Ripponpete | ಗಾಂಜಾ ಸೇವಿಸಿ ಅಸಭ್ಯವಾಗಿ ವರ್ತಿಸುತಿದ್ದ ಯುವಕ ವಶಕ್ಕೆ – ಶೂಟ್ ಶೂರರಿಗೆ ಸಿಂಹಸ್ವಪ್ನವಾಗಿರುವ ಪಿಎಸ್‌ಐ ಪ್ರವೀಣ್ ಎಸ್ ಪಿ

Ripponpete | ಗಾಂಜಾ ಸೇವಿಸಿ ಅಸಭ್ಯವಾಗಿ ವರ್ತಿಸುತಿದ್ದ ಯುವಕ ವಶಕ್ಕೆ – ಶೂಟ್ ಶೂರರಿಗೆ ಸಿಂಹಸ್ವಪ್ನವಾಗಿರುವ ಪಿಎಸ್‌ಐ ಪ್ರವೀಣ್ ಎಸ್ ಪಿ


ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ಗಾಂಜಾ ಗಿರಾಕಿಗಳಿಗೆ ಸಿಂಹ ಸ್ವಪ್ನವಾಗಿರುವ ಪಿಎಸ್‌ಐ ಪ್ರವೀಣ್ ಎಸ್ ಪಿ ಗಾಂಜಾ ಗಿರಾಕಿಗಳ ಹೆಡೆಮುರಿ ಕಟ್ಟಲು ಟೊಂಕ ಕಟ್ಟಿ ನಿಂತಿದ್ದಾರೆ.

ಕೊಲೆ, ದರೋಡೆ, ಅತ್ಯಾಚಾರ, ಅಪಘಾತ ಸೇರಿದಂತೆ ಹಲವು ಅಪರಾಧ ಪ್ರಕರಣಗಳಲ್ಲಿ ಆರೋಪಿಗಳು ಗಾಂಜಾ ಸೇವಿಸಿ ಕೃತ್ಯವೆಸಗಿರುವುದು ಸಾಬೀತಾಗಿದೆ. ಅಪರಾಧ ಕೃತ್ಯಗಳಿಗೆ ಪ್ರೇರೇಪಿಸುವ ಗಾಂಜಾ ಚಟಕ್ಕೆ ಬಿದ್ದ ಯುವ ಸಮೂಹ ಹಾದಿ ತಪ್ಪುತ್ತಿರುವುದು ಸ್ಪಷ್ಟವಾಗಿದೆ. ಈ ಹಿನ್ನಲೆಯಲ್ಲಿ ಗಾಂಜಾ ಗಿರಾಕಿಗಳ ಬೆನ್ನತ್ತಿರುವ ಪಿಎಸ್‌ಐ ಪ್ರವೀಣ್ ಎಸ್ ಪಿ ಶೂಟ್ ಶೂರರು ಒಂದೋ ಎಲ್ಲಾ ಬಿಟ್ಟು ಶಿಸ್ತಿನಿಂದ ಇರಬೇಕು ಇಲ್ಲವೋ ಊರು ಬಿಟ್ಟು ತೊಲಗಲಿ ಎನ್ನುವ ನಿಟ್ಟಿನಲ್ಲಿ ಕಾರ್ಯಾಚರಣೆ ಕೈಗೊಂಡಿದ್ದಾರೆ.

ಈ ಕಾರ್ಯಾಚರಣೆಯ ಭಾಗವಾಗಿ ಸೋಮವಾರ ಬೆಳಿಗ್ಗೆ ರಿಪ್ಪನ್‌ಪೇಟೆಯ ಗಾಂಧಿನಗರ ಸರ್ಕಲ್ ನ ಬಳಿ ಗಾಂಜಾ ಸೇವನೆ ಮಾಡಿ ಅಸಭ್ಯವಾಗಿ ವರ್ತಿಸುತ್ತಿದ್ದ ಯುವಕನನ್ನು ಬಂಧಿಸಲಾಗಿದೆ.

ಗಾಂಧಿನಗರ ನಿವಾಸಿ ಮನು ಬಂಧಿತ ಆರೋಪಿಯಾಗಿದ್ದಾನೆ.

ವೈದ್ಯಕೀಯ ಪರೀಕ್ಷೆಯಿಂದ ಆರೋಪಿ ಗಾಂಜಾ ಸೇವನೆ ಮಾಡಿರುವುದು ದೃಡಪಟ್ಟಿರುವ ಹಿನ್ನಲೆಯಲ್ಲಿ ಮಾದಕ ದ್ರವ್ಯ ಕಾಯ್ದೆಯಡಿ ಆರೋಪಿಯನ್ನು ಬಂಧಿಸಲಾಗಿದೆ.

ಶನಿವಾರ ರಾತ್ರಿ ಗಾಂಧಿನಗರ ಸರ್ಕಲ್ ನಲ್ಲಿ ರಿಪ್ಪನ್‌ಪೇಟೆ ಪೊಲೀಸರು ಗಸ್ತು ಸಂಚರಿಸುತ್ತಿರುವಾಗ ಸಾರ್ವಜನಿಕ ಸ್ಥಳದಲ್ಲಿ ಅಸಭ್ಯವಾಗಿ ವರ್ತಿಸುತ್ತಿದ್ದವನನ್ನು ತಪಾಸಣೆಗೆ ಮೆಗಾನ್ ಆಸ್ಪತ್ರೆಗೆ ಕಳುಹಿಸಿಕೊಡಲಾಯಿತು, ಆತನು ಗಾಂಜಾ ಸೇವನೆ ಮಾಡಿರುವ ಬಗ್ಗೆ ವೈದಕೀಯ ಪರೀಕ್ಷೆಯಿಂದ ದೃಡಪಟ್ಟಿರುವುದರಿಂದ ಈತನ ವಿರುದ್ಧ ಮಾದಕ ದ್ರವ ಕಾಯ್ದೆ ಅಡಿ ಪ್ರಕರಣ ದಾಖಲಿಸಲಾಗಿದೆ.

ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Leave a Reply

Your email address will not be published. Required fields are marked *