Haveri | ಅಕ್ರಮ ಗಾಂಜಾ ಮಾರಾಟ – 2.96 ಲಕ್ಷ ಮೌಲ್ಯದ ಗಾಂಜಾ ಸಮೇತ ಮೂವರು ಆರೋಪಿಗಳ ಬಂಧನ
ಹಾವೇರಿ : ಅಕ್ರಮ ಗಾಂಜಾ ಸಾಗಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಹಾಗೂ 2.96 ಲಕ್ಷ ಮೌಲ್ಯದ ಗಾಂಜಾವನ್ನು ಶಹರ ಪೊಲೀಸ್ ಠಾಣೆಯ ಅಧಿಕಾರಿಗಳು ವಶಪಡಿಸಿಕೊಂಡಿರುವ ಘಟನೆ ನಡೆದಿದೆ.
ಸವಣೂರಿನ ಗುಲಾಮರಸೂಲಖಾನ್ ಹಸನ್ ಖಾನ್ ಕಾಂಜಾದ್, ಮಲಿಕ್ ರೆಹಾನ್ ರಿಯಾಜ್ ಅಹಮದ್ ಬಕ್ರಿಯವಾಲೆ ಹಾಗೂ ಪೂರ್ ಖಾನ್ ಬಾಬಾ ಜಾನ್ ಪಟವೇಗಾರ ಎಂಬುವವರು ಬಂಧಿತರು.
ಇವರು ಶುಕ್ರವಾರ ಬೆಳಗ್ಗೆ ನಾಗೇಂದ್ರ ಮಟ್ಟಿಯಿಂದ ಶಾಂತಿನಗರಕ್ಕೆ ಹೋಗುವ ರಸ್ತೆಯ ಬದಿಯಲ್ಲಿ ಸುಮಾರು 2.96 ಲಕ್ಷ ರೂ.ಕಿಂತ ಅಧಿಕ ಮೌಲ್ಯದ 11 ಕೆಜಿ 843 ಗ್ರಾಂ ತೂಕದ ಗಾಂಜಾ ಸಾಗಾಣಿ ಮಾಡಿ ಮಾರಾಟ ಮಾಡಲು ಮುಂದಾಗಿದ್ದರು. ಆರೋಪಿತರ ಮೇಲೆ ಸಂಶಯ ವ್ಯಕ್ತಪಡಿಸಿ ವಿಚಾರಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಮೂವರು ಆರೋಪಿಗಳನ್ನು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಂಶ ಕುಮಾರ್ ನೇತೃತ್ವದಲ್ಲಿ ಹೆಚ್ಚುವರಿ ಎಸ್ ಪಿ ಸಿ.ಗೋಪಾಲ್, ಹಾವೇರಿ ಉಪ ವಿಭಾಗದ ಪೊಲೀಸ್ ಎಂ.ಎಸ್. ಪಾಟೀಲ ಮಾರ್ಗದರ್ಶನದಲ್ಲಿ ಶಹರ ಠಾಣೆ ಪಿ ಐ ಮೋತಿಲಾಲ್ ಪವಾರ್ ತಂಡದಲ್ಲಿ ಹಾವೇರಿ ಶಹರ ಪೊಲೀಸ್ ಠಾಣೆಯ ತನಿಕಾ ಅಧಿಕಾರಿ ಪಿ ಎಸ್ ಐ ಎಸ್ .ಎಂ. ವನಹಳ್ಳಿ ಸಿಬ್ಬಂದಿಗಳಾದ ಎಂ. ಜಿ.ಏರೇಶಿಮಿ, ಕುಬೇರಪ್ಪ ಲಮಾಣಿ, ಮುತ್ತಪ್ಪ ಲಮಾಣಿ, ಶಂಕ್ರಪ್ಪ ಲಮಾಣಿ, ಚನ್ನಬಸಪ್ಪ ಆರ್ ಬಿ, ನೀಲಕಂಟ ಲಿಂಗರಾಜು,ಚಂದ್ರಕಾಂತ್ ಎಲ್ ಆರ್, ಬಸವರಾಜ್ ಎನ್ ಸಿ, ಮಾಲತೇಶ್ ಕಬ್ಬೂರ, ತಾಂತ್ರಿಕ ವಿಭಾಗದ ಸಿಬ್ಬಂದಿ ಮಾರುತಿ ಹಾಲ್ಬಾವಿ, ಸತೀಶ್ ಮಾರುಕಟ್ಟೆ ಹಾಗೂ ಇತರೆ ಸಿಬ್ಬಂದಿ ಕಾರ್ಯಾಚರಣೆ ಪಾಲ್ಗೊಂಡಿದ್ದರು.
ವರದಿ : ನಿಂಗರಾಜ್ ಕೊಡಲ ಹಾವೇರಿ ಜಿಲ್ಲೆ ಬಂಕಾಪುರ.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್