Shivamogga | ಬಿಜೆಪಿ ಹಿರಿಯ ಮುಖಂಡ ಎಂ ಬಿ ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ – ಬೆಲೆ ಏರಿಕೆ ವಿರುದ್ದ ಪ್ರತಿಭಟನೆ ವೇಳೆ ಕುಸಿದು ಬಿದ್ದ ಭಾನುಪ್ರಕಾಶ್
ಕಾಂಗ್ರೆಸ್ ವಿರುದ್ದ ಬೆಲೆ ಏರಿಕೆ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಬಿಜೆಪಿ ಹಿರಿಯ ಮುಖಂಡ ಭಾನುಪ್ರಕಾಶ್ರವರಿಗೆ ಹೃದಯಾಘಾತವಾಗಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಶಿವಮೊಗ್ಗದಲ್ಲಿ ಬೆಲೆ ಏರಿಕೆ ವಿರೂದ ಪ್ರತಿಭಟನೆ ನಡೆಸುತಿದ್ದ ವೇಳೆ ಹೃದಯಾಘಾತವಾಗಿದ್ದು ತಕ್ಷಣವೇ ಅವರನ್ನ ಶಿವಮೊಗ್ಗದ ಮ್ಯಾಕ್ಸ್ ಆಸ್ಪತ್ರೆಗೆ ಕರೆತರಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಭಾನುಪ್ರಕಾಶ್ ಸಾವನ್ನಪ್ಪಿದ್ದಾರೆ ಎನ್ನಲಾಗುತ್ತಿದೆ.
ಶಿವಮೊಗ್ಗದಲ್ಲಿಂದು ರಾಜ್ಯ ಸರ್ಕಾರ ಪೆಟ್ರೋಲ್ ಬೆಲೆ ಏರಿಕೆ ಮಾಡಿರುವುದನ್ನ ಖಂಡಿಸಿ ಬಿಜೆಪಿ ಪ್ರತಿಭಟನೆ ನಡೆಸ್ತಿತ್ತು. ಪ್ರತಿಭಟನೆಯಲ್ಲಿ ಭಾಷಣದ ಮುಗಿಸಿ ಮನೆಗೆ ಹೊರಟಿದ್ದ ಭಾನುಪ್ರಕಾಶ್ರವರಿಗೆ ತೀವ್ರ ಎದೆನೋವು ಕಾಣಿಸಿಕೊಂಡಿದೆ. ತಕ್ಷಣವೇ ಅವರನ್ನ ಮ್ಯಾಕ್ಸ್ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎನ್ನಲಾಗುತ್ತಿದೆ.