ಗರ್ತಿಕೆರೆ ಪ್ರೌಡಶಾಲೆಗೆ SSLC ಪರೀಕ್ಷೆಯಲ್ಲಿ 100% ಫಲಿತಾಂಶ – ನಾಗರೀಕರಿಂದ ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕರಿಗೆ ಸನ್ಮಾನ
ರಿಪ್ಪನ್‌ಪೇಟೆ : ಗರ್ತಿಕೆರೆ ಗ್ರಾಮದಲ್ಲಿ 1986 ನೇ ಇಸವಿಯಲ್ಲಿ ಪ್ರಾರಂಭವಾದ ಸರ್ಕಾರಿ ಪ್ರೌಢಶಾಲೆಯಲ್ಲಿ ಈ ಬಾರಿ 100% ಫಲಿತಾಂಶ ಬಂದಿರುವ ಹಿನ್ನಲೆಯಲ್ಲಿ ನಾಗರೀಕ ಸಮಿತಿ ವತಿಯಿಂದ ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕರುಗಳಿಗೆ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಗರ್ತಿಕೆರೆ ಪಟ್ಟಣದ ನಾಗರೀಕ ಸಮಿತಿ ವತಿಯಿಂದ ಗ್ರಾಪಂ ಮಾಜಿ ಅಧ್ಯಕ್ಷ ಬಶೀರ್ ಅಹಮದ್ ರವರ ನೇತೃತ್ವದಲ್ಲಿ ಸರ್ಕಾರಿ ಪ್ರೌಢಶಾಲೆಗೆ SSLC ಪರೀಕ್ಷೆಯಲ್ಲಿ 100% ಫಲಿತಾಂಶ ಬಂದಿರುವ ಹಿನ್ನಲೆಯಲ್ಲಿ ಶಾಲೆಯ ಶಿಕ್ಷಕರುಗಳಿಗೆ ಪೌರ ಸನ್ಮಾನ ಹಾಗೂ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 17 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಈ ಸಂಧರ್ಭದಲ್ಲಿ ಮಾತನಾಡಿದ ಅಮೃತ ಗ್ರಾಪಂ ಮಾಜಿ ಅಧ್ಯಕ್ಷ ಬಶೀರ್ ಅಹಮದ್ 1986 ನೇ ಇಸವಿಯಲ್ಲಿ ಪ್ರಾರಂಭವಾದ ಈ ಶಾಲೆಯಲ್ಲಿ ಹಲವಾರು ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡಿ ಜೀವನ ಕಟ್ಟಿಕೊಂಡಿದ್ದಾರೆ.ಈ ಶಾಲೆಯ ಬಗ್ಗೆ ಗರ್ತಿಕೆರೆ ವ್ಯಾಪ್ತಿಯ ಸಾರ್ವಜನಿಕರಿ ವಿಶೇಷವಾದ ಗೌರವವಿದೆ ಈ ಶಾಲೆಯಲ್ಲಿರು ಅತ್ಯುತ್ತಮ ಭೋಧಕ ವರ್ಗದಿಂದ ಈ ಬಾರು ನೂರಕ್ಕೆ ನೂರು ಫಲಿತಾಂಶ ಬಂದಿರುವುದು ಸಂತಸ ತಂದಿದೆ ಆ ಹಿನ್ನಲೆಯಲ್ಲಿ ಸಾರ್ವಜನಿಕರೆಲ್ಲಾ ಸೇರಿ ಈ ಅಭಿನಂದನಾ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೇವೆ ಎಂದರು.
ಈ ಸಂಧರ್ಭದಲ್ಲಿ ಜಿಪಂ ಮಾಜಿ ಸದಸ್ಯ ಬಂಡಿ ರಾಮಚಂದ್ರ, ಗ್ರಾಪಂ ಅಧ್ಯಕ್ಷ ವಿಶ್ವನಾಥ್ , ಸಿಡಿಸಿ ಉಪಾಧ್ಯಕ್ಷ ಸೋಮಶೇಖರ್ ,ಎಸ್ ಡಿಎಂಸಿ ಅಧ್ಯಕ್ಷ ನಾಗೇಶ್ ,ಪ್ರಮುಖರಾದ ಹುಗುಡಿ ವರ್ತೇಶ್ ಹಾಗೂ ಇನ್ನಿತರರಿದ್ದರು.