Ripponpete | ವಿದ್ಯುತ್ ಪ್ರವಹಿಸಿ ಕಂಬದಿಂದ ಕೆಳಗೆ ಬಿದ್ದ ಗುತ್ತಿಗೆ ಕಾರ್ಮಿಕನಿಗೆ ಗಂಭೀರ ಗಾಯ
ವಿದ್ಯುತ್ ಕಂಬವೇರಿದ ಗುತ್ತಿಗೆ ಕಾರ್ಮಿಕನೊಬ್ಬನಿಗೆ ಕರೆಂಟ್ ಶಾಕ್ ಆಗಿ ಕಂಬದಿಂದ ಕೆಳಗೆ ಬಿದ್ದು ಗಂಭೀರ ಗಾಯಗೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಅರಸಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಟಾಣಿಜೇಡ್ಡು ಗ್ರಾಮದಲ್ಲಿ ನಡೆದಿದೆ.
ಶಿಗ್ಗಾಂವ್ ಮೂಲದ ರಮೇಶ್(24) ಗಂಭೀರ ಗಾಯಗೊಂಡಿರುವ ವಿದ್ಯುತ್ ಗುತ್ತಿಗೆ ಕಾರ್ಮಿಕನಾಗಿದ್ದಾನೆ.
ಬಟಾಣಿಜೆಡ್ಡು ಗ್ರಾಮದಲ್ಲಿ ಇಂದು ಬೆಳಿಗ್ಗೆ ಕಾಮಗಾರಿ ನಿಮಿತ್ತ ಗುತ್ತಿಗೆ ಕಾರ್ಮಿಕ ರಮೇಶ್ ಲೈಟ್ ಕಂಬವೇರಿದ್ದು ಈ ಸಂಧರ್ಭದಲ್ಲಿ ಆತನಿಗೆ ವಿದ್ಯುತ್ ಪ್ರವಹಿಸಿ ಕಂಬದಿಂದ ಕೆಳಗೆ ಬಿದ್ದು ಗಂಭೀರ ಗಾಯಗೊಂಡಿದ್ದಾನೆ.ಕೂಡಲೇ ಆತನನ್ನು ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತಂದು ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗಕ್ಕೆ ರವಾನಿಸಲಾಗಿದೆ.
ಮೂಲಗಳ ಪ್ರಕಾರ ಕಾಮಗಾರಿಯ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡದೇ ನಿರ್ಲಕ್ಷ್ಯತನದಿಂದ ಫೋನ್ ನಲ್ಲಿ ಯುವತಿಯೊಂದಿಗೆ ಮಾತನಾಡುತ್ತಾ ಲೈಟ್ ಕಂಬವೇರಿದ್ದ ಗುತ್ತಿಗೆ ನೌಕರ ರಮೇಶ್ ವಿದ್ಯುತ್ ಶಾಕ್ ನಿಂದ ಕೆಳಗೆ ಬಿದ್ದಿದ್ದಾನೆ ಎನ್ನಲಾಗುತ್ತಿದ್ದು ಹೆಚ್ಚಿನ ಮಾಹಿತಿ ತಿಳಿದುಬರಬೇಕಾಗಿದೆ.
ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.