ಮನೆ ಕಳ್ಳತನವೆಸಗಿದ್ದ ಮೂವರು ಆರೋಪಿಗಳ ಬಂಧನ | Arrested

ಮನೆ ಕಳ್ಳತನವೆಸಗಿದ್ದ ಮೂವರು ಆರೋಪಿಗಳ ಬಂಧನ | Arrested

ಶಿವಮೊಗ್ಗ ನಗರದ ಬಾಪೂಜಿನಗರದಲ್ಲಿ ನಡೆದಿದ್ದ ಕಳ್ಳತನ ಪ್ರಕರಣವನ್ನು ಪತ್ತೆ ಹಚ್ಚುವಲ್ಲಿ ಕೋಟೆ ಪೊಲೀಸರು ಯಶಸ್ವಿಯಾಗಿದ್ದಾರೆ.

ಆರೋಪಿಗಳಾದ ಮೊಹಮ್ಮದ್ ರಫೀಕ್ @ ಕಾಣ 24 ವರ್ಷ, ಚಿಕ್ಕಲ್, ಶಿವಮೊಗ್ಗ ,ಅತಾವುಲ್ಲಾ, 29 ವರ್ಷ, ಬಾಪೂಜಿನಗರ.  ಶಿವಮೊಗ್ಗ, ರೂಮನ್ ಕುರೇಶಿ, 20 ವರ್ಷ ಬಾಪೂಜಿನಗರ, ಇವರುಗಳನ್ನು ಬಂಧಿಸಿ ಪ್ರಕರಣಕ್ಕೆ ಸಂಬಂಧಿಸಿದ  ಅಂದಾಜು ಮಾಲ್ಯ 15,40,500/- ರೂಗಳ 237 ಗ್ರಾಂ ಬಂಗಾರದ ಒಡವೆಗಳು ಮತ್ತು ಕೃತ್ಯಕ್ಕೆ  ಬಳಸಿದ ಅಂದಾಜು ಮೌಲ್ಯ 50,000/- ರೂ ಮೌಲ್ಯದ ಬೈಕ್   ಸೇರಿ ಒಟ್ಟು 15,90,500/- ರೂ ಗಳ  ಮಾಲನ್ನು ಅಮಾನತ್ತು ಪಡಿಸಿಕೊಳ್ಳಲಾಗಿದೆ.

ದಿನಾಂಕ: 29-06-2024 ರಂದು ರಾತ್ರಿ ಶಿವಮೊಗ್ಗ ಟೌನ್ ಬಾಪೂಜಿನಗರದ ಮಹಿಳೆಯೊಬ್ಬರ ವಾಸದ ಮನೆಯಲ್ಲಿ ಕಳ್ಳತನವಾಗಿತ್ತು.   ಕಳ್ಳರು ಸುಮಾರು 234 ಗ್ರಾಂ ತೂಕದ ಬಂಗಾರದ ಆಭರಣಗಳು ಮತ್ತು ಹಣವನ್ನು ಕಳ್ಳತನ ಮಾಡಿಕೊಂಡು ಹೋಗಿದ್ದರು. ಈ ಸಂಬಂಧ ಸಂತ್ರಸ್ತ ಮಹಿಳೆಯು ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು

ಪ್ರಕರಣದ ತನಿಖೆಯನ್ನು ಗುರುಬಸವರಾಜ್, ಹೆಚ್ ಪೋಲಿಸ್ ನಿರೀಕ್ಷಕರು ಕೋಟೆ ಪೊಲೀಸ್ ಠಾಣೆ ರವರ ನೇತೃತ್ವದ,  ಪಿ.ಎಸ್.ಐ  ಕುಮಾರ್, ಸಿ.ಆರ್.ಕೊಪ್ಪದ್   ಶ್ರೀಹರ್ಷ, ಎಎಸ್‌ಐ  ಹಾಗೂ ಸಿಬ್ಬಂಧಿಗಳಾದ ಹೆಚ್.ಸಿ. ಅಣ್ಣಪ್ಪ, ನಾಗರಾಜ, ಸಿಪಿಸಿ ರವರಾದ ಗೊರವರ ಅಂಜಿನಪ್ಪ, ಕಿಶೋರ, ಪ್ರಕಾಶ್, ರಂಗನಾಥ್ ರವರನ್ನು ಒಳಗೊಂಡ ತನಿಖಾ ತಂಡ ತನಿಖೆ ನಡೆಸಿತ್ತು. ಇದೀಗ ಪ್ರಕರಣದಲ್ಲಿ ಆರೋಪಿಗಳು ಪತ್ತೆಯಾಗಿದ್ದಾರೆ.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

7 hours ago

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

24 hours ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

24 hours ago

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು Ripponpete’s Niyaz Nasir wins first place in…

24 hours ago

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !?

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…

1 day ago

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…

1 day ago