ಲಯನ್ ಸಫಾರಿ ಬಳಿ ಭೀಕರ ಅಪಘಾತ – ಮೂವರು ಸಾವು..!!
 ಶಿವಮೊಗ್ಗ : ಇಲ್ಲಿನ ಲಯನ್ ಸಫಾರಿ ಬಳಿ ಭೀಕರ ಅಪಘಾತವಾಗಿ ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ.
 ಮುದ್ದಿನ ಕೊಪ್ಪದ ಬಳಿಯಲ್ಲಿ ಇನ್ನೋವಾ ಕಾರು ಹಾಗೂ ಸ್ವಿಫ್ಟ್ ಕಾರು ನಡುವೆ ಡಿಕ್ಕಿಯಾಗಿದೆ. ಶಿವಮೊಗ್ಗದಿಂದ ಸಾಗರ ಕಡೆಗೆ ಹೋಗುತ್ತಿದ್ದ ಇನ್ಹೋವಾ ಕಾರು ಹಾಗೂ ಆಯನೂರು ಕಡೆಯಿಂದ ಬರುತ್ತಿದ್ದ ಸ್ವಿಫ್ಟ್ ಕಾರಿನ ನಡುವೆ ಡಿಕ್ಕಿಯಾಗಿದೆ. 
 ಘಟನೆಯಲ್ಲಿ ಚಿತ್ರದುರ್ಗ ಮೂಲದ ಮೂವರು ಸಾವನ್ನಪ್ಪಿದ್ದಾರೆ ಎಂದು ಪ್ರಾಥಮಿಕ ಮಾಹಿತಿಯಲ್ಲಿ ತಿಳಿದು ಬಂದಿದ್ದು, ಪೊಲೀಸರು ಸ್ಥಳಕ್ಕೆ ತೆರಳಿದ್ದು ಸಂಪೂರ್ಣ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಾಗಿದೆ.
 ಘಟನೆಯಲ್ಲಿ ಎರಡು ಕಾರಿನಲ್ಲಿದ್ದ ಪ್ರಯಾಣಿಕರಿಗೆ ಗಾಯಗಾಳಾಗಿದ್ದು  ಶಿವಮೊಗ್ಗದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
  


