Ripponpete | ಅರ್ಧಕ್ಕೆ ನಿಂತ ರಸ್ತೆ ಅಗಲೀಕರಣ ಕಾಮಗಾರಿ – ನಾಗರೀಕರಿಗೆ ಕಿರಿಕಿರಿ | ಖಾಸಗಿ ವ್ಯಕ್ತಿಯ ಪ್ರಭಾವಕ್ಕೆ ಶರಣಾಯಿತಾ ಗ್ರಾಮಾಡಳಿತ..!!??

ಆರ್ಧಕ್ಕೆ ನಿಂತ ರಸ್ತೆ ಅಗಲೀಕರಣ ಕಾಮಗಾರಿ ನಾಗರೀಕರಿಗೆ ಕಿರಿಕಿರಿ


ರಿಪ್ಪನ್‌ಪೇಟೆ;-ಸಾಗರ-ತೀರ್ಥಹಳ್ಳಿ ಮಾರ್ಗದ ತಲಾ ಒಂದು ಕಿ.ಮೀ. ರಸ್ತೆ ಆಗಲೀಕರಣ ಕಾಮಗಾರಿ ಅರಂಭವಾಗಿ ವರ್ಷಗಳಾಗುತ್ತಾ ಬಂದರೂ ಕೂಡಾ ಕಾಮಗಾರಿ ಆರ್ಧಕ್ಕೆ ನಿಂತು ಸಾರ್ವಜನಿಕರಿಗೆ ಕಿರಿಕಿರಿಯಂತಾಗಿದೆ.

ಕಳೆದ 2022 ನವಂಬರ್ ಡಿಸಂಬರ್ ತಿಂಗಳಲ್ಲಿ ರಸ್ತೆ ಸಾಗರ ಎಪಿಎಂಸಿ ಯಾರ್ಡ್ ಬಳಿಯಿಂದ ಸುಮಾರು 1 ಕಿ.ಮೀ. ದೂರದ ರಸ್ತೆ ಆಗಲೀಕರಣ ಮತ್ತು ಬಾಕ್ಸ್ ಚರಂಡಿ ವಿದ್ಯುತ್ತ ಕಂಬ ಸ್ಥಳಾಂತರ ಹೀಗೆ ಆಭಿವೃದ್ದಿ ಕಾಮಗಾರಿ ಆರಂಭಗೊಂಡು ಒಂದೂವರೆ ವರ್ಷಗಳಾಗುತ್ತಾ ಬಂದರೂ ಕಾಮಗಾರಿ ಆರ್ಧಂಬರ್ಧವಾಗಿಯೇ ಕುಂಟುತ್ತಾ ಸಾಗಿದ್ದು ಸಾರ್ವಜನಿಕರಿಗೆ ಕಿರಿಕಿರಿ ತಂದೊಡ್ಡಿದೆ.

ರಸ್ತೆ ಅಗಲೀಕರಣ ಕಾಮಗಾರಿಗಾಗಿ ರಸ್ತೆ ಅಗೆಯಲಾಗಿದ್ದು ಸಾರ್ವಜನಿಕರಿಗಾಗಿ ಸರಬರಾಜು ಮಾಡಲಾಗಿರುವ ಕುಡಿಯುವ ನೀರಿನ ಪೈಪ್‌ಲೈನ್ ಪೈಪ್‌ಗಳು ಒಡೆದು ಕುಡಿಯುವ ನೀರು ಸರಬರಾಜು ಅಗದೇ ಎಲ್ಲಾ ಭೂಮಿ ಪಾಲು ಆಗುವಂತಾಗಿದೆ. ಗ್ರಾಮಾಡಳಿತದವರು ಬರಿ ಪೈಪ್‌ಲೈನ್ ಕಾಮಗಾರಿ ದುರಸ್ಥಿಗಾಗಿ ಲಕ್ಷಾಂತರ ರೂಪಾಯಿ ಹಣ ವಿನಿಯೋಗವಾಗುವಂತಾಗಿದ್ದರೂ ಕೂಡಾ ಒಡೆದ ಹಳೆಯ ಸರಬರಾಜು ಪೈಪ್ ಲೈನ್ ದುರಸ್ಥಿಯಾಗದೆ ಸಾಗರ ರಸ್ತೆಯ ನಿವಾಸಿಗಳಿಗೆ ನೀರಿಲ್ಲದೆ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ಸಾಗರ ರಸ್ತೆಯ ಗಣೇಶ ಮೆಟಲ್ ಸ್ಟೋರ್ ಅಂಗಡಿ ಮುಂಭಾಗದಲ್ಲಿ ರಸ್ತೆ ಅಗಲೀಕರಣಕ್ಕೆ ಜಾಗವನ್ನು ಬಿಡದೆ ಇರುವುದು ಕಾಮಗಾರಿ ವಿಳಂಬಕ್ಕೆ ಕಾರಣವೆಂದು ಲೋಕೋಪಯೋಗಿ ಇಲಖೆ ಮತ್ತು ಗ್ರಾಮಾಡಳಿತ ತೆರವು ಕಾರ್ಯಾಚರಣೆಗಾಗಿ ಜೆಸಿಬಿ ಯಂತ್ರದೊಂದಿಗೆ ಸ್ಥಳಕ್ಕೆ ಭೇಟಿ ನೀಡಿದಾಗ ಈ ಜಾಗದ ಮೇಲೆ ನ್ಯಾಯಾಲಯದ ತಡೆ ಅದೇಶವಿದೆ ಎಂದು ಹೇಳಿ ಸಾಗಹಾಕುತ್ತಿದ್ದು ಅಭಿವೃದ್ದಿ ಕಾರ್ಯಕ್ಕೆ ಅಡೆ ತಡೆ ಉಂಟು ಮಾಡುತ್ತಿದ್ದು ಅಲ್ಲದೆ ರಸ್ತೆಯ ಮೇಲೆಯೇ 11 ಕೆ.ವಿ.ಹೆವಿ ಲೈನ್ ವಿದ್ಯುತ್ ಕಂಬ ಇದ್ದು ಕಂಬ ಸ್ಥಳಾಂತರ ಮಾಡಲು ಈ ಅಂಗಡಿ ಮಾಲೀಕ ನಿರ್ಲಕ್ಷö್ಯ ದೋರಣೆ ತಾಳಿರುವುದೇ ಇಲ್ಲಿನ ರಸ್ತೆ ಅಗಲೀಕರಣದ ಕಾಮಗಾರಿಗೆ ನೂರೆಂಟು ವಿಘ್ನಗಳಾಗಲು ಕಾರಣವಾಗಿದೆ ಎಂದು ಸಾರ್ವಜನಿಕರಲ್ಲಿ ಚರ್ಚೆಗೆ ಗ್ರಾಸವಾಗಿದೆ.

ಈಗಾಗಲೇ ಶಾಲೆ ಕಾಲೇಜ್ ಮತ್ತು ಮಳೆಗಾಲ ಅರಂಭವಾಗಿದ್ದು ಬೆಳಗ್ಗೆ ಮತ್ತು ಸಂಜೆಯ ವೇಳೆಯಲ್ಲಿ ಶಾಲಾ ಮಕ್ಕಳು ರಸ್ತೆಯ ಅಂಚಿನಲ್ಲಿ ನಡೆದು ಕೊಂಡು ಹೋಗಿ ಬರುವುದೇ ಕಷ್ಟಕರವಾಗಿದೆ ಅಗಲೀಕರಣ ಕಾಮಗಾರಿಗಾಗಿ ತೆಗೆಯಲಾದ ಹೊಂಡ ಗುಂಡಿ ಮತ್ತು ರಸ್ತೆಯ ಮೇಲೆ ಹಾಕಲಾದ ಮಣ್ಣಿನಿಂದಾಗಿ ಮಳೆಗಾಲದಲ್ಲಿ ಕೆಸರು ಗದ್ದೆಯಂತಾಗಿ ವಿದ್ಯಾರ್ಥಿಗಳು ಹಾಕಿಕೊಂಡ ಬಂದಂತಹ ಶಾಲಾ ಸಮವಸ್ತ್ರ ಗಳ ಮೇಲೆ ಕೆಸರು ಸಿಡಿದು ಹಿಡಿಶಾಪ ಹಾಕುವಂತಾಗಿದೆ.

ಇನ್ನಾದರೂ ಸಂಬಂಧಪಟ್ಟ ಲೋಕೋಪಯೋಗಿ ಇಲಾಖೆಯ ಆಧಿಕಾರಿಗಳು ಮತ್ತು ಸ್ಥಳೀಯ ಗ್ರಾಮಾಡಳಿತ ಇತ್ತ ಗಮನಹರಿಸಿ ತುರ್ತು ಪರಿಹಾರ ಕಲ್ಪಿಸುವ ಮೂಲಕ ಸಾರ್ವಜನಿಕರಿಗಾಗುತ್ತಿರುವ ಕಿರಿಕಿರಿಯನ್ನು ತಪ್ಪಿಸುವತ್ತ ಮುಂದಾಗುವರೆ ಕಾದು ನೋಡಬೇಕಾಗಿದೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಈದ್ ಮಿಲಾದ್ ಮೆರವಣಿಗೆಯಲ್ಲಿ ಮಾದಕ ವ್ಯಸನ ವಿರುದ್ಧ ಸಮರ: ‘ಗಾಂಜಾ ಬೇಡ ಬ್ರೋ’ ಅಭಿಯಾನಕ್ಕೆ ಭರ್ಜರಿ ಸ್ಪಂದನೆ

ಯುವಶಕ್ತಿಯೇ ಎಚ್ಚೆತ್ತುಕೋ: ಈದ್ ಮಿಲಾದ್ ಸಂಭ್ರಮದಲ್ಲಿ ಮೊಳಗಿದ ‘ನಶಾಮುಕ್ತ ಭಾರತ’ ಸಂದೇಶ Ripponpete Police launched an anti-drug awareness…

5 hours ago

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ High drama…

1 day ago

ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ!

ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ! An…

1 day ago

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ Forest Flying Squad officials…

1 day ago

ರಿಪ್ಪನ್‌ಪೇಟೆಯ ನಿವೃತ್ತ ಶಿಕ್ಷಕ, ಶಿಕ್ಷಣ ಪ್ರೇಮಿ ಬಿ. ಶೇಖರಪ್ಪ ಮಾಸ್ಟರ್ ನಿಧನ; ರಂಭಾಪುರಿ ಜಗದ್ಗುರುಗಳಿಂದ ಸಂತಾಪ

ರಿಪ್ಪನ್‌ಪೇಟೆಯ ನಿವೃತ್ತ ಶಿಕ್ಷಕ, ಶಿಕ್ಷಣ ಪ್ರೇಮಿ ಬಿ. ಶೇಖರಪ್ಪ ಮಾಸ್ಟರ್ ನಿಧನ; ರಂಭಾಪುರಿ ಜಗದ್ಗುರುಗಳಿಂದ ಸಂತಾಪ Retired teacher and…

2 days ago

ಸಾಗರೋತ್ತರದಲ್ಲೂ ಹುಟ್ಟೂರಿನ ಕಳಕಳಿ | ನೊಂದವರ ಬಾಳಲ್ಲಿ ಬೆಳಕಾದ ರಿಪ್ಪನ್‌ಪೇಟೆಯ ಜಿಸಿಸಿ ಯುವಪಡೆಗೆ ಶಾಸಕರಿಂದ ವಿಶೇಷ ಸನ್ಮಾನ

ಸಾಗರೋತ್ತರದಲ್ಲೂ ಹುಟ್ಟೂರಿನ ಕಳಕಳಿ | ನೊಂದವರ ಬಾಳಲ್ಲಿ ಬೆಳಕಾದ ರಿಪ್ಪನ್‌ಪೇಟೆಯ ಜಿಸಿಸಿ ಯುವಪಡೆಗೆ ಶಾಸಕರಿಂದ ವಿಶೇಷ ಸನ್ಮಾನ ​ಮಾನವೀಯತೆಯೆಂಬುದು ಕೇವಲ…

2 days ago