ಕಾರು ಮತ್ತು ಲಾರಿ ನಡುವೆ ಅಪಘಾತ – 15 ಅಡಿ ಆಳದ ಕಂದಕಕ್ಕೆ ಉರುಳಿಬಿದ್ದ ಲಾರಿ | ತಪ್ಪಿದ ಭಾರಿ ಅನಾಹುತ

ಕಾರು ಮತ್ತು ಲಾರಿ ನಡುವೆ ಅಪಘಾತ – 15 ಅಡಿ ಆಳದ ಕಂದಕಕ್ಕೆ ಉರುಳಿಬಿದ್ದ ಲಾರಿ | ತಪ್ಪಿದ ಭಾರಿ ಅನಾಹುತ

ಕಾರು ಮತ್ತು ಲಾರಿ ನಡುವೆ ಅಪಘಾತ(accident) ಸಂಭವಿಸಿ ಎರಡು ವಾಹನ ನಜ್ಜುಗುಜ್ಜಾಗಿ ಲಾರಿ 15 ಅಡಿ ಆಳಕ್ಕೆ ಮಗುಚಿ ಬಿದ್ದ ಘಟನೆ  ಶಿವಮೊಗ್ಗ(Shivamogga) ಜಿಲ್ಲೆಯ ಹೊಸನಗರ ತಾಲ್ಲೂಕಿನ ಯಡೂರಿನಲ್ಲಿ(Yaduru) ನಡೆದಿದೆ.


ತೀರ್ಥಹಳ್ಳಿ(Thirthahalli) ಕಡೆಯಿಂದ ಬರುತ್ತಿದ್ದ ಲಾರಿ ಮತ್ತು ಮಾಸ್ತಿಕಟ್ಟೆ(Masthikatte) ಕಡೆಯಿಂದ ತೀರ್ಥಹಳ್ಳಿ ಕಡೆಗೆ ಹೋಗುತ್ತಿದ್ದ ಕಾರಿನ ನಡುವೆ ಯಡೂರು ಮುಖ್ಯರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ.

ಕಾರಿನಲ್ಲಿ‌ ನಾಲ್ಕು ಜನರಿದ್ದು ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಲಾರಿ 15 ಅಡಿ ಕೆಳಗೆ ಬಿದ್ದ ಕಾರಣ ಚಾಲಕನಿಗೆ ಸಣ್ಣ-ಪುಟ್ಟ ಗಾಯಗಳಾಗಿದೆ. ಗಾಯಳುಗಳಿಗೆ ಸಮೀಪದ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ.

ಕಾರಿನಲ್ಲಿ ಪ್ರಯಾಣಿಸುತಿದ್ದವರು  ಶಿವಮೊಗ್ಗ ಮೂಲದವರೆಂದು ತಿಳಿದು ಬಂದಿದ್ದು, ನಾಲ್ವರು ಪ್ರವಾಸಕ್ಕೆಂದು ಬಂದು ಯಡೂರಿನ ಆಮಂತ್ರಣ ರೆಸಾರ್ಟ್’ನಲ್ಲಿ ಉಳಿದುಕೊಂಡಿದ್ದರು. ಬುಧವಾರ ಹುಲಿಕಲ್ ಫಾಲ್ಸ್(hulikal falls) ನೋಡಿ ವಾಪಾಸಾಗುವ ವೇಳೆಗೆ ಈ ದುರ್ಘಟನೆ ನಡೆದಿದೆ.

ನಗರ(Nagara)ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Share
Published by
ರಫ಼ಿ ರಿಪ್ಪನ್ ಪೇಟೆ

Recent Posts

ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ

ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ A man identified…

1 day ago

ಚಾನೆಲ್‌ನಲ್ಲಿ ಈಜಲು ತೆರಳಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ನೀರುಪಾಲು

ಚಾನೆಲ್‌ನಲ್ಲಿ ಈಜಲು ತೆರಳಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ನೀರುಪಾಲು SSLC student Krishna drowned while swimming in Tunga Channel…

1 day ago

ಶಿವಮೊಗ್ಗದಲ್ಲಿ ಶಾಂತಿಯುತವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ

ಶಿವಮೊಗ್ಗದಲ್ಲಿ ಶಾಂತಿಯುತವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ Shivamogga witnessed a grand and peaceful Eid Milad procession…

1 day ago

ಹುಂಚ ಆಸ್ಪತ್ರೆಯ ಶವಾಗಾರಕ್ಕೆ ಕೊನೆಗೂ ‘ಮುಹೂರ್ತ’: DHO ಭೇಟಿ, ಬಾಕಿ ಕಾಮಗಾರಿ ಆರಂಭ

ಹುಂಚ ಶವಾಗಾರಕ್ಕೆ ಕೊನೆಗೂ ‘ಮುಹೂರ್ತ’: DHO ಭೇಟಿ, ಬಾಕಿ ಕಾಮಗಾರಿ ಆರಂಭ Postman News report brings action on…

1 day ago

ಸಿದ್ದರಮಟ್ಟಿ ಬಳಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, ₹31,350 ಮೌಲ್ಯದ ಗಾಂಜಾ ಜಪ್ತಿ

ಸಿದ್ದರಮಟ್ಟಿ ಬಳಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, ₹31,350 ಮೌಲ್ಯದ ಗಾಂಜಾ ಜಪ್ತಿ Two accused persons were…

1 day ago

ಬೀದಿ ನಾಯಿಗಳ ದಾಳಿಗೆ ಆರು ಕುರಿ ಮರಿಗಳು ಸಾವು

ಬೀದಿ ನಾಯಿಗಳ ದಾಳಿ: ಆರು ಕುರಿಗಳು ಸಾವು Six sheep belonging to a resident of Sagar were…

1 day ago