Headlines

ಗ್ರಾಪಂ ಅಧ್ಯಕ್ಷರ ಮನೆ ಮೇಲೆ ಲೋಕಾಯುಕ್ತ ದಾಳಿ – ಕಂತೆ ಕಂತೆ ಹಣ , ಚಿನ್ನಾಭರಣ ಪತ್ತೆ | Lokayukta Raid

ಗ್ರಾಪಂ ಅಧ್ಯಕ್ಷರ ಮನೆ ಮೇಲೆ ಲೋಕಾಯುಕ್ತ ದಾಳಿ – ಕಂತೆ ಕಂತೆ ಹಣ , ಚಿನ್ನಾಭರಣ ಪತ್ತೆ

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಅಂತರಗಂಗೆ ಗ್ರಾಮ ಪಂಚಾಯತಿ ಅಧ್ಯಕ್ಷರ ಮನೆ ಮೇಲೆ ಪೊಲೀಸರು ದಾಳಿ ನಡೆಸಿ ಕೋಟ್ಯಾಂತರ ರೂ ಮೌಲ್ಯದ ನಗದು ಹಾಗೂ ಚಿನ್ನಾಭರಣವನ್ನು ಲೋಕಾಯುಕ್ತ ಪೊಲೀಸರು ಪತ್ತೆ ಹಚ್ಚಿದ್ದಾರೆ.


ಅಂತರಗಂಗೆ ಗ್ರಾಪಂ ಅಧ್ಯಕ್ಷರಾದ ನಾಗೇಶ್.ಬಿ ಮೂಲ ಆದಾಯಕ್ಕಿಂತ ಹೆಚ್ಚು ಅಕ್ರಮ ಆಸ್ತಿ ಗಳಿಸಿರುತ್ತಾರೆಂಬ ದೂರಿನ ಹಿನ್ನೆಲೆಯಲ್ಲಿ ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ  ಕಲಂ 13(1)(ಬಿ) ಸಹಿತ 13(2) ಭ್ರಷ್ಟಾಚಾರ ಪ್ರತಿಬಂಧಕ ಕಾಯ್ದೆ-1988 (ತಿದ್ದುಪಡಿ ಕಾಯ್ದೆ-2018) ರೀತ್ಯಾ ಪ್ರಕರಣ ದಾಖಲಾಗಿರುತ್ತದೆ. 

ನಾಗೇಶ್.ಬಿ, ಅಧ್ಯಕ್ಷರು, ಗ್ರಾಮ ಪಂಚಾಯಿತಿ ಅಂತರಗಂಗೆ ಗ್ರಾಮ, ಭದ್ರಾವತಿ ತಾಲ್ಲೂಕು ರವರು ಅಕ್ರಮ ಆಸ್ತಿಗಳಿಸಿರುವ ಪ್ರಕರಣದ ತನಿಖೆ ಕೈಗೊಂಡು ಇವರಿಗೆ ಸಂಬಂಧಿಸಿದ 5 ಸ್ಥಳಗಳಲ್ಲಿ ದಿ:19/07/2024 ರಂದು ಶಿವಮೊಗ್ಗ ಲೋಕಾಯುಕ್ತ ಅಧಿಕಾರಿಗಳು ಸ್ಥಳ ಶೋಧನೆ ಮಾಡಿದ್ದು, ನಾಗೇಶ್ ಬಿ. ರವರಿಗೆ ಸಂಬಂದಿಸಿದಂತೆ 2 ಖಾಲಿ ನಿವೇಶನಗಳು, 2 ಮನೆಗಳು, 5.14 ಎಕರೆ ಕೃಷಿ ಜಮೀನು , ಅಂದಾಜು ರೂ 12,80,000/- ಚಿನ್ನಾಭರಣ ಮತ್ತು ಬೆಳ್ಳಿ ವಸ್ತುಗಳು, ಅಂದಾಜು 1,76,000/- ಮೌಲ್ಯದ  ವಾಹನಗಳು, ಅಂದಾಜು 7,00,000/- ಮೌಲ್ಯದ ಗೃಹಪಯೋಗಿ ವಸ್ತುಗಳು ಮತ್ತು ರೂ 5,71,640/- ಗಳು ನಗದು ಹಣ ಪತ್ತೆಯಾಗಿದೆ.

ಇದರ ಅಂದಾಜು ಅಂದಾಜು ರೂ 1,33,87,826/- ಮೌಲ್ಯದ ಅಕ್ರಮ ಆಸ್ತಿ ಸಂಪಾದನೆ ಮಾಡಿರುವುದು ತನಿಖೆಯಿಂದ ಕಂಡು ಬಂದಿರುತ್ತದೆ. ಹಾಗೂ ಅವರ ಮನೆಯಲ್ಲಿ ಪತ್ತೆಯಾದ ನಗದು  ರೂ 5,00,000/- ಗಳನ್ನು  ತನಿಖೆ ಸಂಬಂದ ಅಮಾನತ್ತು ಪಡಿಸಿಕೊಳ್ಳಲಾಗಿರುತ್ತದೆ. 


ಈ ಪ್ರಕರಣವನ್ನು ಶಿವಮೊಗ್ಗದ ಪೊಲೀಸ್ ಅಧೀಕ್ಷಕರಾದ ಮಂಜುನಾಥ್ ಚೌದರಿ ಎಂ.ಹೆಚ್. ರವರು ದಾಖಲಿಸಿದ್ದು, ವೀರಬಸಪ್ಪ ಎಲ್ ಕುಸಲಾಪುರ ಪೊಲೀಸ್ ನಿರೀಕ್ಷಕರು, ಕ.ಲೋ ಶಿವಮೊಗ್ಗ ಇವರು ತನಿಖೆಯನ್ನು ಮುಂದುವರೆಸಿರುತ್ತಾರೆ. 

 ಈ ದಾಳಿ ಸಮಯಕ್ಕೆ ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳು, ಹಾಗೂ ಚಿತ್ರದುರ್ಗ, ಉಡುಪಿ ಮತ್ತು ಮಂಗಳೂರು ವಿಭಾಗದ ಲೋಕಾಯುಕ್ತ ಅಧಿಕಾರಿ, ಸಿಬ್ಬಂದಿಗಳು ಭಾಗಿಯಾಗಿರುತ್ತಾರೆ ಎಂದು ಲೋಕಾಯುಕ್ತ ಪೊಲೀಸ್ ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *