Ripponpete | ಹೆಚ್ಚುತ್ತಿರುವ ಡೆಂಗ್ಯೂ ಪ್ರಕರಣ – ಗ್ರಾಮಾಡಳಿತದಿಂದ ವಿವಿಧ ವಾರ್ಡ್ ಗಳಲ್ಲಿ ಔಷದಿ ಸಿಂಪಡಣೆ

Ripponpete | ಹೆಚ್ಚುತ್ತಿರುವ ಡೆಂಗ್ಯೂ ಪ್ರಕರಣ – ಗ್ರಾಮಾಡಳಿತದಿಂದ ವಿವಿಧ ವಾರ್ಡ್ ಗಳಲ್ಲಿ ಔಷದಿ ಸಿಂಪಡಣೆ


ರಿಪ್ಪನ್‌ಪೇಟೆ : ಮಳೆಗಾಲ ಪ್ರಾರಂಭವಾಗಿರುವ ಹಿನ್ನಲೆಯಲ್ಲಿ ಪಟ್ಟಣದ ವ್ಯಾಪ್ತಿಯಲ್ಲಿ ಹಲವಾರು ಡೆಂಗ್ಯೂ ಪ್ರಕರಣಗಳು ಕಂಡುಬಂದ ಹಿನ್ನಲೆಯಲ್ಲಿ ಗ್ರಾಮಾಡಳಿತ ಹಾಗೂ ಆರೋಗ್ಯ ಇಲಾಖೆ ವತಿಯಿಂದ ಮುಂಜಾಗ್ರತಾ ಕ್ರಮವಾಗಿ ಸಾಂಕ್ರಾಮಿಕ ರೋಗ ತಡೆಗಟ್ಟವ ನಿಟ್ಟಿನಲ್ಲಿ ಹಾಗೂ ಸೊಳ್ಳೆಗಳ ನಿಯಂತ್ರಣಕ್ಕಾಗಿ ಗ್ರಾಪಂ ವ್ಯಾಪ್ತಿಯಲ್ಲಿ ಬರುವ ವಿವಿಧ ವಾರ್ಡ್ ಗಳಲ್ಲಿ ಕ್ರಿಮಿನಾಶಕ ಔಷಧ ಸಿಂಪಡಣೆ ಕಾರ್ಯ ನಡೆಯಿತು.

ಪಟ್ಟಣದ ಗಾಂಧಿನಗರ , ಮದೀನಾ ಕಾಲೋನಿ‌ ಹಾಗೂ ವಿವಿಧ ವಾರ್ಡ್ ಗಳಲ್ಲಿ ಸಾಂಕ್ರಾಮಿಕ ರೋಗಗಳನ್ನು ತಡೆಯುವ ನಿಟ್ಟಿನಲ್ಲಿ ಔಷದಿ ಸಿಂಪಡಣೆ ಕಾರ್ಯ ನಡೆಯಿತು.ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಹಾಗೂ ಗ್ರಾಮಾಡಳಿತ ಜಂಟಿಯಾಗಿ ವಿವಿಧ ಸ್ಥಳಗಳಲ್ಲಿ ಸಮೀಕ್ಷೆ ನಡೆಸಿ ಸಾರ್ವಜನಿಕರಿಗೆ ಮುಂಜಾಗ್ರತಾ ಕ್ರಮಗಳ ಅರಿವು ಮೂಡಿಸಿದರು.


ಈ ಸಂಧರ್ಭದಲ್ಲಿ ಮಾತನಾಡಿದ ಗ್ರಾಪಂ ಅಧ್ಯಕ್ಷೆ ಧನಲಕ್ಷ್ಮಿ ಗಂಗಾಧರ್ ಮಳೆ ಬಂದಾಗ ನೀರು ಸಂಗ್ರಹವಾಗಿ ಸೊಳ್ಳೆಗಳ ಸಂತತಿ ಜಾಸ್ತಿಯಾಗಲಿದ್ದು, ಔಷಧ ಸಿಂಪಡಣೆ ಮೂಲಕ ನಿಯಂತ್ರಿಸಬೇಕಿದೆ. ಹೂವಿನ ಕುಂಡಗಳು, ಬಿಸಾಡಿದ ಟೈರ್‌ಗಳು, ನೀರು ಸಂಗ್ರಹ ತೊಟ್ಟಿ, ನೀರಿನ ಬಾಟಲಿ ಸೇರಿದಂತೆ ಇತರೆಡೆ ಸೊಳ್ಳೆಗಳು ಉತ್ಪತ್ತಿಯಾಗುತ್ತವೆ. ಹೀಗಾಗಿ, ಇಂಥ ಕಡೆ ನೀರು ಸಂಗ್ರಹವಾಗದಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗಿದೆ,” ಎಂದರು.


ಡೆಂಗೆ ನಿಯಂತ್ರಿಸುವ ನಿಟ್ಟಿನಲ್ಲಿ ಸಾಮಾಜಿಕ ಜಾಲತಾಣ, ವಾರ್ಡ್‌ ಮಟ್ಟದಲ್ಲಿ ಜಾಗೃತಿ ಹಾಗೂ ಕಸದ ವಾಹನಗಳಲ್ಲಿ ಧ್ವನಿವರ್ಧಕಗಳ ಮೂಲಕ ನಾಗರಿಕರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಲಾಗುತ್ತಿದೆ. ಜತೆಗೆ, ಮನೆ- ಮನೆಗೆ ಡೆಂಗೆ ನಿಯಂತ್ರಣ ಕುರಿತ ಭಿತ್ತಿಪತ್ರಗಳನ್ನು ವಿತರಿಸಿ, ಪಾಲಿಸಬೇಕಾದ ಕ್ರಮಗಳ ಬಗ್ಗೆಯೂ ಅರಿವು ಮೂಡಿಸಲಾಗುತ್ತಿದೆ ಎಂದು ತಿಳಿಸಿದರು.

ಈ ಸಂಧರ್ಭದಲ್ಲಿ ಗ್ರಾಪಂ ಉಪಾಧ್ಯಕ್ಷ ಸುಧೀಂದ್ರ ಪೂಜಾರಿ ,ಆರೋಗ್ಯ ಇಲಾಖೆಯ ಡಾ ಆಂಜನೆಯ , ಅಮೃತೇಶ್ ಪಿಡಿಓ ಮಧುಸೂಧನ್ ಗ್ರಾಪಂ ಸದಸ್ಯರಾದ ಮಧುಸೂಧನ್ , ಗಣಪತಿ ಗವಟೂರು , ಮಹಾಲಕ್ಷ್ಮಿ ಅಣ್ಣಪ್ಪ , ನಿರುಪಮಾ ರಾಕೇಶ್ ,ಪ್ರಕಾಶ್ ಪಾಲೇಕರ್ , ಸಾರಾಭಿ ಸಿಬ್ಬಂದಿಗಳಾದ  ನಾಗೇಶ್ , ಉಮೇಶ್ ಹಾಗೂ ಇನ್ನಿತರರಿದ್ದರು.

Leave a Reply

Your email address will not be published. Required fields are marked *