ಕೆಂಚನಾಲದಲ್ಲಿ ಶಾಲೆ ಮೇಲೆ ಬಿದ್ದ ಮರ , ಆಲುವಳ್ಳಿ – ಮಾದಾಪುರದಲ್ಲಿ ಭಾರಿ ಮಳೆಗೆ ಮನೆ ಹಾನಿ – ಸ್ಥಳಕ್ಕೆ ಶಾಸಕರ ಆಪ್ತ ಕಾರ್ಯದರ್ಶಿ ಭೇಟಿ , ಆರ್ಥಿಕ ನೆರವು | Kenchanala

ಕೆಂಚನಾಲದಲ್ಲಿ ಶಾಲೆ ಮೇಲೆ ಬಿದ್ದ ಮರ , ಆಲುವಳ್ಳಿ – ಮಾದಾಪುರದಲ್ಲಿ ಭಾರಿ ಮಳೆಗೆ ಮನೆ ಹಾನಿ – ಸ್ಥಳಕ್ಕೆ ಶಾಸಕರ ಆಪ್ತ ಕಾರ್ಯದರ್ಶಿ ಭೇಟಿ , ಆರ್ಥಿಕ ನೆರವು

ರಿಪ್ಪನ್‌ಪೇಟೆ : ಕೆಂಚನಾಲ ಗ್ರಾಪಂ ವ್ಯಾಪ್ತಿಯ ಉರ್ದು ಶಾಲೆ ಮೇಲೆ ಭಾರಿ ಗಾಳಿ ಮಳೆಗೆ ಮರ ಬಿದ್ದು ಹಾನಿಯಾಗಿತ್ತು  ಮತ್ತು ಆಲುವಳ್ಳಿ , ಮಾದಾಪುರ ಗ್ರಾಮದಲ್ಲಿ ಮನೆ ಹಾನಿಯಾಗಿತ್ತು ಈ ಹಿನ್ನಲೆಯಲ್ಲಿ ಶಾಸಕ ಬೇಳೂರು ಗೋಪಾಲಕೃಷ್ಣ ರವರ ಸೂಚನೆಯಂತೆ ಅವರ ಆಪ್ತ ಕಾರ್ಯದರ್ಶಿ ಸಣ್ಣಕ್ಕಿ ಮಂಜು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಆರ್ಥಿಕ ನೆರವು ನೀಡಿದರು.

ಶಾಲೆ ಮೇಲೆ ಉರುಳಿದ ಮರ :


ಭಾರಿ ಗಾಳಿ ಮಳೆಗೆ ಕೆಂಚನಾಲದ ಉರ್ದು ಶಾಲೆಯ ಮೇಲೆ ಮರ ಬಿದ್ದು ಮೇಲ್ಛಾವಣಿ ಹಾನಿಯಾಗಿ ಕೊಠಡಿಯೊಳಗಿದ್ದ ಪೀಠೋಪಕರಣಗಳು ಜಖಂಗೊಂಡಿತ್ತು.ಕಟ್ಟಡದ ಮಧ್ಯಭಾಗದ ಮೇಲೆ ಬಿದ್ದಿರುವುದರಿಂದ ಆಚೆ ಈಚೆ ಹೊಂದಿಕೊಂಡಿರುವ ಕೊಠಡಿಗಳಿಗೂ ಹಾನಿಯಾಗಿತ್ತು ಸ್ಥಳಕ್ಕೆ ಭೇಟಿ ನೀಡಿದ ಸಣ್ಣಕ್ಕಿ ಮಂಜು ಶಾಸಕ ಬೇಳೂರು ಗೋಪಾಲಕೃಷ್ಣ ರವರ ಸೂಚನೆಯಂತೆ ಕೂಡಲೇ ಮರ ತೆರವುಗೊಳಿಸಿ ದುರಸ್ತಿ ಕಾರ್ಯ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಭಾರಿ ಮಳೆಗೆ ಮನೆ ಹಾನಿ :
ಮಸರೂರು ಗ್ರಾಮದ ಎಸ್ ಸಿ ಕಾಲೋನಿಯಲ್ಲಿ ಬಸವರಾಜ್ ಬಿನ್ ಷಣ್ಮುಖ ಎಂಬುವವರ ಮನೆ ಬಾರಿ ಮಳೆಗೆ ಸಂಪೂರ್ಣ ಹಾನಿಯಾಗಿತ್ತು ಈ ಹಿನ್ನಲೆಯಲ್ಲಿ ಸ್ಥಳಕ್ಕೆ ಭೇಟಿ ನೀಡಿದ ಶಾಸಕರ ಆಪ್ತ ಕಾರ್ಯದರ್ಶಿ ಸಣ್ಣಕ್ಕಿ ಮಂಜು ಕುಟುಂಬಸ್ಥರಿಗೆ ಸಾಂತ್ವಾನ ಹೇಳಿ ಧೈರ್ಯ ತುಂಬಿ ಪರಿಹಾರ ಕೊಡಿಸುವ ಭರವಸೆ ನೀಡಿದರು.


ಇದೇ ಕಾಲೋನಿಯ ನಿಂಗಪ್ಪ ಎಂಬುವವರ ಮನೆಯ ಮೇಲ್ಚಾವಣಿ ಹಾನಿಯಾಗಿತ್ತು ಕೂಡಲೇ ಗ್ರಾಮ ಪಂಚಾಯತ್ ವತಿಯಿಂದ ಟಾರ್ಪಲ್ ವ್ಯವಸ್ಥೆ ಕಲ್ಪಿಸಿಕೊಡಲಾಯಿತು.

ಮಾದಾಪುರದಲ್ಲಿ ಮನೆ ಹಾನಿ :


ಮಾದಾಪುರ ಎಸ್ ಸಿ ಕಾಲೋನಿಯ ರಂಗನಾಥ್ ಎಂಬುವವರ ಮನೆ ಭಾರಿ ಗಾಳಿ ಮಳೆಗೆ ಮನೆಯ ಹಿಂಭಾಗ ಸಂಪೂರ್ಣ ಕುಸಿತವಾಗಿತ್ತು ಈ ಹಿನ್ನಲೆಯಲ್ಲಿ ಸ್ಥಳಕ್ಕೆ ಭೇತಿ ನೀಡಿದ ಶಾಸಕರ ಆಪ್ತ ಕಾರ್ಯದರ್ಶಿ ಸಣ್ಣಕ್ಕಿ ಮಂಜು ಶಾಸಕರ ಸೂಚನೆಯ ಮೇರೆಗೆ ಆರ್ಥಿಕ ನೆರವು ನೀಡಿ ಕುಟುಂಬಸ್ಥರಿಗೆ ಧೈರ್ಯ ತುಂಬಿದರು.

ಈ ಸಂಧರ್ಭದಲ್ಲಿ ಕೆಂಚನಾಲ ಗ್ರಾಪಂ ಅಧ್ಯಕ್ಷ ಉಬೇದುಲ್ಲಾ ಷರೀಫ್ , ಸದಸ್ಯರಾದ ಕೃಷ್ಣೋಜಿರಾವ್ , ಪರಮೇಶ್ ,ಗ್ರಾಮ ಲೆಕ್ಕಾಧಿಕಾರಿ ಮಂಜುನಾಥ್ , ಮುಖಂಡರಾದ ಮಂಜುನಾಥ್ ಕೆಂಚನಾಲ,ವಿಜಿಯಣ್ಣ , ಸರಸ್ವತಿ , ಸುದೀಪ್ ,ಖಲೀಲ್ ಷರೀಫ್ ಗಾಳಿಬೈಲು ಹಾಗೂ ಇನ್ನಿತರರಿದ್ದರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ

ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ A man identified…

24 hours ago

ಚಾನೆಲ್‌ನಲ್ಲಿ ಈಜಲು ತೆರಳಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ನೀರುಪಾಲು

ಚಾನೆಲ್‌ನಲ್ಲಿ ಈಜಲು ತೆರಳಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ನೀರುಪಾಲು SSLC student Krishna drowned while swimming in Tunga Channel…

1 day ago

ಶಿವಮೊಗ್ಗದಲ್ಲಿ ಶಾಂತಿಯುತವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ

ಶಿವಮೊಗ್ಗದಲ್ಲಿ ಶಾಂತಿಯುತವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ Shivamogga witnessed a grand and peaceful Eid Milad procession…

1 day ago

ಹುಂಚ ಆಸ್ಪತ್ರೆಯ ಶವಾಗಾರಕ್ಕೆ ಕೊನೆಗೂ ‘ಮುಹೂರ್ತ’: DHO ಭೇಟಿ, ಬಾಕಿ ಕಾಮಗಾರಿ ಆರಂಭ

ಹುಂಚ ಶವಾಗಾರಕ್ಕೆ ಕೊನೆಗೂ ‘ಮುಹೂರ್ತ’: DHO ಭೇಟಿ, ಬಾಕಿ ಕಾಮಗಾರಿ ಆರಂಭ Postman News report brings action on…

1 day ago

ಸಿದ್ದರಮಟ್ಟಿ ಬಳಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, ₹31,350 ಮೌಲ್ಯದ ಗಾಂಜಾ ಜಪ್ತಿ

ಸಿದ್ದರಮಟ್ಟಿ ಬಳಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, ₹31,350 ಮೌಲ್ಯದ ಗಾಂಜಾ ಜಪ್ತಿ Two accused persons were…

1 day ago

ಬೀದಿ ನಾಯಿಗಳ ದಾಳಿಗೆ ಆರು ಕುರಿ ಮರಿಗಳು ಸಾವು

ಬೀದಿ ನಾಯಿಗಳ ದಾಳಿ: ಆರು ಕುರಿಗಳು ಸಾವು Six sheep belonging to a resident of Sagar were…

1 day ago