ಮುಂದುವರಿದ ವರುಣನ ಆರ್ಭಟ – ಹೊಸನಗರ ತಾಲೂಕಿನಾದ್ಯಂತ ನಾಳೆ ಶುಕ್ರವಾರವು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ | Rain
ಹೊಸನಗರ ತಾಲೂಕಿನಾದ್ಯಂತ ವರುಣನ ಆರ್ಭಟದಿಂದ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ತಾಲೂಕಿನ ಎಲ್ಲಾ ಅಂಗನವಾಡಿಗಳು ಮತ್ತು ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ಜು.19ರ ಶುಕ್ರವಾರ ರಜೆಯನ್ನು ಘೋಷಿಸಿ ತಹಶೀಲ್ದಾರ್ ರಶ್ಮಿ ಹಾಲೇಶ್ ಆದೇಶ ಹೊರಡಿಸಿದ್ದಾರೆ.
ಹೊಸನಗರ ತಾಲೂಕಿನಲ್ಲಿ ಭಾರಿ ಮಳೆಯಿಂದ ಅನೇಕ ಕಡೆ ಅವಘಡಗಳು ಸಂಭವಿಸುತಿದೆ ಈ ಹಿನ್ನಲೆಯಲ್ಲಿ ಕಳೆದ ಮೂರು ದಿನಗಳಿಂದ ಸತತವಾಗಿ ರಜೆ ಘೋಷಿಸಲಾಗಿತ್ತು.
ಎಡೆಬಿಡದೆ ಸುರಿಯುತ್ತಿರುವ ಭಾರಿ ಮಳೆಯಿಂದ ನಾಳೆ ರಜೆಯನ್ನು ಘೋಷಿಸಿ ತಹಶೀಲ್ದಾರ್ ರಶ್ಮಿ ಹಾಲೇಶ್ ಆದೇಶ ಹೊರಡಿಸಿದ್ದಾರೆ.