POSTMAN NEWS

ನೈಜ ಸುದ್ದಿ ನೇರ ಬಿತ್ತರ..

ಶಿವಮೊಗ್ಗ DCC ಬ್ಯಾಂಕ್ ನಿರ್ದೇಶಕರ ಚುನಾವಣೆ – ಶಾಸಕ ಬೇಳೂರು ಗೋಪಾಲಕೃಷ್ಣ ನಾಮಪತ್ರ ಸಲ್ಲಿಕೆ

ಶಿವಮೊಗ್ಗ DCC ಬ್ಯಾಂಕ್ ನಿರ್ದೇಶಕರ ಚುನಾವಣೆ – ಶಾಸಕ ಬೇಳೂರು ಗೋಪಾಲಕೃಷ್ಣ ನಾಮಪತ್ರ ಸಲ್ಲಿಕೆ


 ಶಿವಮೊಗ್ಗ ಡಿಸಿಸಿ ಬ್ಯಾಂಕ್ ನಿರ್ದೇಶಕರ ಚುನಾವಣೆಗೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಶಾಸಕ ಬೇಳೂರು ಗೋಪಾಲಕೃಷ್ಣ ಅವರು ನಾಮಪತ್ರ ಸಲ್ಲಿಸುವ ಮೂಲಕ ಅಧಿಕೃತವಾಗಿ ಅಖಾಡಕ್ಕೆ ಇಳಿದಿದ್ದಾರೆ.

ಜೂನ್‌ 28ರಂದು ಶಿವಮೊಗ್ಗದ ಬಾಲರಾಜ್ ಅರಸ್ ರಸ್ತೆಯಲ್ಲಿರುವ ಡಿಸಿಸಿ ಬ್ಯಾಂಕಿನ ಪ್ರಧಾನ ಕಚೇರಿಯಲ್ಲಿ ಮತದಾನಕ್ಕೆ ದಿನಾಂಕ ನಿಗದಿ ಪಡಿಸಲಾಗಿದೆ.

ಶಿವಮೊಗ್ಗ ಡಿಸಿಸಿ ಬ್ಯಾಂಕ್‌ಗೆ ವಿವಿಧ ಕ್ಷೇತ್ರಗಳಿಂದ ಒಟ್ಟು 13 ನಿರ್ದೇಶಕರ ಆಯ್ಕೆ ನಡೆಯಲಿದೆ. ಪ್ರತಿ ತಾಲ್ಲೂಕಿಗೆ ಒಬ್ಬರಂತೆ ವಿವಿಧ ಸಹಕಾರ ಸಂಘಗಳಿಂದ ಚುನಾಯಿಸಲ್ಪಡುವ ಪ್ರತಿನಿಧಿಗಳು, ಕೃಷಿ ಉತ್ಪನ್ನ ಮಾರಾಟ ಸಹಕಾರ ಸಂಘಗಳು, ಸಂಸ್ಕರಣ ಸಂಘಗಳ ವತಿಯಿಂದ ಇಬ್ಬರು ಸದಸ್ಯರು, ಪಟ್ಟಣ ಸಹಕಾರ ಸಂಘಗಳು ಮತ್ತು ವ್ಯವಸಾಯೇತರ ಸಹಕಾರ ಸಂಘಗಳ ವತಿಯಿಂದ ಇಬ್ಬರು, ಇನ್ನಿತರೆ ಸಹಕಾರ ಸಂಘಗಳಿಂದ ಇಬ್ಬರು ಸದಸ್ಯರ ಆಯ್ಕೆ ಪ್ರಕ್ರಿಯೆ ನಡೆಯಲಿದೆ.

ಡಿಸಿಸಿ ಬ್ಯಾಂಕ್‌ ನಿರ್ದೇಶಕರ ಸ್ಥಾನಕ್ಕೆ ಸ್ಪರ್ಧಿಸುವ ಅಭ್ಯರ್ಥಿಗಳಿಗೆ ನಾಮಪತ್ರ ಸಲ್ಲಿಸಲು ಜೂನ್‌ 12 ರಿಂದ ಜೂನ್‌ 20ರವರೆಗೆ ಅವಕಾಶವಿದೆ. ಜೂನ್‌ 21ರಂದು ನಾಮಪತ್ರ ಪರಿಶೀಲನೆ ನಡೆಸಲಾಗುತ್ತದೆ. ಅದೇ ದಿನ ನಾಮಪತ್ರ ಸಲ್ಲಿಸಿದ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಾಗುತ್ತದೆ.

ಜೂನ್‌.22ರಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 3 ಗಂಟೆವರೆಗೆ ನಾಮಪತ್ರ ಹಿಂಪಡೆಯಲು ಅವಕಾಶವಿದೆ. ಅಂತಿಮವಾಗಿ ಸ್ಪರ್ಧೆಯಲ್ಲಿ ಉಳಿದ ಅಭ್ಯರ್ಥಿಗಳ ಪಟ್ಟಿಯನ್ನು ಅದೇ ದಿನ ಪ್ರಕಟಿಸಲಾಗುತ್ತದೆ. ಅಲ್ಲದೆ ಅವಶ್ಯವಿದ್ದಲ್ಲಿ ಚುನಾವಣೆ ಚಿಹ್ನೆಗಳನ್ನು ಹಂಚಿಕೆ ಮಾಡಲಾಗುತ್ತದೆ. ಜೂನ್‌ 24ರಂದು ಚುನಾವಣೆ ಚಿಹ್ನೆಯೊಂದಿಗೆ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಾಗುತ್ತದೆ.

ಜೂನ್‌ 28ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆವರೆಗೆ ಡಿಸಿಸಿ ಬ್ಯಾಂಕ್‌ ಪ್ರಧಾನ ಕಚೇರಿ ಕಟ್ಟಡದಲ್ಲಿ ಮತದಾನ ನಡೆಯಲಿದೆ. ಮತದಾನ ಮುಗಿಯುತ್ತಿದ್ದಂತೆ ಎಣಿಕೆ ಕಾರ್ಯ ನಡೆಯಲಿದೆ. ಪೂರ್ಣಗೊಳ್ಳುತ್ತಿದ್ದಂತೆ ಫಲಿತಾಂಶ ಪ್ರಕಟಿಸಲಾಗುತ್ತದೆ.

ನಿರ್ದೇಶಕ ಸ್ಥಾನಕ್ಕೆ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ನಾಮಪತ್ರ ಸಲ್ಲಿಕೆ

ಜೂನ್.12ರಿಂದ ನಾಮಪತ್ರ ಸಲ್ಲಿಕೆ ಆರಂಭಗೊಂಡಿದ್ದು, ಇಂದು ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಶಿವಮೊಗ್ಗ ಉಪವಿಭಾಗಾಧಿಕಾರಿ ಹಾಗೂ ಚುನಾವಣಾಧಿಕಾರಿಯೂ ಆಗಿರುವಂತ ಜಿಹೆಚ್ ಸತ್ಯನಾರಾಯಣ ಅವರಿಗೆ ತಮ್ಮ ಉಮೇಧುವಾರಿಕೆ ಸಲ್ಲಿಸಿದರು.

ನಾಳೆ ನಾಮಪತ್ರ ಸಲ್ಲಿಕೆಯ ಕೊನೆಯ ದಿನಾಂಕವಾಗಿದ್ದು, ಇದುವರೆಗೂ 16 ಜನ ನಾಮಪತ್ರ ಸಲ್ಲಿಕೆಯಾಗಿದೆ. ಇದುವರೆಗೂ 16 ಜನ ನಾಮಪತ್ರ ಸಲ್ಲಿಕೆಯಾಗಿದೆ.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.