ಹೊಸನಗರ ಮತ್ತು ಸಾಗರ ತಾಲೂಕಿನಾದ್ಯಂತ ವರುಣನ ಆರ್ಭಟ ತಗ್ಗಿರುವ ಹಿನ್ನಲೆಯಲ್ಲಿ ಸೋಮವಾರ ಶಾಲಾ ಕಾಲೇಜುಗಳು ಎಂದಿನಂತೆ ಪ್ರಾರಂಭಗೊಳ್ಳಲಿದೆ.
ಹೊಸನಗರ ಮತ್ತು ಸಾಗರ ತಾಲೂಕಿನಲ್ಲಿ ಕಳೆದ ಐದಾರು ದಿನಗಳಿಂದ ಭಾರಿ ಮಳೆಯಿಂದ ಶಾಲೆಗಳಿಗೆ ರಜೆ ಘೋಷಿಸಲಾಗಿತ್ತು ಈಗ ವರುಣನ ಆರ್ಭಟ ತಗ್ಗಿರುವುದರಿಂದ ಶಾಲಾ ಕಾಲೇಜುಗಳು ಎಂದಿನಂತೆ ಪ್ರಾರಂಭಗೊಳ್ಳಲಿದೆ.
ಈ ಬಗ್ಗೆ ಪೋಸ್ಟ್ ಮ್ಯಾನ್ ನ್ಯೂಸ್ ನೊಂದಿಗೆ ಮಾತನಾಡಿದ ಹೊಸನಗರ BEO ಎಚ್ ಆರ್ ಕೃಷ್ಣಮೂರ್ತಿ ಹೊಸನಗರ ತಾಲೂಕಿನಾದ್ಯಂತ ಮಳೆ ಪ್ರಮಾಣ ಕಡಿಮೆಯಾಗಿದ್ದು ,ನಾಳೆಯಿಂದ ಶಾಲೆಗಳು ಪುನಃ ಆರಂಭವಾಗುತ್ತವೆ. ಮಕ್ಕಳನ್ನು ತರಗತಿ ಕೊಠಡಿಗಳಲ್ಲಿ ಕೂರಿಸುವ ಮೊದಲು ಕೊಠಡಿಗಳು ಸುಸ್ಥಿತಿಯಲ್ಲಿವೆಯೆಂದು ಖಾತರಿ ಪಡಿಸಿಕೊಳ್ಳಲು ಮುಖ್ಯ ಶಿಕ್ಷಕರು ಮತ್ತು ಶಿಕ್ಷಕರಿಗೆ ತಿಳಿಸಿದೆ. ಅಪಾಯ ಸ್ಥಿತಿಯಲ್ಲಿರುವ ಕೊಠಡಿಗಳನ್ನು ಬಳಸಿಕೊಳ್ಳಬಾರದು , ಅವುಗಳಿಗೆ ಬೀಗ ಹಾಕಿ ಮಕ್ಕಳು ಆ ಕಡೆಗೆ ಹೊಗದಂತೆ ನಿಗಾವಹಿಸುವುದು.ಕೊಠಡಿಗಳ ಕೊರತೆಯಾದಲ್ಲಿ ಗ್ರಾಮ ಪಂಚಾಯಿತಿ ಮತ್ತು ಎಸ್ ಡಿ ಎಂ ಸಿ ಯವರೊಂದಿಗೆ ಸಮಾಲೋಚನೆ ಮಾಡಿ…ಸಮುದಾಯ ಭವನ../ಇತರೆ ಸುರಕ್ಷಿತ ಸ್ಥಳಗಳಲ್ಲಿ ತರಗತಿಗಳನ್ನು ನಡೆಸಲು ಕ್ರಮವಹಿಸುವುದು…ಈ ಬಗ್ಗೆ ಇಲಾಖೆಗೆ ಮಾಹಿತಿ ನೀಡಿ ನಂತರ ಪರ್ಯಾಯ ವ್ಯವಸ್ಥೆ ಮಾಡಲು ತಿಳಿಸಲಾಗಿದೆ ಎಂದರು…
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್