ಅನಾರೋಗ್ಯದಿಂದ ಯುವಕ ಸಾವು – ಕುಟುಂಬಸ್ಥರಿಂದ ವಾಮಚಾರದ ಶಂಕೆ | ದೂರು ದಾಖಲು
ರಿಪ್ಪನ್ಪೇಟೆ : ಯುವಕನೊಬ್ಬ ಅನಾರೋಗ್ಯದಿಂದ ಮೃತಪಟ್ಟಿದ್ದು ಕುಟುಂಬಸ್ಥರು ಇತ್ತೀಚಿಗೆ ಜಮೀನಿನ ವಿಚಾರದಲ್ಲಿ ನಡೆದ ಗಲಾಟೆ ಹಿನ್ನಲೆಯಲ್ಲಿ ವಾಮಚಾರದ ಶಂಕೆ ವ್ಯಕ್ತಪಡಿಸಿ ದೂರು ಸಲ್ಲಿಸಿರುವ ಘಟನೆ ನಡೆದಿದೆ.
ಕೋಡೂರು ಸಮೀಪದ ಹೊಸಳ್ಳಿಯ ನರೇಂದ್ರ (20) ಮೃತಪಟ್ಟ ದುರ್ಧೈವಿಯಾಗಿದ್ದಾರೆ.
ನಡೆದಿದ್ದೇನು..!?
ಹೊಸಳ್ಳಿ ಗ್ರಾಮದ ಟ್ರ್ಯಾಕ್ಟರ್ ಚಾಲಕನಾಗಿದ್ದ ನರೇಂದ್ರನಿಗೆ ಕಳೆದ ಒಂದು ತಿಂಗಳಿನಿಂದ ತೀವ್ರ ಜ್ವರ ಕಾಣಿಸಿಕೊಂಡಿತ್ತು ಈ ಹಿನ್ನಲೆಯಲ್ಲಿ ಹೊಸನಗರ ಹಾಗೂ ಶಿವಮೊಗ್ಗದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು.
ಆದರೆ 29/07/24 ರಂದು ತೀವ್ರ ಜ್ವರದ ಹಿನ್ನಲೆಯಲ್ಲಿ ಕೋಮಾ ಗೆ ತೆರಳಿ ಅಂದು ರಾತ್ರಿ ಮೃತಪಟ್ಟಿದ್ದಾನೆ.
ಕುಟುಂಬಸ್ಥರ ದೂರಿನಲ್ಲೇನಿದೆ..!!??
ಮೃತ ಯುವಕನ ಮನೆ ಹಾಗೂ ಎದುರುಗಡೆ ಮನೆಯವರ ನಡುವೆ ಇತ್ತೀಚೆಗೆ ಜಮೀನಿನ ವಿಚಾರದಲ್ಲಿ ಗಲಾಟೆಯಾಗಿತ್ತು ಅವರೇ ಏನಾದರೂ ವಾಮಚಾರ ನಡೆಸಿದ್ದಾರೆ ಎಂದು ದೂರು ದಾಖಲಿಸಿದ್ದಾರೆ.
ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು ರಿಪ್ಪನ್ಪೇಟೆ ಪೊಲೀಸ್ ಠಾಣೆಯಲ್ಲಿ “ಅಸಹಜ ಸಾವು”(UDR) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್