ಜ್ಞಾನದಿಂದ ಪ್ರಪಂಚವನ್ನೆ ಗೆಲ್ಲಬಹುದು – ಡಾ ಜಗದೀಶ್ ಹೊಸಮನಿ | Bankapura

ಜ್ಞಾನದಿಂದ ಪ್ರಪಂಚವನ್ನೆ ಗೆಲ್ಲಬಹುದು – ಡಾ ಜಗದೀಶ್ ಹೊಸಮನಿ | Bankapura

ಬಂಕಾಪುರ  :  ಈ ತಂತ್ರಜ್ಞಾನದ ಯುಗದಲ್ಲಿ ಸರ್ಕಾರಿ ಕಸಗೂಡಿಸುವನ ಕೆಲಸಕ್ಕೂ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಏರ್ಪಡಿಸಲಾಗುತ್ತಿದೆ.ಸಮಯ ವ್ಯರ್ಥ ಮಾಡದೇ ಅಧ್ಯಯನ ಮಾಡಿ ಸಾಧಕರಾಗಿ ಹೊರಹೊಮ್ಮುವಂತೆ  ವಿದ್ಯಾರ್ಥಿಗಳಾಗಬೇಕು. ಮನುಷ್ಯನನ್ನು ಕತ್ತಲೆಯಿಂದ ಬೆಳಕಿನೆಡೆಗೆ ವಯ್ಯುವ ಶಕ್ತಿ ಶಿಕ್ಷಣಕ್ಕಿದೆ. ಅಂತಹ ಜ್ಞಾನವನ್ನು ವಿದ್ಯಾರ್ಥಿಗಳು ಪಡೆದು ಕೊಂಡಾಗ ಪ್ರಪಂಚವನ್ನೇ ಗೆಲ್ಲಬಹುದು ಎಂದು ಹಾವೇರಿ ಜಿ.ಎಚ್. ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ| ಜಗದೀಶ್ ಹೊಸಮನಿ ಹೇಳಿದರು.

ಸರಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದಲ್ಲಿ ನಡೆದ ಸಾಂಸ್ಕೃತಿಕ, ಕ್ರೀಡಾ, ಎನ್.ಎಸ್. ಎಸ್., ರೆಡ್ ಕ್ರಾಸ್, ಸ್ಕೌಟ್ಸ್ ಮತ್ತು ಗೈಡ್ಸ್ ವಿಭಾಗಗಳ ಸಮಾರೋಪ ಹಾಗೂ ಬಿ.ಎ. ಮತ್ತು ಬಿ.ಕಾಂ ಅಂತಿಮ ವರ್ಷದ ವಿದ್ಯಾರ್ಥಿಗಳ ಬಿಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿ ವಿದ್ಯಾರ್ಥಿಗಳು ಬಂಕಾಪುರದ ಐತಿಹಾಸಿಕ ಇತಿಹಾಸವನ್ನು ಅರಿಯಬೇಕಿದೆ. ರಾಷ್ಟ್ರಕೂಟರ ಕಾಲದಲ್ಲಿ ಬಂಕರಸ ಆಡಳಿತ ಮಾಡಿದ  ಬಂಕಾಪುರ ಏಕಚಕ್ರನಗರ ಎಂಬ ಖ್ಯಾತನಾಮ ಪಡೆದುಕೊಂಡಿದೆ. ಆದಿ ಕವಿ ರನ್ನಮಯ ವಿದ್ಯಾರ್ಜನೆ ಹಾಡಿದ ಕೀರ್ತಿ ಬಂಕಾಪುರಕ್ಕಿದ್ದು, ಅದನ್ನರಿತು ವಿದ್ಯಾರ್ಥಿಗಳು ಶ್ರಮವಹಿಸಿ ಅಧ್ಯಯನ ಮಾಡಿದಾಗ ಬಂಕಾಪುರದ ಇತಿಹಾಸ ಮುಂದುವರೆಯಲಿದೆ ಎಂದರು. ಟಿಪ್ಪು ಸುಲ್ತಾನರು ಪ್ರಥಮ ಬಾರಿಗೆ ಬಂಕಾಪುರದಲ್ಲಿ ಮೊಹರಂ ಆಚರಣೆ ಮಾಡಿದ ಇತಿಹಾಸವಿದೆ. 1951 ರ ವರೆಗೆ ಬಂಕಾಪುರ ತಾಲೂಕು ಕೇಂದ್ರವಾಗಿ ಮೆರೆದಿತ್ತು. ಇಂತಹ ರಾಜ್ಯ ಆಡಳಿತ ಪ್ರದೇಶವಾಗಿದ್ದ ಬಂಕಾಪುರದ ಇತಿಹಾಸವನ್ನು ವಿದ್ಯಾರ್ಥಿಗಳು ಪುನರುತ್ಥಾನಗೊಳಿಸುವ ಅವಶ್ಯಕತೆ ಇದೆ ಎಂದು ಹೇಳಿದರು.

ಹಾವೇರಿ ಹೊಸಮಠದ ಬಸವ ಶಾಂತಲಿಂಗ ಸ್ವಾಮೀಜಿ ಸಭೆಯ  ಸಾನಿಧ್ಯ ವಹಿಸಿ ಆಶೀರ್ವಚನ ನೀಡಿ, ಹೆತ್ತ ತಂದೆ ತಾಯಿಯ ಋಣ ಹೊತ್ತು ಬೆಳೆಸುತ್ತಿರುವ ಭೂಮಿಯ ಋಣ ನಿಸ್ವಾರ್ಥಿತೆಯಿಂದ ವಿದ್ಯಾ ದಾನ ಮಾಡಿದ ಗುರುವಿನ ಋಣ ತೀರಿಸುವ ಮಕ್ಕಳಾಗಿ ಬಾಳುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಡಾ. ದಿನೇಶಪ್ಪ ಸಿಂಗಾಪುರ್, ಬಂಕಾಪುರ್ ಪುರಸಭೆಯ ಸದಸ್ಯರಾದ ಆಂಜನೇಯ ಗುಡಗೇರಿ ಮಾತನಾಡಿದರು. ಅಂತಿಮ ವರ್ಷದ ವಿದ್ಯಾರ್ಥಿಗಳು ತಮ್ಮ ಅನಿಸಿಕೆ ಹಂಚಿಕೊಂಡರು. ಸಭೆಯಲ್ಲಿ ಕಳೆದ ಬಾರಿ ಹೆಚ್ಚು ಅಂಕ ಪಡೆದ ಹಾಗೂ ಕ್ರೀಡೆ, ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಹಾಗೂ ಪಿಎಚಡಿ ಮಾಡಿದ ಉಪನ್ಯಾಸಕರನ್ನು ಸನ್ಮಾನಿಸಲಾಯಿತು.

ಕಾಲೇಜಿನ ಪ್ರಾಂಶುಪಾಲ ಡಾ. ರಮೇಶ್ ತೆವರಿ  ಸಭೆಯ ಅಧ್ಯಕ್ಷತೆ ವಹಿಸಿದ್ದರು. ಬಂಕಾಪುರ್  ಮುಖಂಡರಾದ ಅಶೋಕ್ ಶೆಟ್ಟರ್, ನೀಲಪ್ಪ ಸಣ್ಣಕ್ಕಿ, ರಾಜು ಬಡ್ಡಿ, ಉಪನ್ಯಾಸಕರಾದ ನಿಂಗಪ್ಪ ಕಲಕೋಟಿ,  ಡಾ.ಮಂದಾಕಿನಿ, ಲೂಬ್ನಾನಾಜ್, ಮಹದೇವಪ್ಪ, ಮಹೇಶ್, ವಿದ್ಯಾರ್ಥಿ ಪ್ರತಿನಿಧಿಗಳಾದ ಪ್ರವೀಣ್, ಅನಿತಾ ಸೇರಿದಂತೆ ಅತಿಥಿ ಉಪನ್ಯಾಸಕರು, ಸಿಬ್ಬಂದಿ, ವಿದ್ಯಾರ್ಥಿಗಳು ಮುಂತಾದ ಉಪಸ್ಥಿತರಿದ್ದರು.

ವರದಿ:  ನಿಂಗರಾಜ್ ಕೊಡಲ್
ಹಾವೇರಿ ಜಿಲ್ಲೆ ಬಂಕಾಪುರ
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ

ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ A man identified…

1 day ago

ಚಾನೆಲ್‌ನಲ್ಲಿ ಈಜಲು ತೆರಳಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ನೀರುಪಾಲು

ಚಾನೆಲ್‌ನಲ್ಲಿ ಈಜಲು ತೆರಳಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ನೀರುಪಾಲು SSLC student Krishna drowned while swimming in Tunga Channel…

1 day ago

ಶಿವಮೊಗ್ಗದಲ್ಲಿ ಶಾಂತಿಯುತವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ

ಶಿವಮೊಗ್ಗದಲ್ಲಿ ಶಾಂತಿಯುತವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ Shivamogga witnessed a grand and peaceful Eid Milad procession…

1 day ago

ಹುಂಚ ಆಸ್ಪತ್ರೆಯ ಶವಾಗಾರಕ್ಕೆ ಕೊನೆಗೂ ‘ಮುಹೂರ್ತ’: DHO ಭೇಟಿ, ಬಾಕಿ ಕಾಮಗಾರಿ ಆರಂಭ

ಹುಂಚ ಶವಾಗಾರಕ್ಕೆ ಕೊನೆಗೂ ‘ಮುಹೂರ್ತ’: DHO ಭೇಟಿ, ಬಾಕಿ ಕಾಮಗಾರಿ ಆರಂಭ Postman News report brings action on…

1 day ago

ಸಿದ್ದರಮಟ್ಟಿ ಬಳಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, ₹31,350 ಮೌಲ್ಯದ ಗಾಂಜಾ ಜಪ್ತಿ

ಸಿದ್ದರಮಟ್ಟಿ ಬಳಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, ₹31,350 ಮೌಲ್ಯದ ಗಾಂಜಾ ಜಪ್ತಿ Two accused persons were…

1 day ago

ಬೀದಿ ನಾಯಿಗಳ ದಾಳಿಗೆ ಆರು ಕುರಿ ಮರಿಗಳು ಸಾವು

ಬೀದಿ ನಾಯಿಗಳ ದಾಳಿ: ಆರು ಕುರಿಗಳು ಸಾವು Six sheep belonging to a resident of Sagar were…

1 day ago