ಫೋನ್ ನಲ್ಲಿ ಬೇರೆಯವರೊಂದಿಗೆ ಮಾತನಾಡಿದ್ದಕ್ಕೆ ಪತ್ನಿಯನ್ನು ಗುಂಡಿಕ್ಕಿ ಕೊಂದ ಪತಿರಾಯ | KODAGU News

ಫೋನ್ ನಲ್ಲಿ ಬೇರೆಯವರೊಂದಿಗೆ ಮಾತನಾಡಿದ್ದಕ್ಕೆ ಪತ್ನಿಯನ್ನು ಗುಂಡಿಕ್ಕಿ ಕೊಂದ ಪತಿರಾಯ |

ಬೇರೆಯವರೊಂದಿಗೆ ಫೋನ್‌ನಲ್ಲಿ ಮಾತನಾಡುತಿದ್ದಾಳೆಂದು ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನೇ ಗುಂಡಿಕ್ಕಿ ಕೊಂದು, ಬಳಿಕ ತಾನೇ ಪೊಲೀಸರಿಗೆ ಶರಣಾಗಿರುವ ಘಟನೆ ಕೊಡಗು (Kodagu)ಜಿಲ್ಲೆಯ ವಿರಾಜಪೇಟೆ(virajapete) ತಾಲೂಕಿನ ಬೇಟೋಳಿ ಗ್ರಾಮದಲ್ಲಿ ನಡೆದಿದೆ.

ಶಿಲ್ಪಾ ಸೀತಮ್ಮ (40) ಮೃತ ದುರ್ದೈವಿ, ಪತಿ ನಾಯಕಂಡ ಬೋಪಣ್ಣ (45) ಗುಂಡಿಕ್ಕಿ ಕೊಂದ ಆರೋಪಿ. ತನ್ನ ಪತ್ನಿ ಫೋನ್‌ನಲ್ಲಿ ಬೇರೆಯವರೊಂದಿಗೆ ಮಾತನಾಡುತ್ತಿದ್ದುದ್ದಕ್ಕೆ ಆಕ್ಷೇಪಿಸಿದ ನಂತರ ಇಬ್ಬರ ನಡುವೆ ಜಗಳವಾಗಿ ಪತಿ ಗುಂಡಿಕ್ಕಿ(gunshot) ಕೊಂದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಶಿಲ್ಪಾ ಸೀತಮ್ಮ ಗ್ರಾಮ ಪಂಚಾಯಿತಿ ಮಾಜಿ ಸದಸ್ಯೆ. 2012 ರಿಂದ 2017ರ ವರೆಗೆ ಬೇಟೋಳಿ ಗ್ರಾಮ ಪಂಚಾಯತಿ ಸದಸ್ಯರಾಗಿ ಸೇವೆಸಲಿಸಿದ್ದರು. ಶುಕ್ರವಾರ (ಜು.19) ರಾತ್ರಿ ಬೇರೆಯವರೊಂದಿಗೆ ಫೋನ್‌ನಲ್ಲಿ ಮಾತನಾಡುತ್ತಿದ್ದರು. ಇದೇ ವಿಚಾರವಾಗಿ ಇಬ್ಬರ ನಡುವೆ ಗಲಾಟೆ ನಡೆದಿತ್ತು. ಇಂದು (ಶನಿವಾರ) ಬೆಳಗ್ಗೆಯೂ ಪತಿ ಆಕ್ಷೇಪಿಸಿದ್ದ, ಇದರಿಂದ ಇಬ್ಬರ ನಡುವೆ ಜಗಳ ಏರ್ಪಟ್ಟಿತ್ತು, ಕೊನೆಗೆ ಜಗಳ ವಿಕೋಪಕ್ಕೆ ತಿರುಗಿ ಪತಿಯೇ ಗುಂಡಿಕ್ಕಿ ಕೊಂದಿದ್ದಾನೆ. ಹತ್ಯೆ ಮಾಡಿ ಪೊಲೀಸರಿಗೆ ತಾನೇ ಶರಣಾಗಿದ್ದಾನೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

17 ವರ್ಷದ ಹಿಂದೆ ಪರಸ್ಪರ ಪ್ರೀತಿಸಿ ಇಬ್ಬರು ಮದುವೆಯಾಗಿದ್ದರು, ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಅಲ್ಲದೇ ಬೋಪಣ್ಣ ವಿರಾಜಪೇಟೆ ತಾಲ್ಲೂಕಿನ ಅರ್ಜಿ ಗ್ರಾಮದಲ್ಲಿ ಸರ್ವಿಸ್ ಸ್ಟೇಷನ್ ಹಾಗೂ ಕಾಫಿ ತೋಟದ ಮಾಲೀಕನಾಗಿದ್ದ. ಕಳೆದ ಕೆಲ ದಿನಗಳಿಂದ ಗಂಡ-ಹೆಂಡತಿ ನಡುವೆ ಪರಸ್ಪರ ಭಿನ್ನಾಭಿಪ್ರಾಯ ಉಂಟಾಗಿತ್ತು. ಆದ್ರೆ ಶುಕ್ರವಾರ ರಾತ್ರಿ ಗಲಾಟೆ ದೊಡ್ಡದಾಗಿ ನಡೆದಿತ್ತು ಎನ್ನಲಾಗಿದೆ.

ಪತ್ನಿಯನ್ನು ಹತ್ಯೆಗೈದ ಬಳಿಕ ಬೋಪಣ್ಣ ಪೊಲೀಸ್ ಠಾಣೆಗೆ ಕೋವಿಯೊಂದಿಗೆ ಬಂದು ಶರಣಾಗಿದ್ದಾನೆ. ಬಳಿಕ ಘಟನಾ ಸ್ಥಳಕ್ಕೆ ವಿರಾಜಪೇಟೆ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಿರಾಜಪೇಟೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Share
Published by
ರಫ಼ಿ ರಿಪ್ಪನ್ ಪೇಟೆ

Recent Posts

ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ

ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ A man identified…

1 day ago

ಚಾನೆಲ್‌ನಲ್ಲಿ ಈಜಲು ತೆರಳಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ನೀರುಪಾಲು

ಚಾನೆಲ್‌ನಲ್ಲಿ ಈಜಲು ತೆರಳಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ನೀರುಪಾಲು SSLC student Krishna drowned while swimming in Tunga Channel…

1 day ago

ಶಿವಮೊಗ್ಗದಲ್ಲಿ ಶಾಂತಿಯುತವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ

ಶಿವಮೊಗ್ಗದಲ್ಲಿ ಶಾಂತಿಯುತವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ Shivamogga witnessed a grand and peaceful Eid Milad procession…

1 day ago

ಹುಂಚ ಆಸ್ಪತ್ರೆಯ ಶವಾಗಾರಕ್ಕೆ ಕೊನೆಗೂ ‘ಮುಹೂರ್ತ’: DHO ಭೇಟಿ, ಬಾಕಿ ಕಾಮಗಾರಿ ಆರಂಭ

ಹುಂಚ ಶವಾಗಾರಕ್ಕೆ ಕೊನೆಗೂ ‘ಮುಹೂರ್ತ’: DHO ಭೇಟಿ, ಬಾಕಿ ಕಾಮಗಾರಿ ಆರಂಭ Postman News report brings action on…

1 day ago

ಸಿದ್ದರಮಟ್ಟಿ ಬಳಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, ₹31,350 ಮೌಲ್ಯದ ಗಾಂಜಾ ಜಪ್ತಿ

ಸಿದ್ದರಮಟ್ಟಿ ಬಳಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, ₹31,350 ಮೌಲ್ಯದ ಗಾಂಜಾ ಜಪ್ತಿ Two accused persons were…

1 day ago

ಬೀದಿ ನಾಯಿಗಳ ದಾಳಿಗೆ ಆರು ಕುರಿ ಮರಿಗಳು ಸಾವು

ಬೀದಿ ನಾಯಿಗಳ ದಾಳಿ: ಆರು ಕುರಿಗಳು ಸಾವು Six sheep belonging to a resident of Sagar were…

1 day ago