ಗಾಂಜಾ ಮಾರಾಟ ಮಾಡುತಿದ್ದ ಇಬ್ಬರ ಬಂಧನ | Crime News

ಗಾಂಜಾ ಮಾರಾಟ ಮಾಡುತಿದ್ದ ಇಬ್ಬರ ಬಂಧನ | Crime News

ಗಾಂಜಾ ಗಿರಾಕಿಗಳ ಹೆಡೆಮುರಿ ಕಟ್ಟುವಲ್ಲಿ ಶಿವಮೊಗ್ಗ ಪೊಲೀಸರು ಯಶಸ್ವಿಯಾಗಿದ್ದು ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.

ಶಿವಮೊಗ್ಗ ನಗರದ ಹರ್ಷ ಫರ್ನ್ ಹತ್ತಿರದ ಪುರುದಾಳು ರಸ್ತೆಯಲ್ಲಿ  ಇಬ್ಬರು ವ್ಯಕ್ತಿಗಳು ಬೈಕ್ ನಿಲ್ಲಿಸಿಕೊಂಡು ಗಾಂಜಾ ಮಾರುತ್ತಿದ್ದಾರೆ ಎಂಬ ಮಾಹಿತಿಯೊಂದು ಪೊಲೀಸರಿಗೆ ಲಭ್ಯವಾಗಿದೆ.  

ಸರ್ಕಲ್ ಇನ್ಸ್ ಪೆಕ್ಟರ್ ಮಂಜುನಾಥ್ ಬಿ ಮತ್ತು  ಶಿವಪ್ರಸಾದ್, ಪಿಎಸ್ಐ ತುಂಗಾನಗರ ಪೊಲೀಸ್ ಠಾಣೆಯ ನೇತೃತ್ವದ ಸಿಬ್ಬಂದಿ ದಾಳಿ ನಡೆಸಿದ್ದಾರೆ.

ದಾಳಿಯಲ್ಲಿ 1) ಮಾಲತೇಶ ಜೆ, 32 ವರ್ಷ, ವಿನೋಬನಗರ, ಶಿವಮೊಗ್ಗ ಮತ್ತು 2)  ರಮೇಶ ವಿ, 25  ವರ್ಷ, ಶರಾವತಿ ನಗರ, ಶಿವಮೊಗ್ಗ ಇವರನ್ನು ದಸ್ತಗಿರಿ ಮಾಡಿದ್ದಾರೆ.  

ಆರೋಪಿತರಿಂದ ಅಂದಾಜು ಮೌಲ್ಯ 14,000/-  ರೂಗಳ 260 ಗ್ರಾಂ ತೂಕದ ಒಣ ಗಾಂಜಾ ಮತ್ತು ಕೃತ್ಯಕ್ಕೆ ಬಳಸಿದ ಬೈಕ್ ಅನ್ನು ಅಮಾನತ್ತು ಪಡಿಸಿಕೊಂಡು, ಆರೋಪಿತರ ವಿರುದ್ಧ  ತುಂಗಾನಗರ ಕ್ರೈಂ ಪೊಲೀಸ್ ಠಾಣೆ ಗುನ್ನೆ ಸಂಖ್ಯೆ 0306/2024  ಕಲಂ 20(b), 8(c) NDPS ಕಾಯ್ದೆ ರೀತ್ಯಾ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Leave a Reply

Your email address will not be published. Required fields are marked *