ಸೌಮ್ಯ ಕೊಲೆ ಪ್ರಕರಣ – ಮೃತದೇಹವನ್ನು ಹೊರತೆಗೆದ ಪೊಲೀಸರು | ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
ಯುವತಿಯೊಬ್ಬಳನ್ನು ಪ್ರೀತಿಸಿ ಮದುವೆಯಾಗುತ್ತೇನೆ ಎಂದು ನಂಬಿಸಿ , ಆಕೆಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿ ಪ್ರಿಯಕರನೇ ಕೊಲೆಗೈದ ಪ್ರಕರಣದಲ್ಲಿ ಯುವತಿಯ ಮೃತದೇಹವನ್ನು ಹೊರತೆಗೆಯಲಾಗಿದೆ.
ಸೌಮ್ಯಾ ಮತ್ತು ಸೃಜನ್ ಕಳೆದ ಎರಡೂವರೆ ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದರು. ಈ ಮಧ್ಯೆ ತನ್ನನ್ನು ಮದುವೆಯಾಗುವಂತೆ ಸೌಮ್ಯಾ ಒತ್ತಾಯಿಸುತ್ತಿದ್ದಳು. ಇದರಿಂದ ಬೇಸತ್ತ ಸೃಜನ್ ಯುವತಿಯನ್ನು ಹೆದ್ದಾರಿಪುರ ಬಳಿಯಲ್ಲಿ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ಕೊಲೆ ಮಾಡಿದ ಬಳಿಕ ಸೃಜನ್ ಮೃತದೇಹವನ್ನು ಆನಂದಪುರ ಸಮೀಪದ ಮುಂಬಾಳು ಗ್ರಾಮದ ಬಳಿ ಜೆಜೆ ಎಂ ಯೋಜನೆಯಡಿಯಲ್ಲಿ ತೆಗೆದಿಟ್ಟಿದ್ದ ಟ್ರಂಚ್ ನಲ್ಲಿ ಹೂತಿಟ್ಟಿದ್ದನು.
ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಸೃಜನ್ ನನ್ನು ಸ್ಥಳಕ್ಕೆ ಕರೆತಂದು ಕೊಳೆತ ಸ್ಥಿತಿಯಲ್ಲಿದ್ದ ಮೃತದೇಹವನ್ನು ಹೊರತೆಗೆಯಲಾಗಿದೆ.
ಸಾಗರದ ಉಪ ವಿಭಾಗಧಿಕಾರಿ ಯತೀಶ್ ಆರ್ ಸಮ್ಮುಖದಲ್ಲೇ ಸ್ಥಳ ಪರಿಶೀಲನೆ ನಡೆಸಿ ಸೌಮ್ಯ ಮೃತದೇಹವನ್ನ ಹೊರ ತೆಗೆಯಲಾಗಿದೆ. ಆನಂದಪುರದ ಬಳಿಯ ಮದ್ಲೆಸರ ಬಳಿಯ ರೈಲ್ವೆ ಹಳಿ ಬಳಿ ಸುಜನ್ ಸೌಮ್ಯಳ ಮೃತದೇಹವನ್ನ ಹೂತು ಇಟ್ಟಿದ್ದನು.
ಕೆಲಹೊತ್ತು ಮಳೆಯಿಂದಾಗಿ ಕಾರ್ಯಾಚರಣೆಗೆ ಅಡ್ಡಿ ಉಂಟಾಗಿತ್ತು. ಶವ ಹೊರ ತೆಗೆಯುತ್ತದಂತೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳಕ್ಕೆ ವಿಧಿ ವಿಜ್ಞಾನ ಪ್ರಯೋಗಾಲಯದ ವೈದ್ಯರು ಭೇಟಿ ನೀಡಿದ್ದಾರೆ. ಸ್ಥಳದಲ್ಲಿಯೇ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ.
ಸಾಗರ ತಹಶಿಲ್ದಾರ್ ಚಂದ್ರಶೇಖರ್ ಸ್ಥಳದಲ್ಲಿಯೇ ಉಪಸ್ಥಿತರಿದ್ದು ತೀರ್ಥಹಳ್ಳಿ ಡಿವೈ ಎಸ್ಪಿ ಗಜಾನನ ವಾಮನಸುತಾರ ನೇತೃತ್ವದಲ್ಲಿ ಮುಂದಿನ ತನಿಖೆ ನಡೆಯುವ ಸಾಧ್ಯತೆ ಇದ್ದು ಸ್ಥಳದಲ್ಲಿ ಪೊಲೀಸರಿಂದ ಬಿಗಿಬಂದೋಬಸ್ತ್ ಮಾಡಲಾಗಿತ್ತು.