Ripponpet | ಪುಟ್ಟ ಬಾಲಕನನ್ನು ಬಿಕ್ಷಾಟನೆಗೆ ಬಳಕೆ – ಠಾಣೆಗೆ ಕರೆಸಿ ವಾರ್ನಿಂಗ್ ನೀಡಿದ ಪಿಎಸ್‌ಐ ಪ್ರವೀಣ್
ರಿಪ್ಪನ್‌ಪೇಟೆ : ಪಟ್ಟಣದ ವಿನಾಯಕ ವೃತ್ತದಲ್ಲಿ ಪುಟ್ಟ ಬಾಲಕನನ್ನು ಬೀಕ್ಷಾಟನೆ ಮಾಡುವಂತೆ ಕೈಗೆ ತಟ್ಟೆಕೊಟ್ಟು ಬಲತ್ಕಾರದಿಂದ ಬಿಕ್ಷೆ ಬೇಡುವಂತೆ ಸ್ವಂತ ಅಣ್ಣನೇ ತಮ್ಮನನ್ನು ಬಿಕ್ಷಾಟನೆಗೆ ಬಳಸುತಿದ್ದ ಘಟನೆಗೆ ಪಟ್ಟಣದ ಪಿಎಸ್‌ಐ ಬಾಲಕನ ಅಣ್ಣನಿಗೆ ವಾರ್ನಿಂಗ್ ಕೊಟ್ಟು ಕಳಿಸಿದ ಘಟನೆ ನಡೆದಿದೆ.
ಇಂದು ಪಟ್ಟಣದ ಪಟ್ಟಣದ ವಿನಾಯಕ ವೃತ್ತದಲ್ಲಿ ವ್ಯಕ್ತಿಯೊಬ್ಬ ಪುಟ್ಟ ಬಾಲಕನನ್ನು ಭಿಕ್ಷಾಟನೆಗೆ ಅಣಿಗೊಳಿಸುತ್ತಿರುವುದನ್ನು ಸೂಕ್ಷö್ಮವಾಗಿ ಗಮನಿಸಿದ ಪತ್ರಕರ್ತ ರಫ಼ಿ ರಿಪ್ಪನ್‌ಪೇಟೆ ರವರು ಪಿಎಸ್‌ಐ ಪ್ರವೀಣ್ ಎಸ್ ಪಿ ರವರಿಗೆ ಮಾಹಿತಿ ನೀಡಿದ್ದಾರೆ.
ಕೂಡಲೇ ಬಿಕ್ಷಾಟನೆ ಮಾಡುತಿದ್ದ ಕಡೂರು ಗ್ರಾಮದ ಶೇಖರ್ ನನ್ನು ಠಾಣೆಗೆ ಕರೆಸಿ ಬಿಕ್ಷಾಟನೆ ಮಾಡುವುದು ಅಕ್ಷಮ್ಯ ಅಪರಾದ ಇನ್ನೂ ಮುಂದೆ ಹೀಗೆ ಮಾಡಿದರೆ ನಿಮ್ಮಗಳ ವಿರುದ್ದ ಕೇಸ್ ದಾಖಲಿಸಬೇಕಾಗುತ್ತದೆ, ಚಿಕ್ಕಮಕ್ಕಳನ್ನು ಬೀದಿ ಮೇಲೆ ಬಿಕ್ಷೆ ಬೇಡಿಸಿ ಆದರಿಂದ ಬಂದ ಹಣದಿಂದ ತುತ್ತಿನ ಚೀಲ ತುಂಬಿಸಿಕೊಳ್ಳುವುದು ತಪ್ಪು ಇನ್ನೊಂದು ಸಾರಿ ಹೀಗೆ ನಿಮ್ಮ ಮಕ್ಕಳು ಬಿಕ್ಷೆ ಬೇಡುವುದನ್ನು ಕಂಡರೆ ನಿರ್ಧಾಕ್ಷಣ್ಯವಾಗಿ ಕಾನೂನು ಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಿ ಇಂದಿನಿಂದಲೇ ಬಾಲಕನನ್ನು ಶಾಲೆಗೆ ಸೇರಿಸುವಂತೆ ಸೂಚಿಸಿ ಕಳುಹಿಸಿಕೊಟ್ಟಿದ್ದಾರೆ.
ಈ ಸಂಧರ್ಭದಲ್ಲಿ ಪೊಲೀಸ್ ಸಿಬ್ಬಂದಿಗಳಾದ ಉಮೇಶ್ , ಸಂತೋಷ್ ಕೊರವರ , ಚೆನ್ನಪ್ಪ , ಮಂಜುನಾಥ್ ಹಾಗೂ ಉಮೇಶ್ ಇದ್ದರು
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್