ಶಂಕಿತ ಡೆಂಗ್ಯೂ ಜ್ವರಕ್ಕೆ ನರ್ಸಿಂಗ್ ಆಫೀಸರ್ ಬಲಿ | Dengue
ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆ ನರ್ಸಿಂಗ್ ಆಫೀಸರ್(ನರ್ಸ್) ಹೇಮಾ(45) ಚಿಕಿತ್ಸೆ ಫಲಿಸದೇ ಸಾವು ಕಂಡಿದ್ದಾರೆ.
ಭದ್ರಾವತಿಯ ಹೇಮಾ ಅವರು ಜಿಲ್ಲಾ ಮೆಗ್ಗಾನ್ ಬೋಧನಾ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಕೆಲವು ದಿನಗಳ ಹಿಂದೆ ಜ್ವರಕ್ಕೆ ತುತ್ತಾಗಿ ಬಳಲುತ್ತಿದ್ದು, ಹೆಚ್ಚಿನ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.ಆದರೆ, ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ.
ಶಂಕಿತ ಡೆಂಗ್ಯೂ ಜೊತೆಗೆ ಬೇರೆ ಸಮಸ್ಯೆಯಿಂದಲೂ ಹೇಮಾರವರು ಬಳಲುತ್ತಿದ್ದರು ಎಂಬ ಮಾಹಿತಿ ತಿಳಿದು ಬಂದಿದೆ. ಮೃತರಿಗೆ ಇಬ್ಬರು ಮಕ್ಕಳಿದ್ದಾರೆ. ಕುಟುಂಬ ಮತ್ತು ಮೆಗ್ಗಾನ್ ಸಿಬ್ಬಂದಿಗಳು ಹೇಮಾರವರ ಅಗಲಿಕೆಯಿಂದ ಕಣ್ಣೀರಿಟ್ಟಿದ್ದಾರೆ.