POSTMANNEWS

ನೈಜ ಸುದ್ದಿ ನೇರ ಬಿತ್ತರ..

ಭಾರಿ ಮಳೆ ಹಿನ್ನಲೆ – ಹೊಸನಗರ ತಾಲೂಕಿನಾದ್ಯಂತ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ | Rain

ಭಾರಿ ಮಳೆ ಹಿನ್ನಲೆ – ಹೊಸನಗರ ತಾಲೂಕಿನಾದ್ಯಂತ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ | Rain


ಹೊಸನಗರ ತಾಲೂಕಿನಾದ್ಯಂತ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ತಾಲೂಕಿನ ಎಲ್ಲಾ ಅಂಗನವಾಡಿಗಳು ಮತ್ತು ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ಜು.16ರ ಮಂಗಳವಾರ ತಹಶೀಲ್ದಾರ್ ರಶ್ಮಿ ಹಾಲೇಶ್ ರಜೆ ಘೋಷಿಸಿದ್ದಾರೆ.

ಹವಾಮಾನ ಇಲಾಖೆ ಹೊಸನಗರ ತಾಲೂಕಿನಲ್ಲಿ ರೆಡ್ ಅಲರ್ಟ್ ಘೋಷಿಸಿದ್ದು ಈ ಹಿನ್ನಲೆಯಲ್ಲಿ ಹೊಸನಗರ ತಹಶೀಲ್ದಾರ್ ರಶ್ಮಿ ಹೆಚ್ ಹೊಸನಗರ ತಾಲೂಕಿನಾದ್ಯಂತ ರಜೆ ಘೋಷಿಸಿದ್ದಾರೆ.

ಈ ಬಗ್ಗೆ ಪೋಸ್ಟ್ ಮ್ಯಾನ್ ನ್ಯೂಸ್ ನೊಂದಿಗೆ ಮಾತನಾಡಿದ BEO ಎಚ್ ಆರ್ ಕೃಷ್ಣಮೂರ್ತಿ ತಾಲೂಕಿನಾದ್ಯಂತ ಭಾರಿ ಮಳೆ ಸುರಿಯುತ್ತಿರುವುದರಿಂದ ಹಾಗೂ ಹವಮಾನ ಇಲಾಖೆಯ ಪ್ರಕಾರ ನಾಳೆ ಭಾರಿ ಮಳೆಯಾಗುವ ಹಿನ್ನಲೆಯಲ್ಲಿ ನಾಳೆ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದರು.

About The Author

Leave a Reply

Your email address will not be published. Required fields are marked *