ತುಂಬಿದ ಹಳ್ಳ ದಾಟುವಾಗ ಕಾಲುಜಾರಿ ಬಿದ್ದು ಕೃಷಿಕ ಸಾವು..!! A farmer while crossing a filled ditch..!!

ತುಂಬಿದ ಹಳ್ಳ ದಾಟುವಾಗ ಕಾಲುಜಾರಿ ಬಿದ್ದು ಕೃಷಿಕ ಸಾವು..!!
ತೀರ್ಥಹಳ್ಳಿ: ತಾಲೂಕಿನಲ್ಲಿ ಪುಷ್ಯ ಮಳೆಯ ಆರ್ಭಟ ಹೆಚ್ಚಾಗಿದ್ದು ಈ ಮಳೆಗೆ ತಾಲೂಕಿನಲ್ಲಿ ಮೂರನೇ ಬಲಿಯಾಗಿದೆ.

ದೇವಂಗಿ ಬಳಿ ಉಂಟೂರು ಹಳ್ಳ ದಾಟುವಾಗ ತೇಲಿ ಹೋಗಿ ರೈತರೊಬ್ಬರು ಮೃತಪಟ್ಟಿದ್ದಾರೆ. ಬುಧವಾರ ತೋಟದ ಪಕ್ಕದ ಹಳ್ಳದಲ್ಲಿ ಶವ ಸಿಕ್ಕಿದೆ.ಕೃಷ್ಣಮೂರ್ತಿ ನಾಯ್ಕ್ (55) ಮೃತಪಟ್ಟ ವ್ಯಕ್ತಿ. ಇವರು ಮಂದಾರ್ತಿ ಮೇಳದ ಪ್ರಸಿದ್ಧ ಯಕ್ಷಗಾನ ಕಲಾವಿದ ಪ್ರಸನ್ನ ಅವರ ತಂದೆ ಎಂದು ತಿಳಿದು ಬಂದಿದೆ.

ಮೃತರು ಪತ್ನಿ, ಒಂದು ಹೆಣ್ಣು ಮತ್ತು ಒಂದು ಗಂಡು ಮಕ್ಕಳನ್ನು ಆಗಲಿದ್ದಾರೆ.

ತುಂಗಾ ನದಿಯ ನೀರಿನ ಮಟ್ಟ ಹೆಚ್ಚಳವಾಗಿದ್ದು ಇದೆ ನದಿಯ ವ್ಯಾಪ್ತಿಗೆ ಬರುವ ಉಂಟೂರು ಹಳ್ಳದಲ್ಲೂ ಭಾರೀ ನೀರು ಹರಿಯುತ್ತಿದ್ದು ಮಂಗಳವಾರ ಸಂಜೆ ದೇವಂಗಿಗೆ ಕೂಲಿ ಕೆಲಸಕ್ಕೆ ಹೋಗಿ ಸಂಜೆ ಬರುವಾಗ ಕೃಷ್ಣಮೂರ್ತಿ ನಾಪತ್ತೆಯಾಗಿದ್ದರು. ಮನೆಯವರೆಲ್ಲ ರಾತ್ರಿ ಇಡೀ ಹುಡುಕಿದರೂ ಪತ್ತೆಯಾಗಿರಲಿಲ್ಲ. ಮಂಗಳವಾರ ಸುರಿದ ಮಳೆಗೆ ಹಳ್ಳದಲ್ಲಿ ನೆರೆ ಬಂದಿತ್ತು. ಕಾಲು ಜಾರಿ ಹಳ್ಳಕ್ಕೆ ಬಿದ್ದು ತೇಲಿ ಹೋಗಿದ್ದು ಬುಧವಾರ ಬೆಳಗ್ಗೆ ಶವ ಪತ್ತೆಯಾಗಿದೆ.

ಸ್ಥಳಕ್ಕೆ ಪೊಲೀಸರು, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಶೈಲಾ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಆಶಾಲತಾ, ಕಂದಾಯ ಇಲಾಖೆ ಅಧಿಕಾರಿ ಸಂತೋಷ್ ಕುಮಾರ್, ಆರ್ ಐ ಸುಗುಣೇಶ್, ಪಟ್ಟಣ ಪಂಚಾಯತ್ ಸದಸ್ಯ ಹಾಗೂ ಯಕ್ಷಗಾನ ಕಲಾವಿದರಾದ ಬಿ ಗಣಪತಿ ಸೇರಿ ಹಲವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಬೇಕರಿ ಉತ್ಪನ್ನಗಳ ತಯಾರಿಕೆಯಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ

ಬೇಕರಿ ಉತ್ಪನ್ನಗಳ ತಯಾರಿಕೆಯಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ One-month skill development training on bakery product preparation…

9 hours ago

ತೀರ್ಥಹಳ್ಳಿ ಪೊಲೀಸ್ ಠಾಣೆಯ ಗಣಪತಿ ವಿಸರ್ಜನೆ ; ಚಂಡೆ ಸದ್ದಿಗೆ ಡಿವೈಎಸ್‌ಪಿ ಭಾನುಪ್ರಕಾಶ್, ಸಿಪಿಐ ಇಮ್ರಾನ್ ಹೆಜ್ಜೆ

ತೀರ್ಥಹಳ್ಳಿ ಪೊಲೀಸ್ ಠಾಣೆಯ ಗಣಪತಿ ವಿಸರ್ಜನೆ ; ಚಂಡೆ ಸದ್ದಿಗೆ ಡಿವೈಎಸ್‌ಪಿ ಭಾನುಪ್ರಕಾಶ್, ಸಿಪಿಐ ಇಮ್ರಾನ್ ಹೆಜ್ಜೆ Thirthahalli police…

11 hours ago

ಕೋಡೂರು ಗ್ರಾಮದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ : ಲಕ್ಷಾಂತರ ರೂ. ನಷ್ಟ

ಕೋಡೂರು ಗ್ರಾಮದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ : ಲಕ್ಷಾಂತರ ರೂ. ನಷ್ಟ House fire reported at Keelambi…

12 hours ago

ಶಾಸಕರ ಜೊತೆ ಟ್ರಾಫಿಕ್ ಪೊಲೀಸರ ಡ್ಯಾನ್ಸ್; ವಿಡಿಯೋ ವೈರಲ್, ಇಬ್ಬರ ವರ್ಗಾವಣೆ

ಶಾಸಕರ ಜೊತೆ ಟ್ರಾಫಿಕ್ ಪೊಲೀಸರ ಡ್ಯಾನ್ಸ್; ವಿಡಿಯೋ ವೈರಲ್, ಇಬ್ಬರ ವರ್ಗಾವಣೆ Two traffic police personnel in Shivamogga…

12 hours ago

ಬಾವಿಗೆ ಬಿದ್ದು ನಿವೃತ್ತ ಕುಲಪತಿ ಪ್ರೊ. ಎಂ.ಕೆ. ನಾಯ್ಕ್ ಸಾವು

ಬಾವಿಗೆ ಬಿದ್ದು ನಿವೃತ್ತ ಕುಲಪತಿ ಪ್ರೊ. ಎಂ.ಕೆ. ನಾಯ್ಕ್ ಸಾವು Retired Vice Chancellor Prof. M.K. Naik, 63,…

12 hours ago

ರೈತರ ಹೆಸರಿಗೂ ಗೌರವದ ಅಂಕಿತ ಬೇಕು: ‘Fr’ ಸೇರಿಸಲು ಸರ್ಕಾರಕ್ಕೆ ಮನವಿ

ರೈತರ ಹೆಸರಿಗೂ ಗೌರವದ ಅಂಕಿತ ಬೇಕು: ‘Fr’ ಸೇರಿಸಲು ಸರ್ಕಾರಕ್ಕೆ ಮನವಿ Kalluru Meghraj urges the Karnataka government…

1 day ago