ರಿಪ್ಪನ್ಪೇಟೆ ಠಾಣೆಯ ಪಿಎಸ್ಐ ಅಗಿ ಪ್ರವೀಣ್ ಎಸ್ ಪಿ ಅಧಿಕಾರ ಸ್ವೀಕಾರ
ರಿಪ್ಪನ್ಪೇಟೆ : ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ವರ್ಗಾವಣೆಗೊಂಡಿದ್ದ ಜನಸ್ನೇಹಿ ಪಿಎಸ್ಐ ಪ್ರವೀಣ್ ಎಸ್ ಪಿ ಇಂದು ಪಟ್ಟಣದ ಠಾಣಾಧಿಕಾರಿಯಾಗಿ ಅಧಿಕಾರ ಸ್ವೀಕಾರ ಮಾಡಿದರು.
ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ಪ್ರವೀಣ್ ಎಸ್ ಪಿ ದಾವಣಗೆರೆ ಜಿಲ್ಲೆಯ ನ್ಯಾಮತಿ ಠಾಣೆಗೆ ವರ್ಗಾವಣೆಗೊಂಡಿದ್ದರು. ಕಳೆದ ನಾಲ್ಕು ತಿಂಗಳುಗಳಿಂದ ಪಟ್ಟಣದ ಪಿಎಸ್ಐ ಆಗಿ ಕಾರ್ಯನಿರ್ವಹಿಸಿದ್ದ ಖಡಕ್ ಪಿಎಸ್ಐ ನಿಂಗರಾಜ್ ಕೆ ವೈ ಹಾವೇರಿ ಜಿಲ್ಲೆಯ ಬಂಕಾಪುರ ಪೊಲೀಸ್ ಠಾಣೆ ವರ್ಗಾವಣೆಯಾಗಿದ್ದಾರೆ.
ಕಳೆದ ಒಂದು ವರ್ಷದಿಂದ ರಿಪ್ಪನ್ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜನಸ್ನೇಹಿ ಪೊಲೀಸ್ ಅಧಿಕಾರಿಯಾಗಿ ಕಾರ್ಯನಿರ್ವಹಿಸಿ ಜನ ಮೆಚ್ಚುಗೆಗೆ ಪಾತ್ರರಾಗಿದ್ದ ಪ್ರವೀಣ್ ಎಸ್ ಪಿ ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ನಾಲ್ಕು ತಿಂಗಳು ದಾವಣಗೆರೆ ಜಿಲ್ಲೆಯ ನ್ಯಾಮತಿ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದರು.
ಶಾಸಕ ಬೇಳೂರು ಗೋಪಾಲಕೃಷ್ಣ ಪರವಾಗಿ ಬೀಳ್ಕೊಡುಗೆ
ರಿಪ್ಪನ್ಪೇಟೆ ಠಾಣೆಯಿಂದ ಹಾವೇರಿ ಜಿಲ್ಲೆಯ ಬಂಕಾಪುರ ಪೊಲೀಸ್ ಠಾಣೆ ವರ್ಗಾವಣೆಗೊಂಡ ಪಿಎಸ್ಐ ನಿಂಗರಾಜ್ ರವರಿಗೆ ಶಾಸಕ ಬೇಳೂರು ಗೋಪಾಲಕೃಷ್ಣ ರವರ ಪರವಾಗಿ ಶಾಸಕರ ಆಪ್ತ ಕಾರ್ಯದರ್ಶಿ ಮಂಜು ಸಣ್ಣಕ್ಕಿ ಸನ್ಮಾನಿಸಿ ಬೀಳ್ಕೊಟ್ಟರು.
ಈ ಸಂಧರ್ಭದಲ್ಲಿ ಪಿಎಸ್ಐ ಪ್ರವೀಣ್ ಎಸ್ ಪಿ , ಸುದೀಪ್ ಹಾಗೂ ಇನ್ನಿತರರಿದ್ದರು