POSTMANNEWS

ನೈಜ ಸುದ್ದಿ ನೇರ ಬಿತ್ತರ..

ಭಾರಿ ಗಾಳಿ ಮಳೆ – ಹೊಸನಗರ ತಾಲೂಕಿನಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ | Rain

ಭಾರಿ ಗಾಳಿ ಮಳೆ – ಹೊಸನಗರ ತಾಲೂಕಿನಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಗಾಳಿಯೊಂದಿಗೆ ಸುರಿಯುತ್ತಿರುವ ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಜು‌.26 ಶುಕ್ರವಾರ ತಾಲೂಕಿನಾದ್ಯಂತ ಎಲ್ಲಾ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಿ ತಹಶೀಲ್ದಾರ್‌ ರಶ್ಮಿ ಹಾಲೇಶ್ ಆದೇಶಿಸಿದ್ದಾರೆ.

ತಾಲೂಕಿನಾದ್ಯಂತ ಅತಿಯಾದ ಮಳೆ ಹಾಗೂ ಗಾಳಿ ವ್ಯಾಪಕವಾಗಿ ಬೀಸುತ್ತಿರುವುದರಿಂದ ಮಕ್ಕಳ ಹಿತದೃಷ್ಟಿಯಿಂದ ಶುಕ್ರವಾರದಂದು ಎಲ್ಲಾ ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ, ಪದವಿ ಕಾಲೇಜು, ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಿಸಲಾಗಿದೆ. ಮಕ್ಕಳ ಬಗ್ಗೆ ಜಾಗ್ರತೆ ವಹಿಸಲು ಪಾಲಕರಲ್ಲಿ ವಿನಂತಿಸಲಾಗಿದೆ ಎಂದು ತಹಶೀಲ್ದಾರ್ ರಶ್ಮಿ ತಿಳಿಸಿದ್ದಾರೆ.

About The Author

Leave a Reply

Your email address will not be published. Required fields are marked *

Exit mobile version