ಶಿರೂರಿನಲ್ಲಿ ಗುಡ್ಡ ಕುಸಿತ – ಏಳು ಜನರ ದಾರುಣ ಸಾವು.! | Hill collapse in Shirur – Seven people died.

ಶಿರೂರಿನಲ್ಲಿ ಗುಡ್ಡ ಕುಸಿತ – ಏಳು ಜನರ ದಾರುಣ ಸಾವು.!

ಉತ್ತರ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಅಂಕೋಲಾ(ankola) ತಾಲೂಕಿನ ಶಿರೂರು(shiruru) ಬಳಿ ಗುಡ್ಡ ಕುಸಿದು ಒಟ್ಟು ಏಳು ಜನರು ಸಾವನ್ನಪ್ಪಿರುವ ಘಟನೆ ಇಂದು ನಡೆದಿದೆ.

ಈ ಬಗ್ಗೆ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮಾಹಿತಿ ನೀಡಿದ್ದು, ಭಾರಿ ಮಳೆಯಿಂದಾಗಿ ಗುಡ್ಡ ಕುಸಿದು ಬಿದ್ದಿದೆ. ಘಟನೆಯಲ್ಲಿ ನಿಖರವಾಗಿ ಎಷ್ಟು ಮಂದಿ ಸಾವನ್ನಪ್ಪಿದ್ದಾರೆ ಎಂಬುದರ ಬಗ್ಗೆ ಮಾಹಿತಿ ಇಲ್ಲ. ಆದರೆ ಜಿಲ್ಲಾಧಿಕಾರಿ ನೀಡಿರುವ ಮಾಹಿತಿ ಪ್ರಕಾರ ಒಟ್ಟು 7 ಮಂದಿ ಸಾವನ್ನಪ್ಪಿದ್ದಾರೆ. ಉಳಿದಂತೆ ಮಣ್ಣಿನಡಿ ಸಿಲುಕಿದವರಿಗಾಗಿ ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ.

 ಪ್ರಸ್ತುತ ಜಿಲ್ಲೆಯಲ್ಲಿ ಮಳೆ ಜೋರಾಗಿರುವುದರಿಂದ ಎಲ್ಲೆಡೆ ಭಾರೀ ಪ್ರಮಾಣದಲ್ಲಿ ಗುಡ್ಡ ಕುಸಿತವಾಗುತ್ತಿದೆ. ಹೊರಗಡೆ ತಿರುಗಾಡುವವರು ಕೊಂಚ ಜಾಗೃತಿ ವಹಿಸುವಂತೆ ಸಂಸದರು ಮನವಿ ಮಾಡಿದ್ದಾರೆ.

ಪ್ರಸ್ತುತ ಘಟನಾ ಸ್ಥಳದಲ್ಲಿ ರಕ್ಷಣಾ ತಂಡಗಳು ಬೀಡು ಬಿಟ್ಟಿದ್ದು, ಗುಡ್ಡದಡಿ ಸಿಲುಕಿದವರ ರಕ್ಷಣಾ ಕಾರ್ಯಾಚರಣೆ ಮುಂದು ವರೆದಿದೆ. ಮಾಹಿತಿ ಪ್ರಕಾರ ಒಟ್ಟು 9 ಜನರು ಗುಡ್ಡದಡಿ ಸಿಲುಕಿದ್ದಾರೆ ಎಂದು ಶಂಕಿಸಲಾಗಿದೆ.

 ಈ ಪೈಕಿ ಈಗಾಗಲೇ 7 ಜನರು ಸಾವನ್ನಪ್ಪಿರುವುದಾಗಿ ಜಿಲ್ಲಾಧಿಕಾರಿ ತಿಳಿಸಿರುವುದಾಗಿ ಸಂಸದರು ಮಾಹಿತಿ ಹಂಚಿಕೊಂಡಿದ್ದಾರೆ.

Leave a Reply

Your email address will not be published. Required fields are marked *