Ripponpete | ಅಪ್ಪ ಹೊಡೆದರೆ ಏನು ಮಾಡಬೇಕು.? ಕಳ್ಳರನ್ನು ಹಿಡಿದು ಏನು ಮಾಡ್ತೀರಾ.?? ಪಿಎಸ್‌ಐ ಗೆ ಶಾಲಾ ಮಕ್ಕಳಿಂದ ಕುತೂಹಲದ ಪ್ರಶ್ನೆಗಳು.!?

Ripponpete | ಅಪ್ಪ ಹೊಡೆದರೆ ಏನು ಮಾಡಬೇಕು.? ಕಳ್ಳರನ್ನು ಹಿಡಿದು ಏನು ಮಾಡ್ತೀರಾ.?? ಪಿಎಸ್‌ಐ ಗೆ ಶಾಲಾ ಮಕ್ಕಳಿಂದ ಕುತೂಹಲದ ಪ್ರಶ್ನೆಗಳು

‘ತೆರೆದ ಮನೆ’ ಕಾರ್ಯಕ್ರಮದಡಿಯಲ್ಲಿ ಠಾಣೆಗೆ ಭೇಟಿ ನೀಡಿದ ಶಾಲಾ ಮಕ್ಕಳೊಂದಿಗೆ ಪೊಲೀಸರ ಸಂವಾದ


ರಿಪ್ಪನ್‌ಪೇಟೆ : ಕೈಗೆ ಬೇಡಿ ಏಕೆ ಹಾಕ್ತಾರೆ, ಮಕ್ಕಳನ್ನು ಜೈಲಿನಲ್ಲಿ ಇಟ್ಟುಕೊಳ್ಳುವುದಿಲ್ಲವೇ, ಪಿಸ್ತೂಲ್‌ ಯಾವಾಗ ಬಳಸುತ್ತೀರಾ, ಕಳ್ಳರು ಹಿಡಿದು ಏನ್‌ ಮಾಡುತ್ತೀರಾ.’–ಇದು ಪೊಲೀಸ್‌ ಇಲಾಖೆಯ ‘ತೆರೆದ ಮನೆ’ ಕಾರ್ಯಕ್ರಮದ ಅಂಗವಾಗಿ ಶಾಲಾ ಮಕ್ಕಳು ಪಟ್ಟಣದ ಠಾಣೆಗೆ ಭೇಟಿ ನೀಡಿದಾಗ ಕುತೂಹಲದ ಪ್ರಶ್ನೆಗಳನ್ನು ಠಾಣಾಧಿಕಾರಿ ಪ್ರವೀಣ್ ಎಸ್ ಪಿ ರವರ ಬಳಿ ಕೇಳಿ ಗೊಂದಲ ನಿವಾರಿಸಿಕೊಳ್ಳುತ್ತಿದ್ದರು.

ಪಟ್ಟಣದ ಪೊಲೀಸ್ ಠಾಣೆಯಲ್ಲಿ ಆಯೋಜಿಸಿದ್ದ ತೆರೆದ ಮನೆ ಕಾರ್ಯಕ್ರಮದಡಿಯಲ್ಲಿ ಪಟ್ಟಣದ ಮೇರಿಮಾತಾ ಶಾಲೆಯ ವಿದ್ಯಾರ್ಥಿಗಳು ಠಾಣೆಗೆ ಭೇಟಿ ನೀಡಿ ತಮ್ಮಲ್ಲಿದ್ದ ಕೆಲವು ಪ್ರಶ್ನೆಗಳನ್ನು ಕೇಳಿ ಉತ್ತರವನ್ನು ಪಡೆದುಕೊಂಡರು. ನಮ್ಮನ್ನು ಯಾರಾದರೂ ಫಾಲೋ ಮಾಡಿದರೇ ಏನು ಮಾಡಬೇಕು..? ಕಿಡ್ನಾಪ್ ಆದರೆ ಹೇಗೆ ಪತ್ತೆ ಹಚ್ಚುತ್ತೀರಿ , ಅಪ್ಪ ಹೊಡೆದರೇ ಏನು ಮಾಡಬೇಕು ಹೀಗೆ ಹಲವಾರು ಪ್ರಶ್ನೆಗಳನ್ನು ಪಿಎಸ್‌ಐ ಪ್ರವೀಣ್ ರವರ ಬಳಿ ಕೇಳಿ ಉತ್ತರವನ್ನು ಪಡೆಯುತಿದ್ದರು.


ಈ ಸಂಧರ್ಭದಲ್ಲಿ ಮಾತನಾಡಿದ ಪಿಎಸ್‌ಐ ಪ್ರವೀಣ್ ಎಸ್ ಪಿ ಪೊಲೀಸ್ ಎಂದರೆ ಸಾಮಾನ್ಯವಾಗಿ ಮಕ್ಕಳು ಭಯ ಪಡುವುದು ಸಹಜ. ಭಯ ತೊಲಗಿಸಿ, ಮಕ್ಕಳು ತಮ್ಮ ಹಕ್ಕುಗಳಿಗೆ ಚ್ಯುತಿ ಬಂದಾಗ ಮತ್ತು ರಕ್ಷಣೆ ಅವಶ್ಯವೆನಿಸಿದಾಗ ಪೊಲೀಸ್‌ ಸಹಾಯ ಪಡೆಯಲು ಮಕ್ಕಳ ಸ್ನೇಹಿ ವಾತಾವರಣ ಸೃಷ್ಠಿಸಲು ‘ತೆರೆದ ಮನೆ’ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಹೇಳಿದರು.

‘ಪೊಲೀಸರೆಂದರೆ ಹೆದರುತ್ತಿದ್ದ ಮಕ್ಕಳು ಈಗ ಧೈರ್ಯವಾಗಿ ಮಾತ ನಾಡುತ್ತಾರೆ. ಬಾಲ್ಯ ವಿವಾಹ ಮಾಡಲು ಮುಂದಾದರೆ ಏನು ಮಾಡ ಬೇಕು, ಪೋಷಕರು–ಶಿಕ್ಷಕರು ಹೊಡೆ ಯುತ್ತಾರೆ, ಶಾಲೆಗಳ ಬಳಿ ಕಿಡಿಗೇಡಿಗಳು ರೇಗಿಸು ತ್ತಾರೆ, ಮಕ್ಕಳ ಮೇಲೆ ನಡೆಯುತ್ತಿರುವ ಲೈಂಗಿಕ ದೌರ್ಜನ್ಯ, ಅತ್ಯಾಚಾರ ತಡೆ ಯಲು ಏಕೆ ಆಗುತ್ತಿಲ್ಲ ಎಂಬ ಪ್ರಶ್ನೆಗಳನ್ನು ಕೇಳುತ್ತಾರೆ. ಮಕ್ಕಳಿಗೆ ಕಾನೂನಿನ ಬಗ್ಗೆ ಅರಿವು ಮೂಡಿ ಸುವುದರ ಜತೆಗೆ ಯಾವುದನ್ನು ಮಾಡಬೇಕು, ಮಾಡ ಬಾರದು ಎಂಬುದರ ತಿಳುವಳಿಕೆ ನೀಡಲಾಗುತ್ತದೆ’ ಎಂದು ಹೇಳಿದರು.

ತೆರೆದ ಮನೆ ಕಾರ್ಯಕ್ರಮದಡಿಯಲ್ಲಿ ಮಕ್ಕಳಿಗೆ ಕಾನೂನು ತಿಳುವಳಿಕೆ :

ಪೊಲೀಸರ ಕರ್ತವ್ಯ ನಿರ್ವಹಣಾ ವಿಧಾನ, ಕಾನೂನು ಮತ್ತು ಸುವ್ಯವಸ್ಥೆ ವಿಭಾಗ, ಅಪರಾಧ ವಿಭಾಗ, ತನಿಖಾಧಿಕಾರಿ ವಿಭಾಗ, ಕಂಪ್ಯೂಟರ್‌ ವಿಭಾಗ, ಠಾಣಾ ಬರಹಗಾರರ ವಿಭಾಗ, ಠಾಣಾ ದಿನಚರಿ, ಅರ್ಜಿಗಳ ಬಗ್ಗೆಯೂ ಮನವರಿಕೆ ಮಾಡಿಕೊಡಲಾಗುವದು. ಅಂಗ ಶೋಧನಾ ಪುಸ್ತಕ, ಕೈದಿ ಬಂಧನ ಪುಸ್ತಕ, ಸಮನ್ಸ್‌ ನೋಂದಣಿ, ವಾರಂಟ್‌ ನೋಂದಣಿ, ಎಂಒಬಿ ಪುಸ್ತಕ, ರೌಡಿ ರಿಜಿಸ್ಟರ್‌, ಪೂರ್ವ ಸಜಾ ಅಪರಾಧಿ ನೋಂದಣಿ, ಬಂದೂಕು ನೋಂದಣಿ, ಸಣ್ಣ ಅಪರಾಧ ಪುಸ್ತಕ, ಮೋಟಾರು ವಾಹನ ಅಪರಾಧ ಪುಸ್ತಕ ಹಾಗೂ ಅಪರಾಧಿ ದಾಖಲಾತಿ ಪುಸ್ತಕ, ಕಾನೂನು ತಿಳಿವಳಿಕೆ, ಮಕ್ಕಳ ಸುರಕ್ಷತೆ, ರಸ್ತೆ ಸಂಚಾರ ನಿಯಮ, ಮಕ್ಕಳ ಮೇಲೆ ದೌರ್ಜನ್ಯ ಪ್ರಕರಣ ಸೇರಿದಂತೆ ವಿದ್ಯಾರ್ಥಿಗಳಿಗೆ ಉಪಯುಕ್ತವಾಗಿರುವ ಕಾನೂನುಗಳ ಬಗ್ಗೆಯೂ ಮಕ್ಕಳಿಗೆ ತಿಳಿವಳಿಕೆ ನೀಡಲಾಗುತ್ತದೆ.


‘ಜಿಲ್ಲೆಯಲ್ಲಿ ಮಕ್ಕಳ ಸಹಾಯವಾಣಿ 1098 ಆರಂಭಿಸಲಾಗಿದೆ. ಪರಿಸರದ ಸುತ್ತಮುತ್ತ ಬಾಲ್ಯವಿವಾಹ ನಡೆಯುತ್ತಿ ದ್ದರೆ, ಲೈಂಗಿಕ ದೌರ್ಜನ್ಯ ಹಾಗೂ ಇತರೆ ಸಮಸ್ಯೆ ಬಗ್ಗೆ ಸಹಾಯವಾಣಿಗೆ ಮಕ್ಕಳು ತಿಳಿಸಬಹುದು ಎಂದು ಈ ಸಂಧರ್ಭದಲ್ಲಿ ತಿಳಿಸಿದರು.





ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು

ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು ರಿಪ್ಪನ್ ಪೇಟೆ : ಬಾಳಿನ…

7 hours ago

ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ

ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ BJP leaders in Sagar have…

7 hours ago

ಈದ್ ಮಿಲಾದ್ ಮೆರವಣಿಗೆಯಲ್ಲಿ ಮಾದಕ ವ್ಯಸನ ವಿರುದ್ಧ ಸಮರ: ‘ಗಾಂಜಾ ಬೇಡ ಬ್ರೋ’ ಅಭಿಯಾನಕ್ಕೆ ಭರ್ಜರಿ ಸ್ಪಂದನೆ

ಯುವಶಕ್ತಿಯೇ ಎಚ್ಚೆತ್ತುಕೋ: ಈದ್ ಮಿಲಾದ್ ಸಂಭ್ರಮದಲ್ಲಿ ಮೊಳಗಿದ ‘ನಶಾಮುಕ್ತ ಭಾರತ’ ಸಂದೇಶ Ripponpete Police launched an anti-drug awareness…

13 hours ago

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ High drama…

1 day ago

ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ!

ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ! An…

1 day ago

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ Forest Flying Squad officials…

2 days ago