Humcha | ಭಾರಿ ಮಳೆಗೆ ಕುಸಿದ ರಸ್ತೆ – ಸ್ಥಳಕ್ಕೆ ಬಾರದ ಅಧಿಕಾರಿಗಳು, ಜನಪ್ರತಿನಿಧಿಗಳು ,ಗ್ರಾಮಸ್ಥರ ಆಕ್ರೋಶ

Humcha | ಭಾರಿ ಮಳೆಗೆ ಕುಸಿದ ಸೇತುವೆ – ಸ್ಥಳಕ್ಕೆ ಬಾರದ ಅಧಿಕಾರಿಗಳು, ಜನಪ್ರತಿನಿಧಿಗಳು ,ಗ್ರಾಮಸ್ಥರ ಆಕ್ರೋಶ 

ಹೊಸನಗರ ತಾಲೂಕಿನ ಹುಂಚ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಠದ ಜಡ್ಡು ಎಸ್ ಸಿ ಕಾಲೋನಿ – ನಾಗರಹಳ್ಳಿ ಹೋಗುವ ಸೇತುವೆ ಭಾರಿ ಮಳೆಗೆ ಕುಸಿದು ಬಿದ್ದಿದ್ದು ಭಾರಿ ಅನಾಹುತಕ್ಕೆ ಎಡೆ ಮಾಡಿಕೊಟ್ಟಿದೆ.


ಪ್ರತಿನಿತ್ಯ ಶಾಲಾ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಓಡಾಡುವ ರಸ್ತೆಯ ಸೇತುವೆ ಕುಸಿದಿದ್ದರೂ ಇಲ್ಲಿಯವರೆಗೂ ಸಂಬಂಧಪಟ್ಟ ಯಾವುದೇ ಅಧಿಕಾರಿಗಳಾಗಲಿ , ಜನಪ್ರತಿನಿಧಿಗಳಾಗಲಿ ಸ್ಥಳಕ್ಕೆ ಭೇಟಿ ನೀಡದೇ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೂಡಲೇ ಸಂಬಂಧಿಸಿದ ಇಲಾಖೆ ಹಾಗೂ ಜನಪ್ರತಿನಿಧಿಗಳು ಇತ್ತ ಗಮನಹರಿಸುವ ಮೂಲಕ ಮುಂದಾಗುವ ಭಾರಿ ಅನಾಹುತವನ್ನು ತಪ್ಪಿಸಬೇಕಾಗಿದೆ.

Leave a Reply

Your email address will not be published. Required fields are marked *