ರಿಪ್ಪನ್‌ಪೇಟೆ ಪದವಿ ಕಾಲೇಜಿನ ವಿದ್ಯಾರ್ಥಿ ಕಳೆನಾಶಕ ಸೇವಿಸಿ ಆತ್ಮಹತ್ಯೆ | Crime News
ರಿಪ್ಪನ್‌ಪೇಟೆ : ಸೆಮಿಸ್ಟರ್ ಪರೀಕ್ಷೆಯಲ್ಲಿ ಇಂಗ್ಲಿಷ್ ವಿಷಯದಲ್ಲಿ ಫೇಲ್ ಆಗಿದ್ದಕ್ಕೆ ಬೇಸತ್ತು ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಬಿ ಎ ವಿದ್ಯಾರ್ಥಿ ಕಳೆನಾಶಕ ಸೇವಿಸಿ ಮೃತಪಟ್ಟಿರುವ ಘಟನೆ ನಡೆದಿದೆ.
ಆನಂದಪುರ ಸಮೀಪದ ಅಡೂರು ಗ್ರಾಮದ ನಿವಾಸಿ ಮನುಷ್ ಡಿ(19) ಮೃತ ದುರ್ಧೈವಿಯಾಗಿದ್ದಾನೆ.
ರಿಪ್ಪನ್‌ಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಥಮ ಬಿ ಎ ವ್ಯಾಸಾಂಗ ಮಾಡುತಿದ್ದ ಮನುಷ್ ಡಿ ಇತ್ತೀಚೆಗೆ ನಡೆದ ಸೆಮಿಸ್ಟರ್ ಪರೀಕ್ಷೆಯಲ್ಲಿ ಇಂಗ್ಲಿಷ್ ವಿಷಯದಲ್ಲಿ ಫೇಲ್ ಆಗಿದ್ದರಿಂದ ಖಿನ್ನತೆಗೊಳಗಾಗಿದ್ದನು ಎನ್ನಲಾಗುತಿದೆ.
ಶುಕ್ರವಾರ ರಾತ್ರಿ ಆನಂದಪುರ ಸಮೀಪದ ಅಡೂರು ಗ್ರಾಮದ ತನ್ನ ನಿವಾಸದಲ್ಲಿ ಕಳೆನಾಶಕ ಸೇವಿಸಿದ್ದಾನೆ ಕೂಡಲೇ ಆತನನ್ನು ಆನಂದಪುರ ಸರ್ಕಾರಿ ಆಸ್ಪತ್ರೆಗೆ ಕರೆತಂದು ಪ್ರಥಮ ಚಿಕಿತ್ಸೆ ನೀಡಿ ಶಿವಮೊಗ್ಗದ ಮೆಗ್ಗಾನ್ ಗೆ ಕರೆದೊಯ್ಯಲಾಗಿತ್ತು.
ಶನಿವಾರ ಬೆಳಿಗ್ಗೆ ಚಿಕಿತ್ಸೆ ಫಲಕಾರಿಯಾಗದೇ ಮನುಷ್ ಡಿ ಮೃತಪಟ್ಟಿದ್ದಾನೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್