POSTMANNEWS

ನೈಜ ಸುದ್ದಿ ನೇರ ಬಿತ್ತರ..

ಕಾರು ಮತ್ತು ಬಸ್ಸಿನ ನಡುವೆ ಮುಖಾಮುಖಿ ಡಿಕ್ಕಿ – ಕಾರಿನ ಮೇಲೆ ಉರುಳಿಬಿದ್ದ ಬಸ್ | ಕಾರು ಚಾಲಕ ಸ್ಥಳದಲ್ಲಿಯೇ ಸಾವು Accident

ಕಾರು ಮತ್ತು ಬಸ್ಸಿನ ನಡುವೆ ಮುಖಾಮುಖಿ ಡಿಕ್ಕಿ – ಕಾರಿನ ಮೇಲೆ ಉರುಳಿಬಿದ್ದ ಬಸ್ | ಕಾರು ಚಾಲಕ ಸ್ಥಳದಲ್ಲಿಯೇ ಸಾವು

ಕಾರು ಹಾಗೂ ಬಸ್ ನಡುವೆ ನಡೆದ ಭೀಕರ ಅಪಘಾತದಲ್ಲಿ ವ್ಯಕ್ತಿಯೊಬ್ಬ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ದೇವಿಕೊಪ್ಪ ಗ್ರಾಮದ ಸಮೀಪದಲ್ಲಿ ನಡೆದಿದೆ.


ಮಾರುತಿ ಓಮಿನಿ ಕಾರು ಹಾಗೂ ಖಾಸಗಿ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ನಂತರ ಕಾರಿನ ಮೇಲೆ ಬಸ್ ಉರುಳಿಬಿದ್ದಿದೆ ಘಟನೆಯಲ್ಲಿ ಕಾರು ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಆನವಟ್ಟಿ ಕಡೆಯಿಂದ ಶಿರಾಳಕೊಪ್ಪಕ್ಕೆ ಬರುತ್ತಿದ್ದ ಖಾಸಗಿ ಬಸ್‌ಗೆ  ಶಿರಾಳಕೊಪ್ಪದ ಕಡೆದಿಂದ ಹೋಗುತ್ತಿದ್ದ ಮಾರುತಿ ಓಮಿನಿ ಕಾರು ಡಿಕ್ಕಿಯಾದ ರಭಸಕ್ಕೆ ಬಸ್‌ ಪಲ್ಟಿಯಾಗಿ ರಸ್ತೆ ಮೇಲೆಯೇ ಉರುಳಿ ಬಿದ್ದಿದೆ. ಹೀಗೆ ಬಿದ್ದ ಬಸ್‌ ಕಾರಿನ ಮೇಲೆಯೇ ಬಿದ್ದಿದ್ದರಿಂದ ಕಾರು ಅಪ್ಪಚ್ಚಿಯಾಗಿ ಸ್ಥಳದಲ್ಲಿಯೇ ಕಾರಿನ ಡ್ರೈವರ್‌ ಸಾವನ್ನಪ್ಪಿದ್ದಾನೆ.

ಇನ್ನೂ ಬಸ್‌ನಲ್ಲಿದ್ದ ಕೆಲವು ಪ್ರಯಾಣಿಕರುಗಳಿಗೆ ಸಣ್ಣಪುಟ್ಟ ಗಾಯಾಗಳಾಗಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.ಬಸನಲ್ಲಿದ್ದ ಕೆಲಚಾನ್ನು ಬಸ್ಸಿನ ಗ್ಲಾಸು ಓಡೆದು ಹೊರತೆಗೆಯಲಾಗಿದೆ.

ಸ್ಥಳಕ್ಕೆ ಪೊಲೀಸರು ತೆರಳಿದ್ದು ಮುಂದಿನ ಕ್ರಮ ಕೈಗೊಂಡಿದ್ದಾರೆ.

About The Author

Leave a Reply

Your email address will not be published. Required fields are marked *

Exit mobile version