ  ಕಾಲೇಜಿನಿಂದ ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಸ್ಕೂಟಿಗೆ ಹಿಂದಿನಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ತೀವ್ರವಾಗಿ ಗಾಯಗೊಂಡ ವಿದ್ಯಾರ್ಥಿನಿ ಭಾನುವಾರ ಸಾವನ್ನಪ್ಪಿದ ಘಟನೆ ನಡೆದಿದೆ. ಅನುಷಾ(20) ಮೃತಪಟ್ಟ ವಿದ್ಯಾರ್ಥಿನಿ. ನಗರದ ಎಂಡಿಎಫ್ ಕಾಲೇಜಿನಲ್ಲಿ ದ್ವಿತೀಯ ಬಿಸಿಎ ಡಿಗ್ರಿ ಓದುತ್ತಿರುವ ಅನುಷಾ ಕಾಲೇಜು ಪೂರೈಸಿ ಸ್ಕೂಟಿಯಲ್ಲಿ…

Read More

ಕಟ್ಟಡ ಕಾಮಗಾರಿ ವೇಳೆ ವಿದ್ಯುತ್ ಪ್ರವಹಿಸಿ ಯುವಕ ಸಾವು | ಇಂಜಿನಿಯರ್‌ ಹಾಗೂ ಮೇಸ್ತ್ರಿ ವಿರುದ್ದ ದೂರು ದಾಖಲು | electric shock

ಕಟ್ಟಡ ಕಾಮಗಾರಿ ವೇಳೆ ವಿದ್ಯುತ್ ಪ್ರವಹಿಸಿ ಯುವಕ ಸಾವು | ಇಂಜಿನಿಯರ್‌ ಹಾಗೂ ಮೇಸ್ತ್ರಿ ವಿರುದ್ದ ದೂರು ದಾಖಲು | electric shock ಕರೆಂಟ್‌ ಶಾಕ್‌ನಿಂದ ಕಾರ್ಮಿಕನೊಬ್ಬ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದ ಸೋಮಯ್ಯ ಲೇಔಟ್‌ನಲ್ಲಿ ನಡೆದಿದೆ. ಹರೀಶ್(32) ಮೃತಪಟ್ಟ ದುರ್ಧೈವಿಯಾಗಿದ್ದಾನೆ ಮನೆ ಕಟ್ಟಡದ ಕೆಲಸಕ್ಕೆ ತೆರಳಿದ್ದ ಯುವಕ ಕೆಲಸವನ್ನು ಮುಗಿಸಿ ಹೊರಟಿದ್ದ ಕಾರ್ಮಿಕನಿಗೆ ಕಟ್ಟಡದ ಮೇಸ್ತ್ರಿ ಸಿಮೆಂಟ್‌ ಮಿಕ್ಸಿಂಗ್‌ ಯಂತ್ರವನ್ನ ಕ್ಲೀನ್‌ ಮಾಡುವಂತೆ ತಿಳಿಸಿದ್ದಾರೆ. ಅದರಂತೆ ಆತ ಕ್ಲೀನ್‌ ಮಾಡಲು ಹೋದಾಗ ವಿದ್ಯುತ್ ಪ್ರವಹಿಸಿ ಸಾವನ್ನಪ್ಪಿದ್ದಾನೆ. ಮಳೆಯಿಂದ…

Read More