BANKAPURA | ಕೆಸರು ಗದ್ದೆಯಂತಾದ ರಸ್ತೆ – ಸಾರ್ವಜನಿಕರ ಪರದಾಟ | ಈ ಕಾಲೋನಿಯ ನಿವಾಸಿಗಳ ಗೋಳು ಕೇಳುವವರ್ಯಾರು..!??

ಕೆಸರು ಗದ್ದೆಯಂತಾದ ರಸ್ತೆ – ಸಾರ್ವಜನಿಕರ ಪರದಾಟ | ಈ ಕಾಲೋನಿಯ ನಿವಾಸಿಗಳ ಗೋಳು ಕೇಳುವವರ್ಯಾರು..!??

ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಬಂಕಾಪುರ ಪಟ್ಟಣದ ಶರೀಫ್ ನಗರದ ಆಯನ ಹೊಂಡ ಹತ್ತಿರದ ರಸ್ತೆಯು ಮಳೆಯಿಂದಾಗಿ ಕೆಸರು ಗದ್ದೆಯಂತಾಗಿದ್ದು, ನಿವಾಸಿಗಳು ಪರದಾಡುವಂತಾಗಿದೆ.

ಪಟ್ಟಣದ ಷರೀಫ್ ನಗರದ ಆಯನಹೊಂಡ ಪಕ್ಕದ ಕಾಲೋನಿಗಳಿಗೆ ತೆರಳಲು ಕನಿಷ್ಠ ಕಚ್ಚಾ ರಸ್ತೆಯಿಲ್ಲ. ಹೀಗಾಗಿ ಈ ಕಾಲೊನಿ ಮಳೆಯಾದರೆ ಕೆಸರಿನಲ್ಲಿಯೇ ಓಡಾಡುಂತಾಗಿದೆ’ ಎಂದು ನಿವಾಸಿಗಳು ಗೋಳು ತೋಡಿಕೊಂಡಿದ್ದಾರೆ.


ಈಗ ಭಾರಿ ಮಳೆ ಸುರಿಯುತ್ತಿದ್ದು, ಮನೆಯಿಂದ ಹೊರಗೆ ಹೋಗಲು ಆಗುತ್ತಿಲ್ಲ. ಮೊಳಕಾಲುದ್ದ ಕೆಸರು ಆಗಿದೆ. ಹುಲ್ಲುಮುಳ್ಳಿನ ಪೊದೆ ಬೆಳೆದಿದೆ. ಇದರಿಂದ ಹಾವು, ಚೇಳಿನ ಭೀತಿ ಎದುರಾಗಿದೆ. ಮಕ್ಕಳು, ಮಹಿಳೆಯರು ಹೊರ ಬರಲು ಹೆದರುತ್ತಿದ್ದಾರೆ’ ಎಂದು ಗ್ರಾಮಸ್ಥರು ಪೋಸ್ಟ್ ಮ್ಯಾನ್ ಸುದ್ದಿಯೊಂದಿಗೆ ತಮ್ಮ ಗೋಳು ತೋಡಿಕೊಂಡರು.

ನೂರಾರು ಜನ ವಾಸಿಸುವ ಈ ಕಾಲೋನಿಗಳು ಇಲ್ಲಿಯವರೆಗೂ ಶುದ್ಧ ಕುಡಿಯುವ ನೀರಿನ ಘಟಕ ಕಂಡಿಲ್ಲ. ಸಮರ್ಪಕ ರಸ್ತೆ, ಚರಂಡಿ ಇಲ್ಲದ ಕಾರಣ ಗ್ರಾಮದಲ್ಲಿ ಸ್ವಚ್ಛತೆ ಎಂಬುದು ಮರೀಚಿಕೆಯಾಗಿದೆ.

ಆಯನ ಹೊಂಡದ ಹತ್ತಿರ ಇರುವ ರಸ್ತೆಗೆ ಅತಿಯಾದ ಮಳೆಯಾಗಿದ್ದರಿಂದ ಹೆಸರಿನಲ್ಲಿ ನಡೆದಾಡುವ ಪರಿಸ್ಥಿತಿ ಬಂದಿದೆ. ಈ ಸ್ಥಳವನ್ನು ದುರಸ್ತಿ ಪಡಿಸುವುದಕ್ಕೆ  ಯಾವುದೇ ಅಧಿಕಾರಿಗಳು ಮುಂದಾಗಿಲ್ಲ. ಈ ಕೆಸರಿನ ರಸ್ತೆಯಲ್ಲಿ ಹಲವಾರು ಜನರು ಬಿದ್ದು ಅಪಘಾತಗಳಾಗಿವೆ, ಕೈ ಕಾಲುಗಳ ಮುರಿದುಕೊಂಡಿದ್ದಾರೆ.


ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ತವರು ಕ್ಷೇತ್ರವಾದ ಬಂಕಾಪುರ ಪಟ್ಟಣದಲ್ಲಿ  ಅಧಿಕಾರಿಗಳ ನಿರ್ಲಕ್ಷ ,ದುರ್ವ್ಯವಸ್ಥೆಯಿಂದ ಸಾರ್ವಜನಿಕರ ಪರದಾಡುವಂತಾಗಿದೆ.

ಈ ಬಗ್ಗೆ ಸಂಬಂಧಪಟ್ಟ ಪುರಸಭೆ ಕಛೇರಿಗೆ ಹಲವಾರು ಬಾರಿ ಮನವಿಯನ್ನು ಸಲ್ಲಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎನ್ನುತ್ತಾರೆ ಸ್ಥಳೀಯರು.

ಇನ್ನಾದರೂ ಸಂಬಂಧಪಟ್ಟ ಇಲಾಖೆಯವರು ಇತ್ತ ಗಮನಹರಿಸಿ ಈ ಸಮಸ್ಯೆಗೆ ಪರಿಹಾರ ದೊರಕಿಸಿಕೊಡುತ್ತಾರೋ ಕಾದುನೋಡಬೇಕಾಗಿದೆ..


ಈ ರಸ್ತೆಯಲ್ಲಿ ಸಂಚರಿಸುವಾಗ ಜೀವ ಎಡಗೈಯಲ್ಲಿ ಹಿಡಿದುಕೊಂಡು ಸಂಚರಿಸುವಂತಾಗಿದೆ. ಇಲ್ಲಿ ಯಾವುದೇ ಅಧಿಕಾರಿಗಳು ಬಂದು ಸ್ಥಳ ಪರಿಶೀಲನೆ  ವೀಕ್ಷಣೆ ಮಾಡಿಲ್ಲ. ಸಾರ್ವಜನಿಕರನ್ನು ಸೇರಿಕೊಂಡು ಹಲವಾರು ಬಾರಿ ಪುರಸಭೆಗೆ ಮನವಿಯನ್ನು ಸಲ್ಲಿಸಿದ್ದೇವೆ . ಪುರಸಭೆಯಿಂದ ಯಾವುದೇ ರೀತಿಯ ಸ್ಪಂದನೆ ಬಂದಿಲ್ಲ. ನಮಗೆ ಯಾರು ಹೊಣೆ? ಎಂದು ಒಂದು ಪ್ರಶ್ನೆಯಾಗಿದೆ. ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಅವರ ತವರು ಕ್ಷೇತ್ರದಲ್ಲಿ ಇಂತಹ ಪರಿಸ್ಥಿತಿ ಉಂಟಾಗಿರುವುದು ಖೇದಕರವಾಗಿದೆ.

ಮುದಕಪ್ಪ ಕುರಿ


ಈ ರಸ್ತೆಯಲ್ಲಿ ಸಂಚರಿಸಲು ನಮಗೆ ಮುಜುಗರವಾಗುತ್ತಿದೆ. ಇಲ್ಲಿ ಸಂಚರಿಸುವ ಮಕ್ಕಳಿಗೆ ಕೈ ಕಾಲು ಮುರಿದಿವೆ. ಈ ರಸ್ತೆಯಲ್ಲಿ ಸಂಚರಿಸಲು ಸಾರ್ವಜನಿಕರಿಗೆ ಸರಿಯಾದ ರಸ್ತೆ ಇಲ್ಲ ಕೆಸರಿನಿಂದ ಆವೃತವಾದ ರಸ್ತೆ. ಮೊಣಕಾಲು  ಮಟ್ಟದಲ್ಲಿ ನಿಂತಿರುವ ನೀರಿನ ರಸ್ತೆ ಮೇಲೆ  ಸಂಚರಿಸಬೇಕಾಗಿದೆ.

ಶೇಖಪ್ಪ ಮಾಯಣ್ಣವರ್


ಈ ರಸ್ತೆಯಲ್ಲಿ ಸಂಚರಿಸುವಾಗ ಆಯ ತಪ್ಪಿದರೆ ಹೊಂಡಕ್ಕೆ ಆಹುತಿಯಾಗಬೇಕು. ಯಾವುದೇ ರೀತಿಯಿಂದ ಸಾರ್ವಜನಿಕರ ಅಳಲು ಕೇಳದ ಅಧಿಕಾರಿಗಳು.  ಸಾರ್ವಜನಿಕರೆಲ್ಲರೂ ಸೇರಿಕೊಂಡು ಪುರಸಭೆಗೆ ಹಲವಾರು ಬಾರಿ ಮನವಿ ಕೊಟ್ಟಿದ್ದೇವೆ ಆದರೂ ಅಧಿಕಾರಿಗಳು ಕ್ಯಾರೆ ಎನ್ನುತ್ತಿಲ್ಲ..

ಗದಿಗೆಪ್ಪ ಕಳಸೂರ್


ವರದಿ   :  ನಿಂಗರಾಜ್ ಕೂಡಲ ಹಾವೇರಿ ಜಿಲ್ಲೆ, ಬಂಕಾಪುರ
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ

ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ A man identified…

24 hours ago

ಚಾನೆಲ್‌ನಲ್ಲಿ ಈಜಲು ತೆರಳಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ನೀರುಪಾಲು

ಚಾನೆಲ್‌ನಲ್ಲಿ ಈಜಲು ತೆರಳಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ನೀರುಪಾಲು SSLC student Krishna drowned while swimming in Tunga Channel…

24 hours ago

ಶಿವಮೊಗ್ಗದಲ್ಲಿ ಶಾಂತಿಯುತವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ

ಶಿವಮೊಗ್ಗದಲ್ಲಿ ಶಾಂತಿಯುತವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ Shivamogga witnessed a grand and peaceful Eid Milad procession…

24 hours ago

ಹುಂಚ ಆಸ್ಪತ್ರೆಯ ಶವಾಗಾರಕ್ಕೆ ಕೊನೆಗೂ ‘ಮುಹೂರ್ತ’: DHO ಭೇಟಿ, ಬಾಕಿ ಕಾಮಗಾರಿ ಆರಂಭ

ಹುಂಚ ಶವಾಗಾರಕ್ಕೆ ಕೊನೆಗೂ ‘ಮುಹೂರ್ತ’: DHO ಭೇಟಿ, ಬಾಕಿ ಕಾಮಗಾರಿ ಆರಂಭ Postman News report brings action on…

1 day ago

ಸಿದ್ದರಮಟ್ಟಿ ಬಳಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, ₹31,350 ಮೌಲ್ಯದ ಗಾಂಜಾ ಜಪ್ತಿ

ಸಿದ್ದರಮಟ್ಟಿ ಬಳಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, ₹31,350 ಮೌಲ್ಯದ ಗಾಂಜಾ ಜಪ್ತಿ Two accused persons were…

1 day ago

ಬೀದಿ ನಾಯಿಗಳ ದಾಳಿಗೆ ಆರು ಕುರಿ ಮರಿಗಳು ಸಾವು

ಬೀದಿ ನಾಯಿಗಳ ದಾಳಿ: ಆರು ಕುರಿಗಳು ಸಾವು Six sheep belonging to a resident of Sagar were…

1 day ago