w
Headlines
Home » Ripponpete | ಚಾಲಕನ ನಿಯಂತ್ರಣ ತಪ್ಪಿ 50 ಅಡಿ ಕಂದಕಕ್ಕೆ ಉರುಳಿದ ಕಾರು

Ripponpete | ಚಾಲಕನ ನಿಯಂತ್ರಣ ತಪ್ಪಿ 50 ಅಡಿ ಕಂದಕಕ್ಕೆ ಉರುಳಿದ ಕಾರು

Ripponpete | ಚಾಲಕನ ನಿಯಂತ್ರಣ ತಪ್ಪಿ 50 ಅಡಿ ಕಂದಕಕ್ಕೆ ಉರುಳಿದ ಕಾರು

ರಿಪ್ಪನ್‌ಪೇಟೆ : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು 50 ಅಡಿ ಆಳದ ಕಂದಕಕ್ಕೆ ಉರುಳಿಬಿದ್ದ ಘಟನೆ ಕೋಡೂರು ಸಮೀಪದ ಸುರುಳಿಕೊಪ್ಪ ಬಳಿಯಲ್ಲಿ ನಡೆದಿದೆ.

ರಿಪ್ಪನ್‌ಪೇಟೆ ಕಡೆಯಿಂದ ಹೊಸನಗರಕ್ಕೆ ತೆರಳುತಿದ್ದ ಕಾರು ಸುರುಳಿಕೊಪ್ಪ ಬಳಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ 50 ಅಡಿ ಆಳದ ಕಂದಕಕ್ಕೆ ಉರುಳಿಬಿದ್ದಿದೆ , ಕಾರಿನಲ್ಲಿ ಹೊಸನಗರ ಸಮೀಪದ ಹೆಗ್ಗೆರಸು ಗ್ರಾಮದ ಇಬ್ಬರು ಪ್ರಯಾಣಿಸುತಿದ್ದರು.

ಘಟನೆಯಲ್ಲಿ ಚಾಲಕ ಗಿರೀಶ್ ಮತ್ತು ಇನ್ನೊಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿದೆ , ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.

ಸ್ಥಳಕ್ಕೆ ರಿಪ್ಪನ್‌ಪೇಟೆ ಪಿಎಸ್‌ಐ ಪ್ರವೀಣ್ ಎಸ್ ಪಿ ಹಾಗೂ ಸಿಬ್ಬಂದಿಗಳು ತೆರಳಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.