ಭಾರಿ ಮಳೆಗೆ ಮರ ಬಿದ್ದು ರಸ್ತೆ ಮೇಲೆ ಬಿದ್ದ ವಿದ್ಯುತ್ ಕಂಬ : ರಿಪ್ಪನ್‌ಪೇಟೆ – ಹೊಸನಗರ ಸಂಚಾರ ಅಸ್ತವ್ಯಸ್ತ | chikkajeni

ಭಾರಿ ಮಳೆಗೆ ಮರ ಬಿದ್ದು ರಸ್ತೆ ಮೇಲೆ ಬಿದ್ದ ವಿದ್ಯುತ್ ಕಂಬ : ರಿಪ್ಪನ್‌ಪೇಟೆ – ಹೊಸನಗರ ಸಂಚಾರ ಅಸ್ತವ್ಯಸ್ತ

ರಿಪ್ಪನ್‌ಪೇಟೆ : ಬೃಹತ್ ಮರ ಬಿದ್ದು ವಿದ್ಯುತ್ ಕಂಬವೊಂದು ಮುರಿದು ರಸ್ತೆಗೆ ರಸ್ತೆಗೆ ಬಿದ್ದ ಪರಿಣಾಮ ರಿಪ್ಪನ್‌ಪೇಟೆ- ಹೊಸನಗರ ಸಂಚಾರ ಅಸ್ತವ್ಯಸ್ತವಾದ ಘಟನೆ ಚಿಕ್ಕಜೇನಿ ಗ್ರಾಮ ಪಂಚಾಯತ್ ಮುಂಭಾಗದಲ್ಲಿ ನಡೆದಿದೆ.


ಗಾಳಿ ಮಳೆಗೆ ಚಿಕ್ಕಜೇನಿ ಗ್ರಾಪಂ ಮುಂಭಾಗದಲ್ಲಿದ್ದ ಬೃಹತ್ ಮರವೊಂದು ಕೆಳಕ್ಕುರುಳಿದೆ. ಇದರಿಂದಾಗಿ ವಿದ್ಯುತ್ ತಂತಿಗಳು ಸಹ ಧಾರಾಶಾಹಿಯಾಗಿವೆ.‌ ಇದರಿಂದ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಸಂಚಾರ ಅಸ್ತವ್ಯಸ್ತಗೊಂಡಿತ್ತು.ಇದೇ ಸಂಧರ್ಭದಲ್ಲಿ ಕೆಲವೇ ಅಂತರದಲ್ಲಿ ಕಾರೊಂದು ಇದ್ದು ಅದೃಷ್ಟವಶಾತ್ ಭಾರಿ ಅನಾಹುತವೊಂದು ತಪ್ಪಿದೆ.

ವಿಷಯ ತಿಳಿಯುತಿದ್ದಂತೆ ಸ್ಥಳಕ್ಕೆ ತೆರಳಿದ ಪಿಎಸ್‌ಐ ಪ್ರವೀಣ್ ಎಸ್ ಪಿ ಹಾಗೂ ಸಿಬ್ಬಂದಿಗಳು ಹಾಗೂ ಮೆಸ್ಕಾಂ ಇಲಾಖೆಯ ಸಿಬ್ಬಂದಿಗಳು ರಸ್ತೆಯ ಮೇಲೆ ಬಿದ್ದಿದ್ದ ಲೈಟ್ ಕಂಬವನ್ನು ತೆರವುಗೊಳಿಸಿ ಸಂಚಾರ ಮುಕ್ತಗೊಳಿಸಿದ್ದಾರೆ.

ಚಿಕ್ಕ ಜೇನಿ ಗ್ರಾಪಂ ಮುಂಭಾಗದಲ್ಲಿ ಇದ್ದ ಬೃಹತ್ ಮರವನ್ನು ತೆರವುಗೊಳಿಸುವಂತೆ ಸ್ಥಳೀಯರು ಸಂಬಂಧಪಟ್ಟ ಇಲಾಖೆಗೆ ಹಲವು ಬಾರಿ ಮನವಿ ಸಲ್ಲಿಸಿದ್ದರೂ ಸ್ಪಂದಿಸಿರಲಿಲ್ಲ ಈಗ ಭಾರಿ ಮಳೆಗೆ ಮರ ಧರೆಗುರುಳಿದ್ದು ಸಂಚಾರ ಅಸ್ತವ್ಯಸ್ತವಾಗಿದೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

RIPPONPETE | ಹಿಂದೂ ಮಹಾಸಭಾ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಸುಧೀಂದ್ರ ಪೂಜಾರಿ , ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಆಯ್ಕೆ – ಪದಾಧಿಕಾರಿಗಳ ವಿವರ ಇಲ್ಲಿದೆ

RIPPONPETE | ಹಿಂದೂ ಮಹಾಸಭಾ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಸುಧೀರ್ ಪಿ , ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಆಯ್ಕೆ –…

5 hours ago

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಬಳಿಕ ಮನನೊಂದು ವಿಷ ಸೇವಿಸಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಿಸದೇ ಸಾವು

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಬಳಿಕ ಮನನೊಂದು ವಿಷ ಸೇವಿಸಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಿಸದೇ ಸಾವು A NEET aspirant…

21 hours ago

ಆಗುಂಬೆಯಿಂದ ರಿಪ್ಪನ್‌ಪೇಟೆವರೆಗೆ ಪೊಲೀಸರ ಚೇಸಿಂಗ್ ಪ್ರಕರಣ : ಕಾರು ಬಿಟ್ಟು ಕಾಡಿಗೆ ಪರಾರಿಯಾಗಿದ್ದ ಆರೋಪಿಯ ಬಂಧನ

ಆಗುಂಬೆಯಿಂದ ರಿಪ್ಪನ್‌ಪೇಟೆವರೆಗೆ ಪೊಲೀಸರ ಚೇಸಿಂಗ್ ಪ್ರಕರಣ : ಕಾರು ಬಿಟ್ಟು ಕಾಡಿಗೆ ಪರಾರಿಯಾಗಿದ್ದ ಆರೋಪಿಯ ಬಂಧನ Agumbe Police arrested…

23 hours ago

ಎಂಟು ಕಾಲು, ಮೂರು ಕಿವಿ, ಎರಡು ಬಾಲ, ಎರಡು ನಾಲಿಗೆ ಇರುವ ಕುರಿ ಜನನ – ಗ್ರಾಮಸ್ಥರಲ್ಲಿ ಅಚ್ಚರಿ

ಎಂಟು ಕಾಲು, ಮೂರು ಕಿವಿ, ಎರಡು ಬಾಲ, ಎರಡು ನಾಲಿಗೆ ಇರುವ ಕುರಿ ಜನನ - ಗ್ರಾಮಸ್ಥರಲ್ಲಿ ಅಚ್ಚರಿ A…

23 hours ago

ಆನಂದಪುರ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ : ಬಂಗಾರದ ನಾಣ್ಯಗಳ ನೀಡಿ ₹9.60 ಲಕ್ಷ ವಂಚನೆ – ನಗದು ಸಹಿತ ಆರೋಪಿ ವಶಕ್ಕೆ

ಆನಂದಪುರ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ : ಬಂಗಾರದ ನಾಣ್ಯಗಳ ನೀಡಿ ₹9.60 ಲಕ್ಷ ವಂಚನೆ - ನಗದು ಸಹಿತ ಆರೋಪಿ…

2 days ago

ಸಾಗರ ಬಸ್‌ ಪ್ರಯಾಣದಲ್ಲಿ ಮಹಿಳೆಗೆ ಶಾಕ್: ಗಾಢ ನಿದ್ರೆಯಲ್ಲಿದ್ದ ವೇಳೆ ₹17.55 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

ಸಾಗರ ಬಸ್‌ ಪ್ರಯಾಣದಲ್ಲಿ ಮಹಿಳೆಗೆ ಶಾಕ್: ಗಾಢ ನಿದ್ರೆಯಲ್ಲಿದ್ದ ವೇಳೆ ₹17.55 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ A…

2 days ago