POSTMANNEWS

ನೈಜ ಸುದ್ದಿ ನೇರ ಬಿತ್ತರ..

Hosanagara | ಮಳೆ ಹಾನಿ ಪ್ರದೇಶಗಳಿಗೆ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಭೇಟಿ , ಪರಿಶೀಲನೆ


Hosanagara | ಮಳೆ ಹಾನಿ ಪ್ರದೇಶಗಳಿಗೆ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಭೇಟಿ , ಪರಿಶೀಲನೆ

ಹೊಸನಗರ ತಾಲೂಕಿನ ಮುಂಬಾರು ಹಾಗೂ ಕೋಡೂರು ಗ್ರಾಪಂ ವ್ಯಾಪ್ತಿಯ ಮಳೆ ಹಾನಿ ಪ್ರದೇಶಗಳಿಗೆ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಶಿವಮೊಗ್ಗ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರೆದಿದೆ. ಹಳ್ಳ, ನದಿಗಳು ಉಕ್ಕಿ ಹರಿಯುತ್ತಿದ್ದು, ವಿವಿಧ ಪ್ರದೇಶದಲ್ಲಿ ಬೆಳೆಗಳು ಜಲಾವೃತವಾಗಿವೆ.ಇನ್ನೂ ಹೊಸನಗರ ತಾಲೂಕಿನಾದ್ಯಂತ ಭಾರಿ ಮಳೆಗೆ ಅಪಾರ ಹಾನಿಗಳಾಗಿವೆ.

ತಾಲೂಕಿನ ಹುಂಚ ಹೋಬಳಿಯ ಹುಲ್ಗಾರ್ ನಲ್ಲಿ ಧರೆ ಕುಸಿತವಾಗಿರುವ ಪ್ರದೇಶಕ್ಕೆ ಭೇಟಿ ನೋಡಿದ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಸ್ಥಳದಿಂದಲೇ ಜಿಲ್ಲಾಧಿಕಾರಿಗಳಿಗೆ ಕರೆ ಮಾಡಿ ಪರಿಸ್ಥಿತಿಯ ಬಗ್ಗೆ ಚರ್ಚಿಸಿ ಕೂಡಲೇ ಮಳೆಹಾನಿ ಅಂದಾಜುಪಟ್ಟಿ ತಯಾರಿಸುವಂತೆ ಸೂಚಿಸಿದರು.

ನಂತರ ಮಾತನಾಡಿ ಈ ಭಾಗದಲ್ಲಿ ಆಗಿರುವ ಮಳೆ ಹಾನಿಯ ಬಗ್ಗೆ ಮುಖ್ಯಮಂತ್ರಿ ಹಾಗೂ ಸಚಿವರಿಗೆ ಮಾಹಿತಿ ನೀಡಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

ಈ ಸಂಧರ್ಭದಲ್ಲಿ ಹೊಸನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ ಜಿ ಚಂದ್ರಮೌಳಿ , ತೀರ್ಥಹಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮುಡುಬಾ ರಾಘವೇಂದ್ರ , ಜಿಪಂ ಮಾಜಿ ಸದಸ್ಯ ಬಿ ಪಿ ರಾಮಚಂದ್ರ , ಯುವ ಕಾಂಗ್ರೆಸ್ ರಾಷ್ಟ್ರೀಯ ವಕ್ತಾರ ಆದರ್ಶ್ ಹುಂಚದಕಟ್ಟೆ ಹಾಗೂ ಇನ್ನಿತರರಿದ್ದರು.

About The Author

Leave a Reply

Your email address will not be published. Required fields are marked *

Exit mobile version