ಮುಂದುವರಿದ ವರುಣನ ಆರ್ಭಟ – ಶಿವಮೊಗ್ಗ ಜಿಲ್ಲೆಯ 4 ತಾಲೂಕಿನ ಶಾಲಾ ಕಾಲೇಜುಗಳಿಗೆ ಶುಕ್ರವಾರ ರಜೆ ಘೋಷಣೆ
ಶಿವಮೊಗ್ಗ ಜಿಲ್ಲಾದ್ಯಂತ ಕಳೆದೊಂದು ವಾರದಿಂದ ವ್ಯಾಪಕವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ 4 ತಾಲೂಕಿನ ಎಲ್ಲಾ ಅಂಗನವಾಡಿ, ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ವರುಣನ ಆರ್ಭಟ ಹೆಚ್ಚಾದ ಹಿನ್ನಲೆಯಲ್ಲಿ ಹೊಸನಗರ, ತೀರ್ಥಹಳ್ಳಿ, ಸಾಗರ ಮತ್ತು ಸೊರಬ ತಾಲ್ಲೂಕಿನ ಶಾಲೆ, ಕಾಲೇಜುಗಳಿಗೆ ಶುಕ್ರವಾರ ರಜೆ ಘೋಷಿಸಿ ಆಯಾ ತಾಲೂಕಿನ ತಹಶೀಲ್ದಾರರು ಆದೇಶ ಹೊರಡಿಸಿದ್ದಾರೆ.
ಶುಕ್ರವಾರವು ಮಲೆನಾಡಿನಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯ ಬಗ್ಗೆ ಹವಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿರುವ ಹಿನ್ನಲೆ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.