Ripponpete | ಪರಿಷತ್ ಚುನಾವಣೆ – ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ನಿಶ್ಚಿತ – ಆರ್ ಎಂ ಮಂಜುನಾಥ್ ಗೌಡ

ಪರಿಷತ್ ಚುನಾವಣೆ – ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ – ಆರ್ ಎಂ ಮಂಜುನಾಥ್ ಗೌಡ

ರಿಪ್ಪನ್‌ಪೇಟೆ : ವಿಧಾನಪರಿಷತ್ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ಎಂಎಡಿಬಿ ಅಧ್ಯಕ್ಷ ಮಂಜುನಾಥ್ ಗೌಡ ಹೇಳಿದರು.

ಪಟ್ಟಣದ ಪರಿಷತ್ ಚುನಾವಣೆಯ ಮತಗಟ್ಟೆಗೆ ಭೇಟಿ ನೀಡಿ ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಿ ನಂತರ ಮಾದ್ಯಮದವರೊಂದಿಗೆ ಮಾತನಾಡಿದ ಅವರು, ಪದವೀಧರ ಕ್ಷೇತ್ರದಿಂದ ಆಯನೂರು ಮಂಜುನಾಥ್ ಹಾಗೂ ಶಿಕ್ಷಕರ ಕ್ಷೇತ್ರದಿಂದ ಮಂಜುನಾಥ್ ಕೆ.ಕೆ.ಅವರನ್ನು ಪಕ್ಷ ಕಣಕ್ಕೆ ಇಳಿಸಿದೆ. ಆಯನೂರು ಮಂಜುನಾಥ್ ಅವರು ರಾಜಕೀಯ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಸಾಕಷ್ಟು ಅನುಭವ ಹೊಂದಿದ್ದಾರೆ. ಹಲವು ಹೋರಾಟಗಳಲ್ಲಿ ಭಾಗಿಯಾಗಿದ್ದು, ಚಿರಪರಿಚಿತರಾಗಿರುವುದು ಗೆಲುವಿಗೆ ಸಹಕಾರಿ ಆಗಲಿದೆ ಎಂದರು.

ನಮ್ಮ ಅಭ್ಯರ್ಥಿಗಳು ಗೆಲುವು ಸಾಧಿಸಿದರೆ ಮುಂದಿನ ದಿನಗಳಲ್ಲಿ ಶಿಕ್ಷಕರ ಕ್ಷೇತ್ರದಲ್ಲಿರುವ ಜ್ವಲಂತ ಸಮಸ್ಯೆಗಳನ್ನು ಬಗೆಹರಿಸಲು ಸರಕಾರ ಬದ್ಧವಾಗಿದೆ. ಪ್ರಸ್ತುತ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿರುವ ಕಾರಣಕ್ಕೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳೇ ಗೆಲ್ಲುವುದು ಹೆಚ್ಚು ಸೂಕ್ತ ಎಂದರು.

ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸುಂದರೇಶ್ ಹಾಗೂ ವಿಧಾನಪರಿಷತ್ ಮಾಜಿ ಸದಸ್ಯ ಪ್ರಸನ್ನಕುಮಾರ್ , ಕಲಗೋಡು ರತ್ನಾಕರ್ ಹಾಗೂ ಜಿಲ್ಲಾ ಮುಖಂಡರು ರಿಪ್ಪನ್‌ಪೇಟೆ ಮತಗಟ್ಟೆ ಸಂಖ್ಯೆ44 ಕ್ಕೆ ಭೇಟಿ‌ ನೀಡಿ ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಿದರು.

ಈ ಸಂಧರ್ಭದಲ್ಲಿ ಮುಖಂಡರಾದ ಕಲಗೋಡು ರತ್ನಾಕರ್ , ಬಿ ಪಿ ರಾಮಚಂದ್ರ , ಅಮೀರ್ ಹಂಜಾ ,ಗ್ರಾಪಂ ಅಧ್ಯಕ್ಷೆ ಧನಲಕ್ಷ್ಮಿ, ರಿಪ್ಪನ್‌ಪೇಟೆ ಘಟಕದ ಅಧ್ಯಕ್ಷ ಗಣಪತಿ ಗವಟೂರು ಆಸೀಫ಼್ ಭಾಷಾ , ಚಂದ್ರೇಶ್ , ಯಶಸ್ವತಿ ವೃಷಭರಾಜ್ ಜೈನ್, ರಮೇಶ್ ಫ್ಯಾನ್ಸಿ , ಹಾಗೂ ಇನ್ನಿತರರಿದ್ದರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ

ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ A man identified…

2 days ago

ಚಾನೆಲ್‌ನಲ್ಲಿ ಈಜಲು ತೆರಳಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ನೀರುಪಾಲು

ಚಾನೆಲ್‌ನಲ್ಲಿ ಈಜಲು ತೆರಳಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ನೀರುಪಾಲು SSLC student Krishna drowned while swimming in Tunga Channel…

2 days ago

ಶಿವಮೊಗ್ಗದಲ್ಲಿ ಶಾಂತಿಯುತವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ

ಶಿವಮೊಗ್ಗದಲ್ಲಿ ಶಾಂತಿಯುತವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ Shivamogga witnessed a grand and peaceful Eid Milad procession…

2 days ago

ಹುಂಚ ಆಸ್ಪತ್ರೆಯ ಶವಾಗಾರಕ್ಕೆ ಕೊನೆಗೂ ‘ಮುಹೂರ್ತ’: DHO ಭೇಟಿ, ಬಾಕಿ ಕಾಮಗಾರಿ ಆರಂಭ

ಹುಂಚ ಶವಾಗಾರಕ್ಕೆ ಕೊನೆಗೂ ‘ಮುಹೂರ್ತ’: DHO ಭೇಟಿ, ಬಾಕಿ ಕಾಮಗಾರಿ ಆರಂಭ Postman News report brings action on…

2 days ago

ಸಿದ್ದರಮಟ್ಟಿ ಬಳಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, ₹31,350 ಮೌಲ್ಯದ ಗಾಂಜಾ ಜಪ್ತಿ

ಸಿದ್ದರಮಟ್ಟಿ ಬಳಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, ₹31,350 ಮೌಲ್ಯದ ಗಾಂಜಾ ಜಪ್ತಿ Two accused persons were…

2 days ago

ಬೀದಿ ನಾಯಿಗಳ ದಾಳಿಗೆ ಆರು ಕುರಿ ಮರಿಗಳು ಸಾವು

ಬೀದಿ ನಾಯಿಗಳ ದಾಳಿ: ಆರು ಕುರಿಗಳು ಸಾವು Six sheep belonging to a resident of Sagar were…

2 days ago