ಕಣ್ಣುಕುಕ್ಕುವ ಎಲ್​ಇಡಿ ಲೈಟ್ ವಿರುದ್ಧ ಕಾರ್ಯಾಚರಣೆಗಿಳಿದ ರಿಪ್ಪನ್‌ಪೇಟೆ ಪೊಲೀಸ್ – LED ಲೈಟ್ ಇದ್ರೆ ಬೀಳುತ್ತೆ ಭಾರಿ ದಂಡ , ಹುಷಾರ್

ಕಣ್ಣುಕುಕ್ಕುವ ಎಲ್​ಇಡಿ ಲೈಟ್ ವಿರುದ್ಧ ಕಾರ್ಯಾಚರಣೆಗಿಳಿದ ರಿಪ್ಪನ್‌ಪೇಟೆ ಪೊಲೀಸ್ – LED ಲೈಟ್ ಇದ್ರೆ ಬೀಳುತ್ತೆ ಭಾರಿ ದಂಡ , ಹುಷಾರ್

ರಿಪ್ಪನ್‌ಪೇಟೆ : ಕಾರು, ಬೈಕ್ ಹಾಗೂ ಇತರ ವಾಹನಗಳಿಗೆ ಕಣ್ಣುಕುಕ್ಕುವಂಥ ಎಲ್​ಇಡಿ ಲೈಟ್ ಹಾಕಿಸಿಕೊಳ್ಳುವುದು ಈಗ ಸಾಮಾನ್ಯವಾಗಿಬಿಟ್ಟಿದೆ. ಆದರೆ, ಇದರಿಂದ ಎದುರುಬದಿಯಲ್ಲಿ ವಾಹನ ಚಲಾಯಿಸುವವರಿಗೆ ವಿಪರೀತ ತೊಂದರೆಯಾಗುತ್ತಿದ್ದು, ಅಪಘಾತಗಳಿಗೂ ಕಾರಣವಾಗುತ್ತಿದೆ. ಇದರ ವಿರುದ್ಧ ರಿಪ್ಪನ್‌ಪೇಟೆ ಪಿಎಸ್‌ಐ ಪ್ರವೀಣ್ ಎಸ್ ಪಿ ಈಗ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದ್ದು ಇಂದು ಹಲವಾರು ವಾಹನಗಳ LED ಲೈಟ್ ನ್ನು ಬಿಚ್ಚಿ ವಾರ್ನಿಂಗ್ ಕೊಟ್ಟು ಕಳುಹಿಸಿದ್ದಾರೆ.


ಇಂದು ವಿನಾಯಕ ವೃತ್ತದಲ್ಲಿ ಪಿಎಸ್‌ಐ ನೇತ್ರತ್ವದ ಸಿಬ್ಬಂದಿಗಳ ತಂಡ  LED ಲೈಟ್ ಅಳವಡಿಸಿದ್ದ ವಾಹನಗಳನ್ನು ನಿಲ್ಲಿಸಿ LED ಲೈಟ್ ನ್ನು ಬಿಚ್ಚಿ ಮುಟ್ಟುಗೋಲು ಹಾಕಿಕೊಂಡು ವಾರ್ನಿಂಗ್ ಕೊಟ್ಟು ಕಳುಹಿಸಿದ್ದು ಸೋಮವಾರದಿಂದ ವಾಹನಗಳಲ್ಲಿ LED ಲೈಟ್ ಇದ್ದರೆ ಲೈಟ್ ನ್ನು ಮುಟ್ಟುಗೋಲು ಹಾಕಿಕೊಳ್ಳುವುದರೊಂದಿಗೆ ಭಾರಿ ದಂಡ ವಿಧಿಸುವ ಎಚ್ಚರಿಕೆಯನ್ನು ಪಿಎಸ್‌ಐ ಪ್ರವೀಣ್ ನೀಡಿದ್ದಾರೆ.

ಈ ಸಂಧರ್ಭದಲ್ಲಿ ಪೊಲೀಸ್ ಸಿಬ್ಬಂದಿಗಳಾದ ಪರಮೇಶ್ , ಉಮೇಶ್ ,ಸಂತೋಷ್ ಹಾಗೂ ಮಧುಸೂಧನ್ ಇದ್ದರು.

ವಾಹನಗಳ LED ಲೈಟ್ ಬಗ್ಗೆ ಸರ್ಕಾರದ ಆದೇಶದಲ್ಲೇನಿದೆ?

ವಾಹನಗಳಲ್ಲಿ ಕೇಂದ್ರ ಮೋಟಾರು ವಾಹನಗಳ ನಿಯಮಗಳ ಅಡಿಯಲ್ಲಿ ನಮೂದಿಸಿರುವ ಮಾನದಂಡದಂತೆ ಲೈಟ್​​ಗಳನ್ನು ಅಳವಡಿಸುವ ಕುರಿತು ಸಚಾರಿ ಪೊಲೀಸರಿಗೆ ಆದೇಶ ಹೊರಡಿಸಲಾಗಿದೆ. ಇತ್ತೀಚಿನ ದಿನಗಳಲ್ಲಿ ಹಲವಾರು ವಾಹನಗಳಲ್ಲಿ ಹೆಚ್ಚು ಬೆಳಕು ಹೊರಹಾಕುವ ಎಲ್‌ಇಡಿ ದೀಪಗಳನ್ನು ಅಳವಡಿಸುತ್ತಿದ್ದು ಇದರಿಂದ ಎದುರು ಬದಿಯಲ್ಲಿ ಸಂಚರಿಸುವ ಇತರೆ ವಾಹನ ಸವಾರರಿಗೆ ತೀವು ತೊಂದರೆಯುಂಟಾಗುತ್ತಿದೆ. ಇದರಿಂದ ಹೆಚ್ಚು ರಸ್ತೆ ಅಪಘಾತಗಳು ಸಂಭವಿಸುತ್ತಿರುವುದು ಕಂಡು ಬಂದಿರುತ್ತದೆ. ಈ ಪೈಕಿ ಪ್ರಮುಖವಾಗಿ ಭಾರಿ ಗಾತ್ರ ವಾಹನಗಳಾದ ಲಾರಿ, ಟ್ರಕ್, ಬಸ್ ಮುಂತಾದವುಗಳು ಹೆಚ್ಚು ಪ್ರಖರ ಬೆಳಕು ಹೊರಹಾಕುವ ಮತ್ತು ಕಣ್ಣು ಕುಕ್ಕುವ (dazzling and glaring) ಎಲ್‌ಇಡಿ ದೀಪಗಳನ್ನು ತಮ್ಮ ವಾಹನಗಳಲ್ಲಿ ಅಳವಡಿಸುತ್ತಿರುವುದರಿಂದ ಇತರೆ ವಾಹನ ಚಾಲಕರುಗಳಿಗೆ ವಾಹನ ಚಲಾಯಿಸಲು ತೊಂದರೆಯಾಗು ತ್ತಿರುತ್ತದೆ. ಎಲ್ಲಾ ವಾಹನ ಸವಾರರು ತಮ್ಮ ತಮ್ಮ ವಾಹನಗಳಿಗೆ ಕೇಂದ್ರ ಮೋಟಾರು ವಾಹನ ಕಾಯ್ದೆಯಲ್ಲಿ ನಮೂದಿಸಿರುವ ಮಾನದಂಡಂದಂತೆ ಹೆಡ್‌ಲೈಟ್‌ಗಳನ್ನೇ ಅಳವಡಿಸಬೇಕಾಗಿರುವುದು ಕಡ್ಡಾಯವಾಗಿರುತ್ತದೆ. ಒಂದು ನಿಯಮಗಳನ್ನು ಉಲ್ಲಂಘನೆ ಮಾಡಿದ್ದಲ್ಲಿ ಅಂತಹ ವಾಹನ ಸವಾರರ ವಿರುದ್ಧ ಮೋಟಾರು ವಾಹನ ಕಾಯ್ದೆಯ ಕಲಂ 177 ರಡಿ ಪ್ರಕರಣಗಳನ್ನು ದಾಖಲಿಸಬಹುದಾಗಿರುತ್ತದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.


ಘಟಕಾಧಿಕಾರಿಗಳು ತಮ್ಮ ತಮ್ಮ ಘಟಕಗಳಲ್ಲಿ ಸಂಚರಿಸುವ ವಾಹನಗಳಲ್ಲಿ ಈ ರೀತಿಯ ಹೆಚ್ಚು ಪುಟದ ಬೆಳಕು ಹೊರಹಾಕುವ ಮತ್ತು ಕಣ್ಣು ಕುಕ್ಕುವ ಎಲ್‌ಇಡಿ ಲೈಟ್​ಗಳನ್ನು ಅಳವಡಿಸಿರುವುದು ಕಂಡು ಬಂದಲ್ಲಿ ಅಂತಹ ವಾಹನ ಸವಾರದ ವಿರುದ್ಧ ಮೋಟಾರು ವಾಹನ ಕಾಯ್ದೆಯ ಕಲಂ 177 ಅಡಿ ಪ್ರಕರಣಗಳನ್ನು ದಾಖಲು ಮಾಡಲು ಸೂಕ್ತ ಕ್ರಮ ತೆಗೆದುಕೊಳ್ಳಲು ಸೂಚಿಸಲಾಗಿದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಜುಲೈನಲ್ಲಿ ವಿಶೇಷ ಕಾರ್ಯಾಚರಣೆ

ವಾಹನಗಳಲ್ಲಿ ಹೆಚ್ಚು ಪ್ರಖರ ಬೆಳಕು ಹೊರಹಾಕುವ ಮತ್ತು ಕಣ್ಣು ಕುಕ್ಕುವ ಎಲ್‌ಇಡಿ ದೀಪಗಳನ್ನು ಅಳವಡಿಸಿರುವ ವಾಹನ ಚಾಲಕರ ವಿರುದ್ಧ ಜುಲೈ ಮಾಹೆಯಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿ ಪ್ರಕರಣಗಳನ್ನು ದಾಖಲಿಸಿ, ಕೈಗೊಂಡ ಕ್ರಮದ ಬಗ್ಗೆ ವರದಿ ಸಲ್ಲಿಸಬೇಕು ಎಂದೂ ಸೂಚನೆ ನೀಡಲಾಗಿದೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕೋಡೂರಿನಲ್ಲಿ ಅಗ್ನಿ ಅವಘಡ: ಸರ್ವಸ್ವ ಕಳೆದುಕೊಂಡ ಕಾರ್ಮಿಕನಿಗೆ ಕಟ್ಟಡ ಕಾರ್ಮಿಕರ ಸಂಘದ ಆಸರೆ

ಕೋಡೂರಿನಲ್ಲಿ ಅಗ್ನಿ ಅವಘಡ: ಸರ್ವಸ್ವ ಕಳೆದುಕೊಂಡ ಕಾರ್ಮಿಕನಿಗೆ ಕಟ್ಟಡ ಕಾರ್ಮಿಕರ ಸಂಘದ ಆಸರೆ A fire caused by a…

4 hours ago

ಅರಸಾಳಿನಿಂದ ವಿಶ್ವ ವೇದಿಕೆಗೆ; ಕವನಶ್ರೀಗೆ ಸತತ ಮೂರನೇ ಗಿನ್ನಿಸ್ ಸಾಧನೆ

ಅರಸಾಳಿನಿಂದ ವಿಶ್ವ ವೇದಿಕೆಗೆ; ಕವನಶ್ರೀಗೆ ಸತತ ಮೂರನೇ ಗಿನ್ನಿಸ್ ಸಾಧನೆ Arasalu's Kavanasree H.M. earns two more Guinness…

4 hours ago

ಸರ್ಕಾರಿ ಜಾಗದಲ್ಲಿ ಖಾಸಗಿ ಬೇಲಿ; ಕಂದಾಯ ಅಧಿಕಾರಿಗಳಿಂದ ತೆರವು – ಹಕ್ಕುಪತ್ರ–9/11 ದಾಖಲೆ ಕುರಿತು ವಾಗ್ವಾದ

ರಿಪ್ಪನ್ ಪೇಟೆಯಲ್ಲಿ ಸರ್ಕಾರಿ ಜಾಗದ ಬೇಲಿ ತೆರವು; ಹಕ್ಕುಪತ್ರ–9/11 ದಾಖಲೆ ಕುರಿತು ವಾಗ್ವಾದ Revenue officials removed a fence…

6 hours ago

ರಿಪ್ಪನ್‌ಪೇಟೆಯಲ್ಲಿ ಮೋದಿ ಜನ್ಮದಿನಾಚರಣೆ : ವರಸಿದ್ದಿವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ

ರಿಪ್ಪನ್‌ಪೇಟೆಯಲ್ಲಿ ಮೋದಿ ಜನ್ಮದಿನಾಚರಣೆ : ವರಸಿದ್ದಿವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ Special pooja was offered at Varasiddhi…

1 day ago

ಪ್ರಧಾನಿ ಮೋದಿ ಜನ್ಮದಿನ: ಶಿವಮೊಗ್ಗದಲ್ಲಿ ‘ಸೇವಾ ಸಂಕಲ್ಪ ಅಭಿಯಾನ’ಕ್ಕೆ ಚಾಲನೆ

ಪ್ರಧಾನಿ ಮೋದಿ ಜನ್ಮದಿನ: ಶಿವಮೊಗ್ಗದಲ್ಲಿ ‘ಸೇವಾ ಸಂಕಲ್ಪ ಅಭಿಯಾನ’ಕ್ಕೆ ಚಾಲನೆ BJP launches a month-long Seva Sankalpa Abhiyan…

1 day ago

ಮೋದಿ ಹುಟ್ಟುಹಬ್ಬ ‘ನಿರುದ್ಯೋಗಿಗಳ ದಿನ’ವಾಗಿ ಆಚರಣೆ; ಯುವ ಕಾಂಗ್ರೆಸ್ ಪ್ರತಿಭಟನೆ

ಮೋದಿ ಹುಟ್ಟುಹಬ್ಬ ‘ನಿರುದ್ಯೋಗಿಗಳ ದಿನ’ವಾಗಿ ಆಚರಣೆ; ಯುವ ಕಾಂಗ್ರೆಸ್ ಪ್ರತಿಭಟನೆ Youth Congress and NSUI workers in Shivamogga…

1 day ago