January 11, 2026

ರಿಪ್ಪನ್‌ಪೇಟೆ ಪೊಲೀಸ್ ಇಲಾಖೆಯಿಂದ ಮಹತ್ವದ ಪ್ರಕಟಣೆ | Ripponpete police

ರಿಪ್ಪನ್‌ಪೇಟೆ ಪೊಲೀಸ್ ಇಲಾಖೆಯಿಂದ ಮಹತ್ವದ ಪ್ರಕಟಣೆ | Ripponpete police

ರಿಪ್ಪನ್‌ಪೇಟೆ : ಪಟ್ಟಣದ ವ್ಯಾಪ್ತಿಯಲ್ಲಿ ಇತ್ತೀಚೆಗೆ ಮನೆ ಕಳ್ಳತನವಾಗುತ್ತಿರುವ ಹಿನ್ನಲೆಯಲ್ಲಿ ಪಟ್ಟಣದ ಪಿಎಸ್‌ಐ ಪ್ರವೀಣ್ ಎಸ್ ಪಿ ಮಹತ್ವದ ಪ್ರಕಟಣೆಯನ್ನು ಹೊರಡಿಸಿದ್ದಾರೆ.

ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಹೆಚ್ಚಾಗಿ ಮನೆ ಕಳ್ಳತನ ಪ್ರಕರಣಗಳು ಹಾಗೂ ದೇವಸ್ಥಾನ ಕಳ್ಳತನ ಪ್ರಕರಣಗಳು ಸಂಭವಿಸುತ್ತಿದ್ದು ಅದರಲ್ಲೂ ಹೆಚ್ಚಾಗಿ ಒಂಟಿ ಮನೆಗಳು ಮತ್ತು ಮುಖ್ಯರಸ್ತೆಗೆ ಹೊಂದಿಕೊಂಡಂತಹ ಬೀಗ ಹಾಕಿದ ಮನೆಗಳಲ್ಲಿ ಕಳ್ಳತನವಾಗುತ್ತಿದ್ದು ಆದ್ದರಿಂದ ತಮ್ಮಮನೆಗಳಲ್ಲಿ ಹಣ ಆಭರಣ ಹಾಗೂ ಬೆಲೆಬಾಳುವ ವಸ್ತುಗಳನ್ನು ಮನೆಯಲ್ಲಿ ಇಟ್ಟು ಹೋಗದೆ ಬ್ಯಾಂಕ್‌ ಲಾಕರ್‌ ನಲ್ಲಿ ಇರಿಸುವುದು ಹಾಗೂ ಕಾಲ ಕಾಲಕ್ಕೆ ದೇವಸ್ಥಾನದ ಹುಂಡಿ ಹಣವನ್ನು ತೆಗೆಯುವುದು ಮುನ್ನೆಚ್ಚರಿಕೆ ಕ್ರಮವಾಗಿ ಸಿಸಿ ಕ್ಯಾಮರಾ ಅಳವಡಿಕೆ ಮತ್ತು ಮನೆಯ ಸುತ್ತಮುತ್ತಲು ಬೆಳಕಿನ ವ್ಯವಸ್ಥೆ ಮಾಡಬೇಕು ಎಂದು ಸೂಚಿಸಿದ್ದಾರೆ.

ಗ್ರಾಮದಲ್ಲಿ ಅನುಮಾನಾಸ್ಪದ ವ್ಯಕ್ತಿಗಳು ಕಂಡುಬಂದಲ್ಲಿ ರಿಪ್ಪನ್‌ಪೇಟೆ ಪೊಲೀಸ್ ಠಾಣೆಗೆ ಅಥವಾ 112 ಸಹಾಯವಾಣಿಗೆ ಕರೆಮಾಡಿ ತಿಳಿಸಲು ಸೂಚಿಸಿದೆ.

About The Author

Leave a Reply

Your email address will not be published. Required fields are marked *

Exit mobile version