ಮಾಜಿ ಸ್ಪೀಕರ್ ಕಾಗೋಡು ತಿಮ್ಮಪ್ಪ ಆಸ್ಪತ್ರೆಗೆ ದಾಖಲು – ಆರೋಗ್ಯ ವಿಚಾರಿಸಿದ ಸಚಿವ ಮಧು ಬಂಗಾರಪ್ಪ , ಮಾಜಿ ಸಚಿವ ಹರತಾಳು ಹಾಲಪ್ಪ
ಅನಾರೋಗ್ಯದ ಕಾರಣ ವಿಧಾನಸಭಾ ಮಾಜಿ ಅಧ್ಯಕ್ಷ, ಮಾಜಿ ಸಚಿವ ಕಾಗೋಡು ತಿಮ್ಮಪ್ಪ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಆಸ್ಪತ್ರೆಗೆ ತೆರಳಿದ ಸಚಿವ ಮಧು ಬಂಗಾರಪ್ಪ ಆರೋಗ್ಯ ವಿಚಾರಿಸಿದ್ದಾರೆ. ಕಾಗೋಡು ತಿಮ್ಮಪ್ಪ ಅವರನ್ನು ಭೇಟಿಯಾಗಿ ಇತ್ತೀಚಿನ ರಾಜಕೀಯ ಬೆಳವಣಿಗೆಗಳ ಬಗ್ಗೆ ಚರ್ಚಿಸಿದ್ದಾರೆ.
ಶರಾವತಿ ಮುಳುಗಡೆ ಸಂತ್ರಸ್ತರ ಹಾಗೂ ಬಗರ್ ಹುಕುಂ ರೈತರ ರೈತರ ಸಮಸ್ಯೆಗಳ ಬಗೆಹರಿಸುವ ಬಗ್ಗೆ ಇತ್ತೀಚಿಗೆ ನಡೆದ ಬೆಳವಣಿಗೆಗಳ ಕುರಿತಾಗಿ ಮಾಹಿತಿ ನೀಡಿದ್ದಾರೆ.
ಆರೋಗ್ಯ ವಿಚಾರಿಸಿದ ಬಳಿಕ ಶೀಘ್ರ ಗುಣಮುಖರಾಗುವಂತೆ ಹಾರೈಸಿದ್ದಾರೆ. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯೆ ಬಲ್ಕಿಶ್ ಭಾನು, ಮಾಜಿ ಸದಸ್ಯ ಆರ್. ಪ್ರಸನ್ನಕುಮಾರ್, ಕಾಂಗ್ರೆಸ್ ಮುಖಂಡರಾದ ಕಲಗೋಡು ರತ್ನಾಕರ್, ಜಿ.ಡಿ. ಮಂಜುನಾಥ್ ಇದ್ದರು.
ಕಾಗೋಡು ಆರೋಗ್ಯ ವಿಚಾರಿಸಿದ ಮಾಜಿ ಸಚಿವ ಹರತಾಳು ಹಾಲಪ್ಪ
ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಿಧಾನಸಭೆಯ ಮಾಜಿ ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರನ್ನು ಮಾಜಿ ಸಚಿವ ಹಾಗೂ ರಾಜ್ಯ ಬಿಜೆಪಿ ಉಪಾಧ್ಯಕ್ಷ ಹೆಚ್. ಹಾಲಪ್ಪ ಆಸ್ಪತ್ರೆಗೆ ಭೇಟಿ ನೀಡಿ, ಕಾಗೋಡರ ಆರೋಗ್ಯ ವಿಚಾರಿಸಿದರು.
ಈ ಸಂದರ್ಭದಲ್ಲಿ ಕಾಗೋಡು ಪುತ್ರಿ ಡಾ.ರಾಜನಂದಿನಿ ಕಾಗೋಡು ಉಪಸ್ಥಿತರಿದ್ದರು.