Ripponpete | ಶಿಕ್ಷಕರುಗಳನ್ನು ಸಮಾಜ ಗೌರವಿಸುತ್ತದೆ: ಎಸ್ ಎಲ್ ಭೋಜೇಗೌಡ

ಹೊಸನಗರ ತಾಲೂಕು ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರುಗಳ ಕಾರ್ಯಗಾರ

ಶಿಕ್ಷಕರುಗಳನ್ನು ಸಮಾಜ ಗೌರವಿಸುತ್ತದೆ: ಎಸ್ ಎಲ್ ಭೋಜೇಗೌಡ

ರಿಪ್ಪನ್ ಪೇಟೆ : ಸಮಾಜದ ಸೇವೆಯಲ್ಲಿ ಅತ್ಯುನ್ನುತವಾದ ಸೇವೆಯನ್ನು ನೀಡುತ್ತಿರುವವರು ಶಿಕ್ಷಕರುಗಳು. ಶಿಕ್ಷಕರುಗಳನ್ನು ಸಮಾಜ ಗೌರವಿಸುತ್ತದೆ ಎಂದು  ನೈರುತ್ಯ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯ ಎಸ್ ಎಲ್. ಭೋಜೇಗೌಡ  ಹೇಳಿದರು.


ಪಟ್ಟಣದ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಹೊಸನಗರ ತಾಲೂಕು ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಒಂದು ದಿನದ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು ಶಿಕ್ಷಕರುಗಳು ಸಮಾಜದ ಮುಖ್ಯ ವಾಹಿನಿಯಲ್ಲಿ ಪ್ರಮುಖ ರಾಗಿರುತ್ತಾರೆ,  ದೇಶದ ಅಭಿವೃದ್ಧಿ ಮತ್ತು ಉತ್ತಮ ರಾಷ್ಟ್ರದ ನಿರ್ಮಾಣದಲ್ಲಿ ಶಿಕ್ಷಕರುಗಳ ಪಾತ್ರ ಮಹತ್ತರವಾದದ್ದು. ಆದುದರಿಂದ ಸಮಾಜವು ಶಿಕ್ಷಕರನ್ನು ಗೌರವಿಸುತ್ತದೆ, ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಪ್ರತಿಭೆ ಇರುತ್ತದೆ. ಆದರೆ ಅವಕಾಶಗಳು ಇರುವುದಿಲ್ಲ. ವಿದ್ಯಾರ್ಥಿಗಳಿಗೆ ಅವಕಾಶಗಳನ್ನು ಕಲ್ಪಿಸಿ ಕೊಡುವ ಗುರುತರ ಹೊಣೆಗಾರಿಕೆ ಶಿಕ್ಷಕರುಗಳ ಮೇಲಿದೆ ಎಂದರು.

ವಿದ್ಯಾರ್ಥಿಗಳಿಗೆ ಓದಿನಲ್ಲಿ ಆಸಕ್ತಿಯೊಂದಿಗೆ  ಆತ್ಮವಿಶ್ವಾಸವನ್ನು ಬೆಳೆಸಿ ನಮ್ಮ ಮಕ್ಕಳ ರೀತಿಯಲ್ಲಿ ಪ್ರೀತಿ ಯೊಂದಿಗೆ  ಪಾಠ ಪ್ರವಚನಗಳನ್ನು  ಭೋದಿಸಿದಾಗ ಮಕ್ಕಳು ಕಲಿಕೆಯಲ್ಲಿ ಆಸಕ್ತಿಯನ್ನು ಹೊಂದಿ, ಉನ್ನತ ಶಿಕ್ಷಣವನ್ನು ಪಡೆದು ಸಮಾಜದ ಮುಖ್ಯ ವಾಹಿನಿಯಲ್ಲಿ ಬರುವುದರ ಜೊತೆಗೆ ದೇಶದ ಅಭಿವೃದ್ಧಿಗೆ ಕೊಡುಗೆಗಳಾಗುತ್ತಾರೆ ಎಂದರು.


ಶಿವಮೊಗ್ಗ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಬಿ ಕೃಷ್ಣಪ್ಪ ಮಾತನಾಡಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶಿವಮೊಗ್ಗ ಜಿಲ್ಲೆಯ ವಿದ್ಯಾರ್ಥಿಗಳು ಅತ್ಯುತ್ತಮವಾದ ಫಲಿತಾಂಶವನ್ನು ನೀಡಿದ್ದಾರೆ. ಇದಕ್ಕೆ ಜಿಲ್ಲೆಯ ಎಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಚಾರ್ಯರು ಹಾಗೂ ಉಪನ್ಯಾಸ ವರ್ಗದವರ ಕರ್ತವ್ಯ ನಿಷ್ಠೆ ಮತ್ತು ಪರಿಶ್ರಮ  ಕಾರಣವಾಗಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹೊಸನಗರ ತಾಲೂಕು ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದ ಅಧ್ಯಕ್ಷ ಹಾಲಪ್ಪ ಸಂಕೂರ್ ವಹಿಸಿದ್ದರು.


ಇದೇ ಸಂದರ್ಭದಲ್ಲಿ ಶಿಕ್ಷಕರುಗಳ ಕ್ಷೇತ್ರದಿಂದ  ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾದ ಎಸ್ ಎಲ್ ಭೋಜೇಗೌಡ ರವರು ಜೂನ್ 30 ರಂದು ವಯೋನಿವೃತ್ತಿ ಹೊಂದುತ್ತಿರುವ ರಿಪ್ಪನ್ ಪೇಟೆ ಸರಕಾರಿ ಪದವಿಪೂರ್ವ ಕಾಲೇಜಿನ ಎ.ಮಂಜುನಾಥ್ ಹಾಗೂ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕ ಬಿ. ಕೃಷ್ಣಪ್ಪ, ಹಾಗೂ ಶೇಕಡ 100ರಷ್ಟು ಫಲಿತಾಂಶಗಳನ್ನು ನೀಡಿದ ಉಪನ್ಯಾಸಕರುಗಳಿಗೆ  ಸನ್ಮಾನಿಸಿ ಗೌರವಿಸಿದರು.

ಇದೇ ಸಂಧರ್ಭದಲ್ಲಿ ರಿಪ್ಪನ್‌ಪೇಟೆ ಪಿಯುಸಿ ಕಾಲೇಜಿಗೆ ವಿಧಾನ ಪರಿಷತ್ ಸದಸ್ಯರ ಅನುದಾನದಿಂದ ನೀಡಿದ ಶುದ್ಧ ನೀರಿನ ಘಟಕವನ್ನು ಪರಿಷತ್ ಸದಸ್ಯ ಎಸ್ ಎಲ್ ಭೋಜೇಗೌಡ ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಶಿವಮೊಗ್ಗ ಜಿಲ್ಲಾ ಪದವಿಪೂರ್ವ ಕಾಲೇಜುಗಳ ಪ್ರಾಚಾರ್ಯಗಳ ಸಂಘದ ಅಧ್ಯಕ್ಷ  ಚಂದ್ರಪ್ಪ ಗುಂಡಪಲ್ಲಿ  ಹಾಗೂ ಉಪನ್ಯಾಸಕರ ಸಂಘದ ಜಿಲ್ಲಾ ಅಧ್ಯಕ್ಷ ಯೋಗೀಶ್, ಹೊಸನಗರ ಕಾಲೇಜಿನ ಪ್ರಾಚಾರ್ಯ  ಸ್ವಾಮಿ ರಾವ್, ನಿಟ್ಟೂರಿನ ಕಾಲೇಜಿನ ಪ್ರಾಚಾರ್ಯ ಕೆ. ಎಸ್.ಗಣೇಶ್. ಹೋಲಿ ರೆಡಿ ಮೇಡ್ ಕಾಲೇಜಿನ ಪ್ರಾಚಾರ್ಯ ಸಿಸ್ಟರ್ ಐರಿನ್, ಅಮೃತ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಮಹಮ್ಮದ್ ನಜಹತ್ ಉಲ್ಲಾ, ರಿಪ್ಪನ್ ಪೇಟೆ ಕಾಲೇಜಿನ ಪ್ರಾಚಾರ್ಯ ಎ.ಮಂಜುನಾಥ್ ಇದ್ದರು.

ಪ್ರಣತಿ ಅಣ್ಣಪ್ಪ ಪ್ರಾರ್ಥಿಸಿ. ಉಪನ್ಯಾಸಕರಾದ ಸುಬ್ರಹ್ಮಣ್ಯ ನಿರೂಪಿಸಿ, ಬೆಂಜಮಿನ್ ಫ್ರಾನ್ಸಿಸ್ ವಂದಿಸಿದರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು

ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು ರಿಪ್ಪನ್ ಪೇಟೆ : ಬಾಳಿನ…

3 hours ago

ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ

ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ BJP leaders in Sagar have…

4 hours ago

ಈದ್ ಮಿಲಾದ್ ಮೆರವಣಿಗೆಯಲ್ಲಿ ಮಾದಕ ವ್ಯಸನ ವಿರುದ್ಧ ಸಮರ: ‘ಗಾಂಜಾ ಬೇಡ ಬ್ರೋ’ ಅಭಿಯಾನಕ್ಕೆ ಭರ್ಜರಿ ಸ್ಪಂದನೆ

ಯುವಶಕ್ತಿಯೇ ಎಚ್ಚೆತ್ತುಕೋ: ಈದ್ ಮಿಲಾದ್ ಸಂಭ್ರಮದಲ್ಲಿ ಮೊಳಗಿದ ‘ನಶಾಮುಕ್ತ ಭಾರತ’ ಸಂದೇಶ Ripponpete Police launched an anti-drug awareness…

10 hours ago

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ High drama…

1 day ago

ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ!

ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ! An…

1 day ago

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ Forest Flying Squad officials…

2 days ago