Sagara | ಅಕ್ರಮ ಗಾಂಜಾ ಮಾರಾಟ – ಮೂವರ ಬಂಧನ
ಸಾಗರ : ಅಕ್ರಮವಾಗಿ ಗಾಂಜಾ ಮಾರಾಟ ಮಾಡುತಿದ್ದ ಆರೋಪದಡಿಯಲ್ಲಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳಿಂದ 790 ಗ್ರಾಂ ಒಣ ಗಾಂಜಾವನ್ನ ವಶಪಡಿಸಿಕೊಳ್ಳಲಾಗಿದೆ.
ಸಾಗರ ಟೌನ್ ಎಳ್ಳಾರೆ ಕ್ರಾಸ್ ನ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಗಾಂಜಾವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ಎಸ್ಪಿ ಮಿಥುನ್ ಕುಮಾರ್ ಜಿ.ಕೆ ಐಪಿಎಸ್, ಅಡಿಷನಲ್ ಎಸ್ಪಿ ಅನಿಲ್ ಕುಮಾರ್ ಭೂಮಾರೆಡ್ಡಿ,
ಮತ್ತು ಕಾರಿಯಪ್ಪ ಎ.ಜಿ, ಶಿವಮೊಗ್ಗ ಜಿಲ್ಲೆರವರ ಮಾರ್ಗದರ್ಶನದಲ್ಲಿ ಗೋಪಾಲ ಕೃಷ್ಣ ಟಿ ನಾಯಕ್, ಪೊಲೀಸ್ ಉಪಾಧೀಕ್ಷಕರು, ಸಾಗರ ಉಪ ವಿಭಾಗ ಹಾಗೂ ಸಾಗರ ಟೌನ್ ಪೊಲೀಸ್ ಠಾಣೆಯ ಪಿಐ ಸೀತಾರಾಂ, ರವರ ಮೇಲ್ವಿಚಾರಣೆಯಲ್ಲಿ, ಪಿಎಸ್ಐ ನಾಗರಾಜ್, ಟಿ. ಎಂ, ನೇತೃತ್ವದ ಸಿಬ್ಬಂಧಿಗಳ ತಂಡವು ಸ್ಥಳಕ್ಕೆ ಹೋಗಿ ದಾಳಿ ನಡೆಸಿದ್ದಾರೆ,
ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳಾದ 1) ರಾಘವೇಂದ್ರ, 42 ವರ್ಷ, ಕಟ್ಟಿನಕಾರು ಗ್ರಾಮ, ಸಾಗರ, 2) ರಮೇಶ, 20 ವರ್ಷ, ಹೊಸೂರು ಮರಾಠಿ ಗ್ರಾಮ, ಸಾಗರ ಮತ್ತು 3) ಪ್ರವೀಣ, 26 ವರ್ಷ, ಕದರೂರು ಗ್ರಾಮ, ಸಾಗರ ಇವರನ್ನು ದಸ್ತಗಿರಿ ಮಾಡಿ ಸದರಿ ಆರೋಪಿಗಳಿಂದ ಅಂದಾಜು ಮೌಲ್ಯ 23,000/- ರೂಗಳ 790 ಗ್ರಾಂ ತೂಕದ ಒಣ ಗಾಂಜಾವನ್ನು ಅಮಾನತ್ತು ಪಡಿಸಿಕೊಂಡಿದ್ದಾರೆ,
ಸಾಗರ ಪೇಟೆ ಪೊಲೀಸ್ ಠಾಣೆಯಲ್ಲಿ ಗುನ್ನೆ ಸಂಖ್ಯೆ 0144/2024 ಕಲಂ 20(a), 20(c)(ii)(a) NDPS ಕಾಯ್ದೆ ರೀತ್ಯಾ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತದೆ.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್