ಮುಂದುವರೆದ ವರುಣನ ಆರ್ಭಟ : ಮಾವಿನಸರ ,ಕೆದಲುಗುಡ್ಡೆಯಲ್ಲಿ ಮನೆ ಹಾನಿ, ಚಿಕ್ಕಜೇನಿಯಲ್ಲಿ ಮನೆ‌ಮೇಲೆ ಉರುಳಿದ ಮರ – ಶಾಸಕರ ಪರವಾಗಿ ಆರ್ಥಿಕ ನೆರವು | Rain

ಮುಂದುವರೆದ ವರುಣನ ಆರ್ಭಟ : ಮಾವಿನಸರ ,ಕೆದಲುಗುಡ್ಡೆಯಲ್ಲಿ ಮನೆ ಹಾನಿ, ಚಿಕ್ಕಜೇನಿಯಲ್ಲಿ ಮನೆ‌ ಮೇಲೆ ಉರುಳಿದ ಮರ – ಶಾಸಕರ ಪರವಾಗಿ ಆರ್ಥಿಕ ನೆರವು | Rain


ಮಲೆನಾಡಿನಲ್ಲಿ ವರುಣನ ಆರ್ಭಟ ಹೆಚ್ಚಾಗಿದ್ದು ಭಾರಿ ಮಳೆಗೆ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ವ್ಯಾಪ್ತಿಯಲ್ಲಿ ಮನೆ ಹಾನಿಯಾಗಿರುವ ಘಟನೆ ನಡೆದಿದೆ. ವಿಷಯ ತಿಳಿಯುತಿದ್ದಂತೆ ಶಾಸಕರ ಸೂಚನೆಯ ಮೇರೆಗೆ ಶಾಸಕರ ಆಪ್ತ ಕಾರ್ಯದರ್ಶಿ ಸಣ್ಣಕ್ಕಿ ಮಂಜು ಸ್ಥಳಕ್ಕೆ ತೆರಳಿ ಸಂತ್ರಸ್ಥರಿಗೆ ಧೈರ್ಯ ತುಂಬಿ ಶಾಸಕರ ಪರವಾಗಿ ಆರ್ಥಿಕ ನೆರವು ನೀಡುತಿದ್ದಾರೆ.

ಘಟನೆ 1:

ಬಾಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಕುಕ್ಕಲಳೆ(ಮಾವಿನಸರ) ಗ್ರಾಮದ ಸಾವಿತ್ರಮ್ಮ ರವರ ಮನೆ ಬಾರಿ ಮಳೆ ಯಿಂದಾಗಿ ಗೋಡೆ ಕುಸಿತವಾಗಿತ್ತು.


ಸ್ಥಳಕ್ಕೆ ಶಾಸಕರ ಆಪ್ತ ಕಾರ್ಯದರ್ಶಿ ಸಣ್ಣಕ್ಕಿ ಮಂಜು ಭೇಟಿ ನೀಡಿ ಸಾವಿತ್ರಮ್ಮ ಕುಟುಂಬದವರಿಗೆ ಸಾಂತ್ವನ ಹೇಳಿ ಶಾಸಕರ ಪರವಾಗಿ  ಆರ್ಥಿಕ ನೆರವು ನೀಡೀ ಧೈರ್ಯ ತುಂಬಿದರು.

ಈ ಸಂದರ್ಭದಲ್ಲಿ ರಿಪ್ಪನ್‌ಪೇಟೆ ಠಾಣೆಯ ಪಿಎಸ್ಐ ಪ್ರವೀಣ್ ಎಸ್ ಪಿ, ಕಂದಾಯ ಇಲಾಕೆಯ  ಅಂಬಿಕಾ ಮುಖಂಡರಾದ ಗಣಪತಿ.ಹೆಚ್.ಎಸ್, ಚಿಂತು, ರಾಘವೇಂದ್ರ , ಚೇತನ್ ದಾಸ್ ಹೊಸಮನೆ, ಇನ್ನಿತರರಿದ್ದರು

ಘಟನೆ 2 :

ರಿಪ್ಪನ್‌ಪೇಟೆ ಸಮೀಪದ ಬಾಳೂರು ಗ್ರಾಪಂ ವ್ಯಾಪ್ತಿಯ ಕೆದಲುಗುಡ್ಡೆ ಗ್ರಾಮದ ಯಶಸ್ವಿನಿ ಎಂಬುವವರ ಮನೆ ಭಾರಿ ಮಳೆಗೆ ಕುಸಿದು ಹಾನಿಯಾಗಿತ್ತು.


ಸ್ಥಳಕ್ಕೆ ಭೇಟಿ ನೀಡಿದ ಶಾಸಕರ ಆಪ್ತ ಕಾರ್ಯದರ್ಶಿ ಸಣ್ಣಕ್ಕಿ ಮಂಜು ಭೇಟಿ ನೀಡಿ ಯಶಸ್ವಿನಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿ ಧೈರ್ಯ ತುಂಬಿ ಶಾಸಕರ ಪರವಾಗಿ ಆರ್ಥಿಕ ನೆರವು ನೀಡಿದರು.

ಈ ಸಂಧರ್ಭದಲ್ಲಿ ಮುಖಂಡರಾದ ಗಣಪತಿ , ದಿವಾಕರ್ ಹಾಗೂ ಇನ್ನಿತರರಿದ್ದರು.

ಘಟನೆ 3 :

ರಿಪ್ಪನ್‌ಪೇಟೆ ಪಟ್ಟಣದ ಶಿವಮಂದಿರ ಮುಂಭಾಗದಲ್ಲಿ ಭಾರಿ ಮಳೆಗೆ ಗುರುವಾರ ರತ್ನಮ್ಮ ಎಂಬುವವರ ಮನೆ ಕುಸಿತವಾಗಿತ್ತು. ಈ ಹಿನ್ನಲೆಯಲ್ಲಿ ಸ್ಥಳಕ್ಕೆ ಭೇಟಿ ನೀಡಿದ ಶಾಸಕರ ಆಪ್ತ ಕಾರ್ಯದರ್ಶಿ ರತ್ನಮ್ಮ ನವರಿಗೆ ಸಾಂತ್ವಾನ ಹೇಳಿ ಧೈರ್ಯ ತುಂಬಿ ಶಾಸಕರ ಪರವಾಗಿ ಆರ್ಥಿಕ ನೆರವು ನೀಡಿದರು.


ಈ ಸಂಧರ್ಭದಲ್ಲಿ ಗ್ರಾಪಂ ಅಧ್ಯಕ್ಷೆ ಧನಲಕ್ಷ್ಮಿ ಗಂಗಾಧರ್ ,ಗ್ರಾಪಂ ಸದಸ್ಯ ಗಣಪತಿ ಗವಟೂರು ಹಾಗೂ ರಾಘು , ಚೇತನ್ ದಾಸ್ ಇದ್ದರು.

ಘಟನೆ 4 :

ಚಿಕ್ಕಜೇನಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಹೊಸಹಳ್ಳಿ ಗ್ರಾಮದ ರಾಘವೇಂದ್ರ ಭಂಡಾರಿ ಬಿನ್ ರಾಮಕೃಷ್ಣ ಭಂಡಾರಿ ಅವರ ಮನೆ ಮೇಲೆ ಬಾರಿ ಮಳೆಗೆ  ಬೃಹತ್ ಮರ ಬಿದ್ದು ಮನೆ ಹಾನಿಯಾಗಿತ್ತು.


ವಿಷಯ ತಿಳಿಯುತಿದ್ದಂತೆ ಸ್ಥಳಕ್ಕೆ ಶಾಸಕರ ಆಪ್ತ ಕಾರ್ಯದರ್ಶಿ ಸಣ್ಣಕ್ಕಿ ಮಂಜು ಭೇಟಿ ನೀಡಿ ರಾಘವೇಂದ್ರ ಭಂಡಾರಿ ಕುಟುಂಬದವರಿಗೆ ಸಾಂತ್ವನ ಹೇಳಿ ಶಾಸಕರ ಪರವಾಗಿ ಆರ್ಥಿಕ ನೆರವು ನೀಡಿ ಧೈರ್ಯ ತುಂಬಿದರು. ಕೂಡಲೇ ಜೆಸಿಬಿ ಮೂಲಕ ಮನೆ ಮೇಲೆ ಬಿದ್ದಿದ್ದ ಮರ ತೆರವುಗೊಳಿಸಲಾಯಿತು.


ಈ ಸಂದರ್ಭದಲ್ಲಿ ಅರಣ್ಯ ಅಧಿಕಾರಿಗಳಾದ ಶಶಿ ಗಾರ್ಡ್, ಚಿಕ್ಕಜೀನಿ ಗ್ರಾಮ ಪಂಚಾಯತ್  ಸದಸ್ಯರಾದ ವೀರಭದ್ರಪ್ಪ ಗೌಡ್ರು ಹೊಸಹಳ್ಳಿ, ಯೋಗೇಂದ್ರ ಭಂಡಾರಿ,MPM ವಾಚರ್ ಚಂದ್ರಪ್ಪ , ಯಲ್ಲಪ್ಪ, ಚೇತನ್ ದಾಸ್ ಹೊಸಮನೆ ಇನ್ನಿತರ ಉಪಸ್ಥಿತರಿದ್ದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕೋಡೂರಿನಲ್ಲಿ ಅಗ್ನಿ ಅವಘಡ: ಸರ್ವಸ್ವ ಕಳೆದುಕೊಂಡ ಕಾರ್ಮಿಕನಿಗೆ ಕಟ್ಟಡ ಕಾರ್ಮಿಕರ ಸಂಘದ ಆಸರೆ

ಕೋಡೂರಿನಲ್ಲಿ ಅಗ್ನಿ ಅವಘಡ: ಸರ್ವಸ್ವ ಕಳೆದುಕೊಂಡ ಕಾರ್ಮಿಕನಿಗೆ ಕಟ್ಟಡ ಕಾರ್ಮಿಕರ ಸಂಘದ ಆಸರೆ A fire caused by a…

2 hours ago

ಅರಸಾಳಿನಿಂದ ವಿಶ್ವ ವೇದಿಕೆಗೆ; ಕವನಶ್ರೀಗೆ ಸತತ ಮೂರನೇ ಗಿನ್ನಿಸ್ ಸಾಧನೆ

ಅರಸಾಳಿನಿಂದ ವಿಶ್ವ ವೇದಿಕೆಗೆ; ಕವನಶ್ರೀಗೆ ಸತತ ಮೂರನೇ ಗಿನ್ನಿಸ್ ಸಾಧನೆ Arasalu's Kavanasree H.M. earns two more Guinness…

2 hours ago

ಸರ್ಕಾರಿ ಜಾಗದಲ್ಲಿ ಖಾಸಗಿ ಬೇಲಿ; ಕಂದಾಯ ಅಧಿಕಾರಿಗಳಿಂದ ತೆರವು – ಹಕ್ಕುಪತ್ರ–9/11 ದಾಖಲೆ ಕುರಿತು ವಾಗ್ವಾದ

ರಿಪ್ಪನ್ ಪೇಟೆಯಲ್ಲಿ ಸರ್ಕಾರಿ ಜಾಗದ ಬೇಲಿ ತೆರವು; ಹಕ್ಕುಪತ್ರ–9/11 ದಾಖಲೆ ಕುರಿತು ವಾಗ್ವಾದ Revenue officials removed a fence…

4 hours ago

ರಿಪ್ಪನ್‌ಪೇಟೆಯಲ್ಲಿ ಮೋದಿ ಜನ್ಮದಿನಾಚರಣೆ : ವರಸಿದ್ದಿವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ

ರಿಪ್ಪನ್‌ಪೇಟೆಯಲ್ಲಿ ಮೋದಿ ಜನ್ಮದಿನಾಚರಣೆ : ವರಸಿದ್ದಿವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ Special pooja was offered at Varasiddhi…

24 hours ago

ಪ್ರಧಾನಿ ಮೋದಿ ಜನ್ಮದಿನ: ಶಿವಮೊಗ್ಗದಲ್ಲಿ ‘ಸೇವಾ ಸಂಕಲ್ಪ ಅಭಿಯಾನ’ಕ್ಕೆ ಚಾಲನೆ

ಪ್ರಧಾನಿ ಮೋದಿ ಜನ್ಮದಿನ: ಶಿವಮೊಗ್ಗದಲ್ಲಿ ‘ಸೇವಾ ಸಂಕಲ್ಪ ಅಭಿಯಾನ’ಕ್ಕೆ ಚಾಲನೆ BJP launches a month-long Seva Sankalpa Abhiyan…

1 day ago

ಮೋದಿ ಹುಟ್ಟುಹಬ್ಬ ‘ನಿರುದ್ಯೋಗಿಗಳ ದಿನ’ವಾಗಿ ಆಚರಣೆ; ಯುವ ಕಾಂಗ್ರೆಸ್ ಪ್ರತಿಭಟನೆ

ಮೋದಿ ಹುಟ್ಟುಹಬ್ಬ ‘ನಿರುದ್ಯೋಗಿಗಳ ದಿನ’ವಾಗಿ ಆಚರಣೆ; ಯುವ ಕಾಂಗ್ರೆಸ್ ಪ್ರತಿಭಟನೆ Youth Congress and NSUI workers in Shivamogga…

1 day ago