ವಿಜೃಂಭಣೆಯಿಂದ ಜರುಗಿದ ಕೆಂಚನಾಲ ಮಾರಿ ಜಾತ್ರೆ | Kenchanala – jathre

ವಿಜೃಂಭಣೆಯಿಂದ ಜರುಗಿದ  ಕೆಂಚನಾಲ ಮಾರಿ ಜಾತ್ರೆ | Kenchanala – jathre

ರಿಪ್ಪನ್‌ಪೇಟೆ : ಇತಿಹಾಸ ಪ್ರಸಿದ್ದ ಕೆಂಚನಾಲ ಮಾರಿಕಾಂಬ ದೇವಿಯ  ಮಳೆಗಾಲದ ಜಾತ್ರೆಗೆ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ರಾಜ್ಯದ ಹಲವೆಡೆಯಿಂದ, ನೆರೆ ರಾಜ್ಯ ಹಾಗೂ ಜಿಲ್ಲೆಯ ವಿವಿಧಡೆಯಿಂದ ಆಗಮಿಸಿ ದೇವಿಯ ದರ್ಶನ ಪಡೆದರು.


ಕೆಂಚನಾಲ ಗ್ರಾಮದಲ್ಲಿ ನಡೆಯುವ ಶ್ರೀ ಮಾರಿಕಾಂಬಾ ಜಾತ್ರೆ ಇತಿಹಾಸ-ಪುರಾಣ ಪ್ರಸಿದ್ಧ ಜಾತ್ರೆ ಆಗಿದೆ. ನೂರಾರು ವರ್ಷಗಳ ಇತಿಹಾಸವಿರುವ ಈ ಜಾತ್ರೆಯು ಪ್ರತಿ ವರ್ಷ ಎರಡು ಬಾರಿ ನಡೆಯುತ್ತದೆ. ಕರ್ನಾಟಕದ ಯಾವುದೇ ಭಾಗದಲ್ಲಿ ವರ್ಷದಲ್ಲಿ ಮಾರಿಕಾಂಬಾ ಜಾತ್ರೆ  ಎರಡು ಬಾರಿ ನಡೆಯುವುದಿಲ್ಲ ಆದರೆ ಕೆಂಚನಾಲ ಗ್ರಾಮದಲ್ಲಿ ಮಾತ್ರ ವರ್ಷಕ್ಕೆ ಎರಡು  ಶ್ರೀ ಮಾರಿಕಾಂಬ ಜಾತ್ರೆ ನಡೆಯುತ್ತದೆ.


ಉತ್ತಮ ಆರೋಗ್ಯ ರೋಗ-ರುಜಿನಗಳು ಬರದಂತೆ. ತಾವು ಬೆಳೆದ ಕೃಷಿ ಮತ್ತು ಕೃಷಿ ಉತ್ಪನ್ನಗಳು. ಸಾಕು ಪ್ರಾಣಿಗಳ ಸಂರಕ್ಷಣೆ. ಮಕ್ಕಳಾಗದಿದ್ದರೆ ಮಕ್ಕಳಾಗುವ ಬಗ್ಗೆ ತಮ್ಮ ಇಷ್ಟಾರ್ಥಗಳು ನೆರವೇರಲಿ ಎಂದು  ಭಕ್ತರು ಹರಕೆಯನ್ನು ಹೊರುತ್ತಾರೆ. ಮಾರಿಕಾಂಬ ದೇವಿಯ ದರ್ಶನದಿಂದ ಲಕ್ಷಾಂತರ ಜನರು ಒಳಿತನ್ನು ಕಂಡಿದ್ದಾರೆ, ಕಾಣುತ್ತಲೂ ಇದ್ದಾರೆ.


ಈ ಸಂಧರ್ಭದಲ್ಲಿ ಕಂದಾಯ ಇಲಾಖೆಯ ಅಧಿಕಾರಿಗಳು ,ದೇವಸ್ಥಾನ ಸಮಿತಿ ಅಧ್ಯಕ್ಷರು,ಸದಸ್ಯರು, ಮುಜರಾಯಿ ಇಲಾಖೆ ಅಧಿಕಾರಿಗಳು , ಗ್ರಾಪಂ ಅಧ್ಯಕ್ಷರು ಹಾಗೂ ಸದಸ್ಯರು ಇದ್ದರು.

ರಕ್ಷಣ ಇಲಾಖೆಯ ರಿಪ್ಪನ್‌ಪೇಟೆ ಪಿಎಸ್ ಐ ಎಸ್ ಪಿ ಪ್ರವೀಣ್ ಹಾಗೂ ಸಿಬ್ಬಂದಿಗಳು ಶಾಂತಿ ಸುವ್ಯವಸ್ಥೆಯನ್ನು ಕಾಪಾಡಿದರು.



ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ

ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ A man identified…

1 day ago

ಚಾನೆಲ್‌ನಲ್ಲಿ ಈಜಲು ತೆರಳಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ನೀರುಪಾಲು

ಚಾನೆಲ್‌ನಲ್ಲಿ ಈಜಲು ತೆರಳಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ನೀರುಪಾಲು SSLC student Krishna drowned while swimming in Tunga Channel…

1 day ago

ಶಿವಮೊಗ್ಗದಲ್ಲಿ ಶಾಂತಿಯುತವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ

ಶಿವಮೊಗ್ಗದಲ್ಲಿ ಶಾಂತಿಯುತವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ Shivamogga witnessed a grand and peaceful Eid Milad procession…

1 day ago

ಹುಂಚ ಆಸ್ಪತ್ರೆಯ ಶವಾಗಾರಕ್ಕೆ ಕೊನೆಗೂ ‘ಮುಹೂರ್ತ’: DHO ಭೇಟಿ, ಬಾಕಿ ಕಾಮಗಾರಿ ಆರಂಭ

ಹುಂಚ ಶವಾಗಾರಕ್ಕೆ ಕೊನೆಗೂ ‘ಮುಹೂರ್ತ’: DHO ಭೇಟಿ, ಬಾಕಿ ಕಾಮಗಾರಿ ಆರಂಭ Postman News report brings action on…

1 day ago

ಸಿದ್ದರಮಟ್ಟಿ ಬಳಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, ₹31,350 ಮೌಲ್ಯದ ಗಾಂಜಾ ಜಪ್ತಿ

ಸಿದ್ದರಮಟ್ಟಿ ಬಳಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, ₹31,350 ಮೌಲ್ಯದ ಗಾಂಜಾ ಜಪ್ತಿ Two accused persons were…

1 day ago

ಬೀದಿ ನಾಯಿಗಳ ದಾಳಿಗೆ ಆರು ಕುರಿ ಮರಿಗಳು ಸಾವು

ಬೀದಿ ನಾಯಿಗಳ ದಾಳಿ: ಆರು ಕುರಿಗಳು ಸಾವು Six sheep belonging to a resident of Sagar were…

1 day ago