ವಿದ್ಯುತ್ ಕಂಬಕ್ಕೆ ಬಸ್ ಡಿಕ್ಕಿ , ಬಸ್ ಮೇಲೆ ಬಿದ್ದ ವಿದ್ಯುತ್ ತಂತಿ – ತಪ್ಪಿದ ಭಾರಿ ಅನಾಹುತ | accident
ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ಸೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಘಟನೆ ಸೋಮವಾರ ರಾತ್ರಿ ಪಿಳ್ಳಂಗೆರೆಯಲ್ಲಿ ಸಂಭವಿಸಿದೆ. ಅದೃಷ್ಟವಶಾತ್ ಯಾವುದೆ ಪ್ರಾಣ ಹಾನಿ ಸಂಭವಿಸಿಲ್ಲ.
ಶಿವಮೊಗ್ಗದಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಪಿಳ್ಳಂಗೆರೆ ಬಳಿ ತಿರುವಿನಲ್ಲಿ ಅಪಘಾತಕ್ಕೀಡಾಗಿದೆ.
ವಿದ್ಯುತ್ ಕಂಬ ಮತ್ತು ಓಮ್ನಿ ಕಾರಿಗೆ ಡಿಕ್ಕಿಯಾಗಿದೆ. ಬಸ್ ಚಾಲಕನಿಗೆ ಗಂಭೀರ ಸ್ವರೂಪದ ಗಾಯವಾಗಿದೆ ಎಂದು ತಿಳಿದು ಬಂದಿದೆ. ಕೆಲವು ಪ್ರಯಾಣಿಕರಿಗೂ ಸಣ್ಣಪುಟ್ಟ ಗಾಯವಾಗಿದೆ.
ವಿದ್ಯುತ್ ಕಂಬಕ್ಕೆ ಬಸ್ ಡಿಕ್ಕಿಯಾಗುತ್ತಿದ್ದಂತೆ ವಿದ್ಯುತ್ ವಯರ್ ಬಸ್ ಮೇಲೆ ಬಿದ್ದಿತ್ತು. ತಂತಿಯಲ್ಲಿ ಇನ್ನೂ ವಿದ್ಯುತ್ ಪ್ರವಹಿಸುತ್ತಿತ್ತು. ಇದೇ ವೇಳೆ ದಾರಿಯಲ್ಲಿ ತೆರಳುತ್ತಿದ್ದ ಇತರೆ ವಾಹನಗಳ ಪ್ರಯಾಣಿಕರು ಕೂಡಲೆ ರಕ್ಷಣೆಗೆ ಧಾವಿಸಿದ್ದರು. ವಿದ್ಯುತ್ ಪ್ರವಹಿಸುತ್ತಿರುವುದನ್ನು ಗಮನಿಸಿ ಕೂಡಲೆ ಮೆಸ್ಕಾಂಗೆ ಕರೆ ಮಾಡಿ ಮಾಹಿತಿ ತಿಳಿಸಿದ್ದರು. ಅಲ್ಲದೆ ಅಪಘಾತಕ್ಕೀಡಾದ ಬಸ್ಸಿನಿಂದ ಗಾಬರಿಯಿಂದ ಇಳಿಯುತ್ತಿದ್ದ ಪ್ರಯಾಣಿಕರಿಗೆ ವಯರ್ ಬಗ್ಗೆ ಎಚ್ಚರ ವಹಿಸುವಂತೆ ಕೂಗಿ ತಿಳಿಸಿ ಹಲವರ ಪ್ರಾಣ ರಕ್ಷಿಸಿದ್ದಾರೆ.
ಅಪಘಾತದ ಸದ್ದು ಕೇಳಿ ಪಿಳ್ಳಂಗೆರೆ ಗ್ರಾಮಸ್ಥರು ಕೂಡ ನೆರವಿಗೆ ಧಾವಿಸಿದರು. ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ತುರ್ತು ನೆರವು ನೀಡಿ, ಆಂಬುಲೆನ್ಸ್‌ಗೆ ಕರೆ ಮಾಡಿದ್ದರು. ಅದೃಷ್ಟವಶಾತ್ ದೊಡ್ಡ ಅನಾಹುತ ತಪ್ಪಿದಂತೆ ಆಗಿದೆ. ಶಿವಮೊಗ್ಗ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್